ಶ್ರಮಿಕ ರೈಲಿನಿಂದ 3.32 ಲಕ್ಷ ವಲಸಿಗರು ಪ್ರಯಾಣ
Team Udayavani, Jun 14, 2020, 6:17 AM IST
ಹುಬ್ಬಳ್ಳಿ: ಲಾಕ್‌ಡೌನ್‌ನಿಂದ ಸಿಲುಕೊಂಡಿದ್ದವರನ್ನು 229 ಶ್ರಮಿಕ ರೈಲುಗಳ ಮೂಲಕ 3.32ಲಕ್ಷ ವಲಸಿಗರನ್ನು ಅವರ ರಾಜ್ಯಗಳಿಗೆ ತಲುಪಿಸುವ ಕಾರ್ಯ ನೈರುತ್ಯ ರೈಲ್ವೆ ವಲಯದಿಂದ ನಡೆದಿದೆ.
ಶ್ರಮಿಕ ರೈಲುಗಳ ಮೂಲಕ ವಲಸಿಗರನ್ನು ಅವರ ರಾಜ್ಯಗಳಿಗೆ ತಲುಪಿಸಲು ಕೇಂದ್ರ ಸರಕಾರ ಸೂಚನೆ ಹಾಗೂ ರಾಜ್ಯ ಸರಕಾರಗಳ ಬೇಡಿಕೆ ಮೇರೆಗೆ ಮೊದಲ 13 ದಿನಗಳಲ್ಲಿ ಒಂದು ಲಕ್ಷ ಜನರನ್ನು ಅವರ ರಾಜ್ಯಗಳಿಗೆ ತಲುಪಿಸುವ ಕಾರ್ಯ ಮಾಡಲಾಯಿತು. ನಂತರ ಒಂದು ಲಕ್ಷ ಜನರನ್ನು 6 ದಿನಗಳಲ್ಲಿ ಅವರ ಸ್ಥಳಗಳಿಗೆ ಕಳುಹಿಸಲಾಯಿತು.
ಶನಿವಾರ ಕೂಡ ಒಂದು ಶ್ರಮಿಕ ರೈಲಿನ ಮೂಲಕ ಬೆಂಗಳೂರಿನಿಂದ ಗೌಹಾಟಿಗೆ ವಲಸಿಗರನ್ನು ಕಳುಹಿಸಲಾಯಿತು. ಇಲ್ಲಿಯವರೆಗೆ 17 ರಾಜ್ಯಗಳಿಗೆ ಶ್ರಮಿಕ ರೈಲುಗಳು ಸಂಚಾರ ಮಾಡಿವೆ. 1.07 ಲಕ್ಷ ಜನರು 73 ರೈಲುಗಳ ಮೂಲಕ ಬಿಹಾರ, 51 ರೈಲುಗಳ ಮೂಲಕ 73,498 ಜನರು ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ. ಪಶ್ಚಿಮ ಬಂಗಾಳ, ಜಾರ್ಖಂಡ್, ಓರಿಸ್ಸಾ, ಅಸ್ಸಾಂ, ರಾಜಸ್ಥಾನ, ಮಧ್ಯಪ್ರದೇಶ, ತ್ರಿಪುರಾ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಮಣಿಪುರ, ಛತ್ತಿಸಗಡ, ಹಿಮಾಚಲಪ್ರದೇಶ, ಕೇರಳ, ಮಿಜೋರಾಂ, ನಾಗಾಲ್ಯಾಂಡ್ ರಾಜ್ಯಗಳಿಗೆ ಹುಬ್ಬಳ್ಳಿ, ಬೆಂಗಳೂರು, ಮೈಸೂರ, ಹಾಸನ, ಅಶೋಕಪುರಂ, ಹೊಸಪೇಟೆ, ಬಳ್ಳಾರಿ, ಕೊಪ್ಪಳ ಸೇರಿದಂತೆ ಇನ್ನಿತರೆ ಪ್ರದೇಶಗಳಿಂದ ಸಂಚಾರ ಮಾಡಿವೆ ಎಂದು ನೈರುತ್ಯ ರೈಲ್ವೆ ವಲಯದಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.