ಕೋವಿಡ್ ತಡೆಗೆ ಮುಂಜಾಗ್ರತಾ ಕ್ರಮ ಅನುಸರಿಸಿ: ರಾಮಚಂದ್ರ


Team Udayavani, Jun 14, 2020, 11:42 AM IST

14-June-04

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜಗಳೂರು: ದೇವರ ಕೃಪೆ ಮತ್ತು ಹಿರಿಯರ ಆಶೀರ್ವಾದದಿಂದ ತಾಲೂಕಿನಲ್ಲಿ ಇದುವರೆಗೂ ಕೋವಿಡ್ ಪ್ರಕರಣಗಳು ಕಂಡು ಬಂದಿಲ್ಲ. ಹಾಗಂತ ಆದರೂ ಮೈಮರೆಯುವಂತಿಲ್ಲ. ಮಕ್ಕಳು ಹಾಗೂ ವಯೋವೃದ್ಧರನ್ನು ಜಾಗೃತೆಯಿಂದ ನೋಡಿಕೊಳ್ಳುವುದರೊಂದಿಗೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಶಾಸಕ ಎಸ್‌ .ವಿ. ರಾಮಚಂದ್ರ ಹೇಳಿದರು.

ಪಟ್ಟಣದ ತರಳಬಾಳು ಕೇಂದ್ರದಲ್ಲಿ ಶನಿವಾರ ತಾಲೂಕು ಬಿಜೆಪಿ ಘಟಕ ಮತ್ತು ಎಸ್‌.ವಿ.ಆರ್‌ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್ ವಾರಿಯರ್ಗೆ ಅಭಿನಂದನೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್‌ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಲೂಕು ಆಡಳಿತ, ಪೊಲೀಸ್‌, ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕೋವಿಡ್ ವಾರಿಯರ್ಸ್ ಗಳಾಗಿ ನನ್ನ ಜೊತೆಗಿದ್ದಾರೆ. ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಕೋವಿಡ್ ಪಾಸಿಟಿವ್‌ ಪ್ರಕರಣ ಬಾರದಂತೆ ನೋಡಿಕೊಂಡು ಜನರು ನೆಮ್ಮದಿಯ ನಿಟ್ಟುಸಿರು ಬಿಡಲು ಕಾರಣರಾಗಿರುವುದು ಶ್ಲಾಘನೀಯ ಎಂದರು. ತಾಲೂಕಿನಲ್ಲಿ ಕಳೆದ 3 ತಿಂಗಳಿನಿಂದ ಕೂಲಿ ಕಾರ್ಮಿಕರು ದುಡಿಮೆಯಿಲ್ಲದೆ ಕಂಗಾಲಾಗಿದ್ದರು. ಹಾಗಾಗಿ ನರೇಗಾದಡಿ ಕೃಷಿ, ಕೆರೆ ಹೂಳೆತ್ತುವುದು, ಬದು ನಿರ್ಮಾಣದಂತಹ ಕೆಲಸ ನೀಡಲಾಗಿದೆ. ಉಚಿತವಾಗಿ ಕಿಟ್‌ ಕೊಡುತ್ತಾರೆ ಎಂಬ ಆಸೆ ಇಟ್ಟುಕೊಳ್ಳದೆ ದುಡಿಮೆಯ ಹಣದಲ್ಲಿ ಸ್ವಾವಲಂಬಿ ಜೀವನ ಸಾಗಿಸಬೇಕು ಎಂದು ಕರೆ ನೀಡಿದರು.

ನಾನು ಶಾಸಕನಾಗಿ ಇಡೀ ಕ್ಷೇತ್ರದಲ್ಲಿ ಸಂಘ ಸಂಸ್ಥೆಗಳ, ಕ್ರಷರ್‌ಗಳ ಹಾಗೂ ಪಕ್ಷದ ಕಾರ್ಯಕರ್ತರ ದೇಣಿಗೆಯಿಂದ ಮತ್ತು ವೈಯಕ್ತಿಕವಾಗಿ ಸಾದ್ಯವಾದಷ್ಟು ಸಹಾಯ ಮಾಡಿ ಕಷ್ಟದಲ್ಲಿ ನೆರವಾಗಿದ್ದೇನೆ. ಟೀಕೆ, ವದಂತಿಗಳ ಬಗ್ಗೆ ಕಿವಿಗೊಡುವುದಿಲ್ಲ. ತಾಲೂಕನ್ನು ಮಾದರಿಯಾಗಿಸುವುದು ನನ್ನ ಗುರಿ ಎಂದರು.

ಉಪ ವಿಭಾಗಾಧಿಕಾರಿಯಾಗಿ ನೇಮಕಗೊಂಡಿರುವ ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ಮಾತನಾಡಿ, ಶಾಸಕರ ಸೂಚನೆಯಂತೆ ತಾಲೂಕು ಆಡಳಿತದಿಂದ ಕೋವಿಡ್‌-19 ನಿಯಂತ್ರಿಸಲು ಸಮರೋಪಾದಿಯಲ್ಲಿ ಶ್ರಮಿಸಿದ್ದೇವೆ. ಅಲ್ಲದೆ ಟೀಮ್‌ ಎಸ್‌ ವಿಆರ್‌ ಬಳಗದಲ್ಲಿ ಕೆಲಸ ಮಾಡಿದ್ದಕ್ಕೆ ನನಗೆ ತೃಪ್ತಿಯಿದೆ ಎಂದರು. ಸಿಪಿಐ ದುರುಗಪ್ಪ ಮಾತನಾಡಿ, ಕೋವಿಡ್ ಆಕ್ರಮಣವಾಗಿಲ್ಲ ಎಂಬ ನಿರ್ಲಕ್ಷ್ಯ ಬೇಡ. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್, ಸ್ಯಾನಿಟೈಸರ್‌ ಬಳಕೆ ಮಾಡಿಕೊಂಡು ಜಾಗೃತರಾಗಿರಬೇಕು. ಕಾನೂನು ಉಲ್ಲಂಘನೆ ಮಾಡದೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಇದೆ ವೇಳೆ 173 ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್‌ ಹಾಗೂ ತಲಾ 500 ರೂ. ಪ್ರೋತ್ಸಾಹಧನವನ್ನು ಶಾಸಕರು ವಿತರಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಮಹೇಶ್‌ ಪಲ್ಲಾಗಟ್ಟೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಿ.ವಿ. ನಾಗಪ್ಪ, ಜಿಪಂ ಉಪಾಧ್ಯಕ್ಷ ಸಿದ್ದಪ್ಪ ಯರಬಳ್ಳಿ, ಜಿಪಂ ಸದಸ್ಯ ಎಸ್‌.ಕೆ. ಮಂಜುನಾಥ್‌, ಪಪಂ ಅಧ್ಯಕ್ಷ ಜೆ.ವಿ. ನಾಗರಾಜ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

1-qwwqewq

Udupi; ಬಜೆ ಡ್ಯಾಂ ಬಳಿ ಶಿಲಾಯುಗದ ನಿಲಿಸುಗಲ್ಲು ಪತ್ತೆ

US Result: ಡೊನಾಲ್ಡ್‌ ಟ್ರಂಪ್  ಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

US Result: ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10

Katpadi: ಅಂಚಿಗೆ ಬ್ಯಾರಿಕೇಡ್‌ ಇರಿಸಿ ರಿಬ್ಬನ್‌ ಅಳವಡಿಕೆ

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

9

Padubidri: ಹೆಜಮಾಡಿ ಬಂದರು ಮೀನಮೇಷ ಎಣಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.