ಕೊಪ್ಪಳದಲ್ಲಿ ನಾಲ್ವರು ಸೋಂಕಿನಿಂದ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ


Team Udayavani, Jun 13, 2020, 8:38 PM IST

ಕೊಪ್ಪಳದಲ್ಲಿ ನಾಲ್ವರು ಸೋಂಕಿನಿಂದ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಬಳಲಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಗುಣಮುಖರಾದ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಯ ವೈದ್ಯರ ತಂಡ ಗುಣಮುಖರಾದ ಜನರಿಗೆ ಶನಿವಾರ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟಿತು. ಜಿಲ್ಲೆಯಲ್ಲು ಒಟ್ಟು ಈ ವರೆಗೂ ಎಂಟು ಜನರು ಸೋಂಕಿನಿಂದ ಗುಣಮುಖರಾದಂತಾಗಿದೆ.

ಜಿಲ್ಲೆಯಲ್ಲಿ ಈಚೆಗೆ ವಿವಿಧ ಹಂತದಲ್ಲಿ 13 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಅವರ ಬಗ್ಗೆ ನಿಗಾ ವಹಿಸಿದ್ದ ಜಿಲ್ಲಾ ಕೋವಿಡ್ ಆಸ್ಪತ್ರೆಯ ವೈದ್ಯರ ತಂಡವು ನಿತ್ಯವೂ ಅವರ ಆರೋಗ್ಯದಲ್ಲಿ ಏರಿಳಿತಗಳ ಕುರಿತು ಗಮನ ಹರಿಸಿತ್ತು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಬಿ.ದಾನರಡ್ಡಿ ಅವರ ನೇತೃತ್ವದ ವೈದ್ಯರ ತಂಡವು ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುತ್ತಿದೆ. ಶನಿವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಪಿ5647, ಪಿ 5835, ಪಿ 5836, ಪಿ 5837 ಎನ್ನವು ನಾಲ್ವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಅವರ ವರದಿ ನೆಗಟಿವ್ ಬಂದಿತು. ನಾಲ್ವರಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಪುರುಷರಾಗಿದ್ದು ವೈದ್ಯರ ತಂಡವು ನಾಲ್ವರನ್ನು ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟಿತು.

ಗುಣಮುಖರಾದ ವ್ಯಕ್ತಿಗಳು 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೈನ್‌ನಲ್ಲಿ ಇರಬೇಕು. ಹೊರಗೆ ಸುತ್ತಾಟ ನಡೆಸುವುಂತಿಲ್ಲ. ಏಲ್ಲಿಯೂ ಪ್ರವಾಸ, ಪ್ರಯಾಣ ಕೈಗೊಳ್ಳುವಂತಿಲ್ಲ. ಆರೋಗ್ಯದ ವಿಷಯದ ಕುರಿತು ಆಗಾಗ ವೈದ್ಯರ ತಂಡಕ್ಕೆ ಮಾಹಿತಿ ನೀಡಬೇಕು ಎನ್ನುವ ಕೆಲವೊಂದು ನಿಬಂಧನೆ ಹಾಕಿ ಬೀಳ್ಕೊಟ್ಟಿತು.

8 ಜನರು ಬಿಡುಗಡೆಯಾದಂತಾಯ್ತು :
ಜಿಲ್ಲೆಯಲ್ಲಿ ಈ ವರೆಗೂ 13 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಕಳೆದ ಕೆಲವು ದಿನಗಳ ಹಿಂದೆ ನಾಲ್ಕು ಜನರು ಗುಣಮುಖರಾದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಶನಿವಾರ ಮತ್ತೆ 4 ಜನರು ಅತಿ ಬೇಗವಾಗಿ ಗುಣಮುಖರಾಗಿದ್ದರಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ಈ ವರೆಗೂ 8 ಜನರು ಬಿಡುಗಡೆಯಾದಂತಾಗಿದ್ದು, ಇನ್ನೂ 5 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಟಾಪ್ ನ್ಯೂಸ್

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.