ಜಿಂದಾಲ್ ನೌಕರರು-ವಾಹನ ಪ್ರವೇಶಕ್ಕೆ ನಿರ್ಬಂಧ
ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಸೂಚನೆ ನೀಡಲು ಮನವಿ ಕುಡಿತಿನಿ ಪಪಂ ನಿವಾಸಿಗಳಿಂದ ಭಿತ್ತಿ ಪತ್ರಗಳ ಚಳವಳಿ-ಮನವಿ
Team Udayavani, Jun 13, 2020, 4:26 PM IST
ಕುರುಗೋಡು: ಕುಡುತಿನಿ ಭಾಗದ ಜಿಂದಾಲ್ ನೌಕರರು ಮತ್ತು ವಾಹನಗಳಿಗೆ ಪಟ್ಟಣದೊಳಗೆ ಪ್ರವೇಶಿಸದಂತೆ ಸಾರ್ವಜನಿಕರು ನಿರ್ಬಂಧ ವಿಧಿಸಿರುವುದು.
ಕುರುಗೋಡು: ಸಮೀಪದ ಕುಡಿತಿನಿ ಪಟ್ಟಣದ ಹಲವು ಜಿಂದಾಲ್ ಕಂಪನಿಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ನಾಗರಿಕರು ಜಿಂದಾಲ್ ನೌಕರರು ಮತ್ತು ಕಾರ್ಖಾನೆ ವಾಹನಗಳಿಗೆ ಪಟ್ಟಣದೊಳಗಡೆ ಪ್ರವೇಶ ಮಾಡದಂತೆ ಶುಕ್ರವಾರದಿಂದ ನಿರ್ಬಂಧ ವಿಧಿಸಿದ್ದಾರೆ.
ಜಿಂದಾಲ್ ಸಂಸ್ಥೆಯಲ್ಲಿ ಪ್ರಸ್ತುತ 101 ಕೋವಿಡ್ ಸೋಂಕು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕರು ಪಟ್ಟಣವನ್ನು ಕೋವಿಡ್ ಸೋಂಕಿನಿಂದ ಮುಕ್ತ ಮಾಡಲು ಸ್ವಯಂ ಪ್ರೇರಣೆಯಿಂದ ಮುನ್ನಚ್ಚೆರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಇಲ್ಲಿನ ನಿವಾಸಿ ವಿ.ರಾಮು ಮಾತನಾಡಿ, ಪಟ್ಟಣದಲ್ಲಿನ ಜನರನ್ನು ಮತ್ತು ನಮ್ಮ ಕುಟುಂಬಗಳ ಅಮೂಲ್ಯ ಜೀವ ಉಳಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಅಲ್ಲದೇ ಯಾವುದೇ ಕಾರಣಕ್ಕೂ ನೌಕರರನ್ನು ಮತ್ತು ಅವರ ಕುಟುಂಬಗಳನ್ನು ಹೊರಗಡೆ ಬಿಡಬಾರದು ಹಾಗೂ ಜಿಲ್ಲಾಡಳತವು ಸಹ ಕೋವಿಡ್ ತೆಡೆಯಲು ಸಂಸ್ಥೆಗೆ ಸೂಕ್ತ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.