ಶಾಲೆ ಪುನರಾರಂಭಿಸಲು ಅಭಿಪ್ರಾಯ ಸಂಗ್ರಹ
Team Udayavani, Jun 14, 2020, 7:50 AM IST
ಚಡಚಣ: ರಾಜ್ಯದಲ್ಲಿ ಶಾಲೆ-ಕಾಲೇಜುಗಳನ್ನು ಪುನರಾರಂಭಿಸುವ ವಿಚಾರದಲ್ಲಿ ಪಾಲಕರ ಅಭಿಪ್ರಾಯ ಪಡೆಯುವಂತೆ ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಈ ಹಿನ್ನಲೆಯಲ್ಲಿ ಶಾಲೆಗಳನ್ನು ಪುನರಾರಂಭಿಸಲು ಎಸ್‌ಡಿಎಂಸಿ ಹಾಗೂ ಪಾಲಕರ ಅಭಿಪ್ರಾಯ ಸಂಗ್ರಹಣಾ ಸಭೆಯನ್ನು ನಡೆಸುವಂತೆ ಶಾಲೆಗಳಿಗೆ ತಿಳಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಎಸ್‌ಡಿಎಂಸಿ ಹಾಗೂ ಪಾಲಕರ ಸಭೆ ಕರೆಯಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಅಪ್ಪಾಸಾಬ ಆದಿಗೊಂಡೆಯವರು ವಹಿಸಿಕೊಂಡಿದ್ದರು. ಸಭೆಯಲ್ಲಿ ಚರ್ಚಿಸಿ ನಿರ್ಣಯ ತಗೆದುಕೊಳ್ಳಬಹುದಾದ ವಿಷಯಗಳ ಕುರಿತು ಎಸ್.ಆಯ್.ಕುಂಬಾರರವರು ತಿಳಿಸಿದರು. ಪ್ರಸ್ತುತ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಎಂದಿನಂತೆ ತರಗತಿ ಆರಂಭಿಸುವುದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಾಳಿ ಪದ್ಧತಿಯಲ್ಲಿ ಶಾಲೆಗಳನ್ನು ನಡೆಸುವುದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಾಲೆಯ ಒಟ್ಟು ತರಗತಿಗಳನ್ನು ಎರಡು ವಿಭಾಗಗಳಾಗಿ ವಿಂಗಡಿಸಿ ದಿನ ಬಿಟ್ಟು ದಿನ ಶಾಲೆ ನಡೆಸುವ ಬಗ್ಗೆ ಹಾಗೂ ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ತಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಪಾಲಕರ ಮತ್ತು ಎಸ್‌ಡಿಎಂಸಿಯವರುಗಳ ಅಭಿಪ್ರಾಯ ಸಂಗ್ರಹಿಸಲಾಯಿತು.
ಪ್ರೌಢ ಶಾಲೆಯ ಮುಖ್ಯಗುರು ವಿ.ಎಂ. ಮಾದರ, ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಆರ್.ಎಸ್.ಬಿಳೂರ, ಎಸ್‌ಡಿಎಂಸಿ ಉಪಾಧ್ಯಕ್ಷರಾದ ಮದಗೊಂಡ ನಡಗೇರಿ, ಸೇಕವ್ವ ಹಾಲಳ್ಳಿ, ಭೀಮಣ್ಣಾ ಬಂಡಗರ, ಸಿದ್ದಪ್ಪ ಪೂಜಾರಿ, ಪ್ರಭುಲಿಂಗ ಮೇತ್ರೆ, ಮಲ್ಲು ಮಾನೆ, ಮಲ್ಲಿಕಾರ್ಜುನ ಮಳಾಬಗಿ, ಭೀರಪ್ಪ ಪಡೂಲ್ಕರ್ ಹಾಗೂ ಶಾಲಾ ಶಿಕ್ಷಕರುಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.