ಜನೌಷಧಿ ಕೇಂದ್ರ ಸ್ಥಗಿತ; ರೋಗಿಗಳ ಪರದಾಟ
Team Udayavani, Jun 14, 2020, 11:55 AM IST
ಕುಂದಗೋಳ: ಕೋವಿಡ್-19ನಿಂದ ಉದ್ಯೋಗ ದೊರೆಯದೆ ಆರ್ಥಿಕ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಈಗ ಗಾಯದ ಮೇಲೆ ಬರೆ ಎಳೆದಿರುವಾಗಲೇ ಪಟ್ಟಣದಲ್ಲಿರುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವು ಮುಚ್ಚಿದ್ದರಿಂದ ಬಡ ರೋಗಿಗಳು ಪರದಾಡುವಂತಾಗಿದೆ.
ಈ ಕೇಂದ್ರವು ಬಡ ರೋಗಿಗಳಿಗೆ ಕಲ್ಪವೃಕ್ಷವಾಗಿತ್ತು. ಮಾರುಕಟ್ಟೆಯಲ್ಲಿರುವ ಔಷಧಿ ಅಂಗಡಿಗಳಲ್ಲಿ ದುಬಾರಿ ಬೆಲೆ ತೆತ್ತು ಔಷಧಿ ಖರೀದಿಸಲಾಗದ ಬಹುತೇಕರು ಈ ಕೇಂದ್ರವನ್ನೇ ಅವಲಂಬಿಸಿದ್ದರು. ಶುಗರ್, ಬಿಪಿ ಇರುವ ರೋಗಿಗಳು ನಿತ್ಯ ಔಷಧಿ ಸೇವಿಸಬೇಕಿರುವುದರಿಂದ ಇದೇ ಕೇಂದ್ರದಲ್ಲಿ ಕಡಿಮೆ ದರದಲ್ಲಿ ಔಷಧಿ ಖರೀದಿಸುತ್ತಿದ್ದರು. ಇದೀಗ ಕಳೆದ ಮೂರು ದಿನಗಳಿಂದ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ರಾಜೀನಾಮೆ ನೀಡಿದ್ದರಿಂದ ಈ ಕೇಂದ್ರ ಸ್ಥಗಿತಗೊಂಡಿದೆ. ಜನೌಷಧಿ ಕೇಂದ್ರ ತೆರೆಯದೇ ಇರುವುದರಿಂದ ಬಹುತೇಕ ಜನರು ಹುಬ್ಬಳ್ಳಿ ಮತ್ತಿತರ ಕಡೆಗೆ ಈ ಕೇಂದ್ರಕ್ಕೆ ತೆರಳಿ ಔಷಧಿ ಪಡೆಯಲಾಗದೇ ಪರದಾಡುವಂತಾಗಿದೆ. ಮಾರುಕಟ್ಟೆಯಲ್ಲಿರುವ ಅಂಗಡಿಗಳಿಗೆ ತೆರಳಿ ಹೆಚ್ಚು ಹಣ ನೀಡಿ ಔಷಧ ಖರೀದಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಬಸಾಪೂರದ ಶಿವಪ್ಪ ಹರಿಜನ. ಬಡ ರೋಗಿಗಳಿಗೆ ಈ ಜನೌಷಧಿ ಕೇಂದ್ರ ಉಪಯುಕ್ತವಾಗಿದೆ. ಈ ಭಾಗದ ಶಾಸಕರು, ಸಂಸದರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ಕೇಂದ್ರ ತೆರೆಯಲು ಪ್ರಯತ್ನಿಸಬೇಕಿದೆ.
ಇಲ್ಲಿರುವ ಸಿಬ್ಬಂದಿ ರಾಜೀನಾಮೆ ನೀಡಿದ್ದರಿಂದ ಭಾರತೀಯ ಜನೌಷಧಿ ಕೇಂದ್ರವು ಸ್ಥಗಿತವಾಗಿದೆ. ಈ ಕೇಂದ್ರವನ್ನು ಎಂಎಸ್‌ಐಎಲ್‌ನವರು ನಿರ್ವಹಿಸುತ್ತಿದ್ದು ಅವರಿಗೆ ಈಗಾಗಲೇ ಈ ಕುರಿತು ಮಾತನಾಡಿದ್ದೇನೆ. ಸಿಬ್ಬಂದಿಯನ್ನು ನೇಮಿಸುತ್ತೇವೆಂದು ಹೇಳಿದ್ದಾರೆ. ಡಾ|ಭಾಗೀರಥಿ, ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ.
–ಶೀತಲ್ ಎಸ್ ಮುರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.