ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ
Team Udayavani, Jun 14, 2020, 9:03 AM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಬೇಕು. 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರಾವಸ್ಥೆ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾಕಾರಿ ಆರ್. ವಿನೋತ್ ಪ್ರಿಯಾ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಆಟೋ ಮೂಲಕ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಾಲಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರಿಗೆ ದಂಡ ಹಾಗೂ 2 ವರ್ಷದವರೆಗೆ ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ. ತಪ್ಪಿತಸ್ಥ ಮಾಲೀಕರ ವಿರುದ್ಧ ಪೊಲೀಸ್ ಇಲಾಖೆಯಿಂದ ಎಫ್‌ಐಆರ್ ಸಹ ದಾಖಲಿಸಬಹುದು. ಕೆಲಸಕ್ಕೆ ಸೇರಿಸಿದ ಪಾಲಕರ ಮೇಲೆಯೂ ಮೊಕದ್ದಮೆ ದಾಖಲಿಸಬಹುದು ಎಂದರು.
ಮಕ್ಕಳನ್ನು ಕೋವಿಡ್-19 ಸಾಂಕ್ರಾಮಿಕ ರೋಗದಿಂದ ರಕ್ಷಣೆ ಮಾಡಬೇಕು. ಈ ಕುರಿತು ಹಲವಾರು ಸೂಚನೆ ಬಾರಿ ಸೂಚನೆ ನೀಡಿ ಜಾಗೃತಿ ಮೂಡಿಸಲಾಗಿದೆ. ಆದರೂ ಕೆಲವು ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ 10 ವರ್ಷದ ಒಳಗಿನ ಮಕ್ಕಳಿಗೆ ಕೊರೊನಾ ಹೆಚ್ಚು ಬಾ ಧಿಸುವ ಸಾಧ್ಯತೆ ಇದೆ. ಹಾಗಾಗಿ ಪೋಷಕರು ಹೆಚ್ಚು ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ಉಪವಿಭಾಗಾ ಧಿಕಾರಿ ಪ್ರಸನ್ನ, ತಹಶೀಲ್ದಾರ್ ಜೆ.ಸಿ. ವೆಂಕಟೇಶಯ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿನುತಾ, ವಾರ್ತಾಧಿಕಾರಿ ಬಿ. ಧನಂಜಯಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.