ಸೃಷ್ಟಿಯ ಉಳಿವು ಮನುಕುಲಕ್ಕೆ ವರ: ಸಜ್ಜನ


Team Udayavani, Jun 14, 2020, 1:22 PM IST

ಸೃಷ್ಟಿಯ ಉಳಿವು ಮನುಕುಲಕ್ಕೆ ವರ: ಸಜ್ಜನ

ಬಾಗಲಕೋಟೆ: ಸೃಷ್ಟಿಯ ಜೀವ ವೈವಿಧ್ಯತೆ ಕುರಿತು ಸೃಷ್ಟಿಯು ಇಡೀ ಮನುಕುಲಕ್ಕೆ ದೇವರು ನೀಡಿದ ವರದಾನ. ಮನುಷ್ಯ ಸೃಷ್ಟಿಯ ಕೂಸು. ಕೋಟ್ಯಂತರ ವರ್ಷಗಳಿಂದ ತನ್ನ ಮಕ್ಕಳನ್ನು ಈ ಸೃಷ್ಟಿ ಜತನದಿಂದ ಕಾಪಾಡುತ್ತಾ ಬಂದಿದೆ. ಕಾಲಕಾಲಕ್ಕೆ ಎಲ್ಲವನ್ನೂ ನೀಡುತ್ತಿದೆ ಎಂದು ಬಿವಿವಿ ಸಂಘದ ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಹೇಳಿದರು.

ನಗರದ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ನಿಟ್ಟಿನಲ್ಲಿ ಮನುಷ್ಯನಷ್ಟೆ ಅಲ್ಲ ತನ್ನ ಮಡಿಲಲ್ಲಿರುವ ಎಂಭತ್ನಾಲ್ಕು ಲಕ್ಷ ಜೀವರಾಶಿಗಳಿಗೆ ಇದೆ ಪ್ರೀತಿಯನ್ನು ತೋರಿದೆ. ತನ್ನ ಮಡಿಲ ಮಕ್ಕಳು ಆರೋಗ್ಯಕರವಾಗಿ ಬದುಕಬೇಕೆಂಬುದೆ ಈ ಅಮ್ಮನ ಆಶೆ. ಈ ಆಶಯದಂತೆ ಎಲ್ಲ ಜೀವಿಗಳು ಅತ್ಯಂತ ವೈವಿಧ್ಯತೆಯಿಂದ ಸಹಕಾರ ತತ್ವದಿಂದ ಬದುಕುತ್ತ ಬಂದಿವೆ ಎಂದರು.

ಆದರೆ, ವೈಜ್ಞಾನಿಕ ಜಗತ್ತಿನಲ್ಲಿ ಬದುಕುತ್ತಿರುವ ಮನುಷ್ಯ ಮಾತ್ರ ತನ್ನ ಸ್ವಾರ್ಥದಿಂದ ಸೃಷ್ಟಿಯ ಮೇಲೆ ಸವಾರಿ ಮಾಡಿ, ತಾನು ಗೆದ್ದೆ ಎಂಬ ದುರಹಂಕಾರದಿಂದ ಈ ಸೃಷ್ಟಿಯ ಜೀವಸರಪಳಿ ತುಂಡರಿಸಿ ಪ್ರಕೃತಿಯನ್ನು ವಿಕೃತಿಗೊಳಿಸಿದ್ದಾನೆ. ಇದು ಮನುಕುಲದ ಅಂತ್ಯ ಎಂಬುದನ್ನು ಅರಿತುಕೊಳ್ಳಬೇಕಾಗಿದೆ. ಇದರ ಪರಿಣಾಮಗಳು ಅತ್ಯಂತ ಭಯಾನಕವಾದುದು. ಅದನ್ನು ಇದೀಗ ಕೊರೊನಾ ಮಹಾಮಾರಿಯಿಂದ ಅನುಭವಿಸುತ್ತಿದ್ದೇವೆ ಎಂದು ತಿಳಿಸಿದರು.

ಸೃಷ್ಟಿಯ ಈ ವೈವಿಧ್ಯತೆಯನ್ನು ಅರ್ಥ ಮಾಡಿಕೊಂಡು, ಎಲ್ಲರೊಳಗೊಂದಾಗಿ ಬದುಕುವುದನ್ನು ಕಲಿಯಬೇಕಾಗಿದೆ. ನಮ್ಮ ಭೋಗದ ಬದುಕಿಗೆ ವಿದಾಯ ಹೇಳಿ. ಸಹಕಾರ ತತ್ವದಿಂದ ಬದುಕಿ, ಮುಂದಿನ ಜನಾಂಗಕ್ಕೆ ನಾವು ಶುದ್ಧವಾದ ಗಾಳಿಯನ್ನು, ಶುದ್ಧವಾದ ನೀರನ್ನು, ಶುಭ್ರವಾದ ಆಕಾಶವನ್ನು ಬಿಟ್ಟುಹೋಗುವುದು ನಮ್ಮ ಧ್ಯೇಯವಾಗಬೇಕು. ಆಗ ಮಾತ್ರ ಈ ಸೃಷ್ಟಿಯ ಮೇಲೆ ಮನುಕುಲ ಉಳಿದೀತು ಎಂದರು.

ಕಾನೂನು ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಪ್ರೊ| ವಿ.ಆರ್‌ ಶಿರೋಳ, ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಡಾ|ಎಸ್‌.ಆರ್‌ ಕಂದಗಲ್ಲ, ವಾಣಿಜ್ಯ ಕಾಲೇಜಿನ ಪ್ರಾಚಾರ್ಯೆ ಎಸ್‌.ಎಸ್‌  ಶೆಟ್ಟರ, ಶಿಕ್ಷಣ ಕಾಲೇಜಿನ ಪ್ರಾಚಾರ್ಯ ಬೆನಕನಾಳ, ಕಾನೂನು ಕಾಲೇಜಿನ ಪ್ರಾಚಾರ್ಯ ಡಾ|ಚಂದ್ರಿಕಾ ಮುಂತಾದರು ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ|ವಿ.ಎಸ್‌ ಕಟಗಿಹಳ್ಳಿಮಠ ಸ್ವಾಗತಿಸಿದರು. ಪ್ರಾಚಾರ್ಯ ಡಾ|ಎಸ್‌.ಆರ್‌ ಕಂದಗಲ್ಲ ವಂದಿಸಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.