ತೋಟಿ ಏತನೀರಾವರಿ ಯೋಜನೆ ಶೀಘ್ರ ಪೂರ್ಣ
Team Udayavani, Jun 14, 2020, 6:15 AM IST
ಚನ್ನರಾಯಪಟ್ಟಣ: ತೋಟಿ ಏತನೀರಾವರಿ ಯೋಜನೆ ಶೀಘ್ರದಲ್ಲಿ ಪೂರ್ಣಗೊಳ್ಳಲಿದ್ದು, ಮುಂದಿನ ಬೇಸಿಗೆ ಒಳಗೆ ಕೆರೆ ಕಟ್ಟೆ ತುಂಬಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಭರವಸೆ ನೀಡಿದರು. ಪಟ್ಟಣ ಹೊರ ವಲಯದಲ್ಲಿ ಅಮಾನಿಕೆರೆ ಬಳಿ ನಡೆಯುತ್ತಿರುವ ಜಾಕ್‌ವೆಲ್ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು, ಕೆರೆಯಿಂದ 16 ಕಿ.ಮೀ. ಪೈಪ್ ಲೈನ್ ಕೆಲಸದಲ್ಲಿ 14 ಕಿ.ಮೀ. ಕೆಲಸ ಪೂರ್ಣಗೊಂಡಿದೆ.
ದಿಂಡಗೂರು ಬಳಿ ರೈತರುಅ ಕೃಷಿ ಮಾಡಿರುವುದರಿಂದ ಬಾಕಿ ಉಳಿದಿದೆ. ಜಾಕ್‌ವೆಲ್ ಕೆಲಸ ತಳಪಾಯ ಹಾಕಲಾಗುತ್ತಿದ್ದು, ಮೂರು ತಿಂಗಳಲ್ಲಿ ಮುಕ್ತಾಯ ಹಂತ ತಲುಪಲಿದೆ ಎಂದು ಹೇಳಿದರು. 885 ಎಚ್‌ಪಿ ಸಾಮರ್ಥದ ಮೂರು ಯಂತ್ರದಲ್ಲಿ ನೀರತ್ತಲಾಗುವುದು. ಒಂದು ಯಂತ್ರವನ್ನು ಕಾಯ್ದಿರಿಸ ಲಾಗುವುದು. ನೀರು ಹೊರ ಬೀಳುವ ಜಾಗದಿಂದ ವಿತರಣಾ ಪೈಪ್‌ಲೈನ್ ಕಾಮಗಾರಿಯನ್ನು ನಾಲ್ಕು ತಿಂಗಳಲ್ಲಿ ಮುಗಿಸಲಾಗುವುದು.
ಯಂತ್ರಾಗಾರಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಈಗಾಗಲೇ ಸರ್ವೆ ಕಾರ್ಯ ಮುಕ್ತಾಯವಾಗಿದೆ. ಯಂತ್ರಾಗಾರದ ಕಟ್ಟಡ ಕಾಮಗಾರಿ ಮುಗಿಯುವದರೊಳಗೆ ವಿದ್ಯುತ್ ಕಂಬ ಅಳವಡಿಸಲಾಗುವುದು ಎಂದು ತಿಳಿಸಿದರು. ಯಂತ್ರಾಗಾರ ಕಟ್ಟಡ ನಿರ್ಮಾಣಕ್ಕೆ ಬಿದರೆ ವಿಜಯಮ್ಮ ಅವರು ಒಂದೂವರೆ ಎಕರೆ ಕೃಷಿ ಭೂಮಿ ನೀಡಿದ್ದು, ಅವರಿಗೆ ಭೂ ಪರಿಹಾರ ಕೊಡಿಸಲಾಗು ವುದು. ಪೈಪ್‌ಲೈನ್‌ಗೆ ಭೂಮಿ ನೀಡಿರುವ ರೈತರಿಗೂ ಸರ್ಕಾರದಿಂದ ಪರಿಹಾರ ಕೊಡಿಸಲಾಗುವುದು.
ನುಗ್ಗೇ ಹಳ್ಳಿ ಏತನೀರಾವರಿ ಯೋಜನೆಗೆ ಭೂಮಿ ನೀಡಿದ ರೈತರಿಗೆ ಈಗಾಗಲೆ 77 ಲಕ್ಷ ಪರಿಹಾರ ಕೊಡಿಸಲಾಗಿದೆ ಎಂದರು. ಹಿರೀಸಾವೆ ಏತನೀರಾವರಿ ಯೋಜನೆ ನಡೆಯುತ್ತಿದ್ದು ಜುಟ್ಟನಹಳ್ಳಿ ಭಾಗಕ್ಕೆ ಶೀಘ್ರದಲ್ಲಿ ನೀರು ಹರಿಸಲಾಗುವುದು ಎಂದರು. ನೀರಾವರಿ ಇಲಾಖೆ ಅಧಿಕಾರಿ, ಕಾಮಗಾರಿ ನಡೆಸುತ್ತಿರುವ ಖಾಸಗಿ ಸಂಸ್ಥೆ ಅಭಿಯಂತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.