ನಟ ಸುಶಾಂತ್ ಸಾವಿಗಿಂತ ಮೊದಲು “ರಿಯಾ ಚಕ್ರವರ್ತಿ” ಮನೆಯಿಂದ ಹೊರಬಿದ್ದಿದ್ದೇಕೆ?
ಬಾಂದ್ರಾದ ಅಪಾರ್ಟ್ ಮೆಂಟ್ ನಲ್ಲಿ ರಿಯಾ ಹಾಗೂ ಸುಶಾಂತ್ ಒಟ್ಟಿಗೆ ವಾಸಿಸುತ್ತಿದ್ದರು
Team Udayavani, Jun 14, 2020, 5:51 PM IST
ಮುಂಬೈ: ಬಾಲಿವುಡ್ ನ ಯುವ ಪ್ರತಿಭಾವಂತ ನಟ, ಟಿವಿ ಸೀರಿಯಲ್ ಮೂಲಕ ವೃತ್ತಿ ಆರಂಭಿಸಿದ್ದ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿರುವುದು ಬಾಲಿವುಡ್ ಗೆ ಆಘಾತಕಾರಿ ಸುದ್ದಿಯಾಗಿದೆ. ಏತನ್ಮಧ್ಯೆ ಸುಶಾಂತ್ ಮಾನಸಿಕ ಒತ್ತಡ(ಡಿಪ್ರೆಶನ್)ದಿಂದ ಆತ್ಮಹತ್ಯೆಗೆ ಶರಣಾಗಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದೆ.
ಯುವ ಪ್ರತಿಭೆಯ ನಟ ಸುಶಾಂತ್ ಸಿಂಗ್ ಸಹ ನಟಿಯಾಗಿದ್ದ ಅಂಕಿತಾ ಲೋಖಾಂಡೆಯನ್ನು ಸುಮಾರು ಆರು ವರ್ಷಗಳ ಕಾಲ ಪ್ರೀತಿಸಿದ್ದರು. ಆದರೆ 2016ರಲ್ಲಿ ಇಬ್ಬರ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ ಬೇರೆ, ಬೇರೆಯಾಗಿದ್ದರು.
ಸುಶಾಂತ್ ಸಿಂಗ್ ಹಾಗೂ ರಿಯಾ ಚಕ್ರವರ್ತಿ ಜತೆ, ಜತೆಯಾಗಿ ಸುತ್ತಾಡುವ ಮೂಲಕ ಇಬ್ಬರ ನಡುವಿನ ರಿಲೇಷನ್ ಶಿಪ್ ಬಗ್ಗೆ ಗಾಸಿಪ್ ಹರಿದಾಡತೊಡಗಿತ್ತು. ಚಿಚೋರೆ ಸಿನಿಮಾದ ಯಶಸ್ಸಿನ ನಂತರ ಸುಶಾಂತ್ ಇಂಡಸ್ಟ್ರಿಯಲ್ಲಿ ಹೆಚ್ಚು ಸದ್ದು ಮಾಡಲಿಲ್ಲ. ಆದರೆ ಮಾಧ್ಯಮಗಳ ವರದಿ ಪ್ರಕಾರ, ಸುಶಾಂತ್ ಮತ್ತು ರಿಯಾ ಜೋಡಿ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗತೊಡಗಿತ್ತು.
ಸುಶಾಂತ್ ಕೂಡಾ ರಿಯಾಳ ಚೆಂದನೆಯ ಫೋಟೋವನ್ನು ಇನ್ಸ್ ಸ್ಟಾಗ್ರಾಂ ಸ್ಟೋರಿಯಲ್ಲಿ ಹಾಕಿಕೊಳ್ಳುವ ಮೂಲಕ ತಮ್ಮ ಲವ್ ಅಫೇರ್ ಅನ್ನು ಪರೋಕ್ಷವಾಗಿ ತಿಳಿಸಿದ್ದರು. “ಮೇರಿ ಜಿಲೇಬಿ@ರಿಯಾಚಕ್ರವರ್ತಿ” ಎಂದು ಕ್ಯಾಪ್ಶನ್ ಕೊಟ್ಟಿದ್ದರು.
ಬಾಂದ್ರಾದ ಅಪಾರ್ಟ್ ಮೆಂಟ್ ನಲ್ಲಿ ರಿಯಾ ಹಾಗೂ ಸುಶಾಂತ್ ಒಟ್ಟಿಗೆ ವಾಸಿಸುತ್ತಿದ್ದರು ಎಂದು ಉನ್ನತ ಮಟ್ಟದ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ನಾಲ್ಕು ದಿನದ ಮೊದಲು ರಿಯಾ ಅಪಾರ್ಟ್ ಮೆಂಟ್ ನಿಂದ ಹೊರನಡೆದಿದ್ದಳು ಎಂದು ಹೇಳಲಾಗುತ್ತಿದೆ. ಬಂಗಾಳಿ ಕುಟುಂಬದ ರಿಯಾ ಚಕ್ರವರ್ತಿ ಜಿನಿಸಿದ್ದು ಬೆಂಗಳೂರಿನಲ್ಲಿ. ಈಕೆ ಅಂಬಾಲಾ ಕಂಟೋನ್ಮೆಂಟ್ ನ ಆರ್ಮಿ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಪಡೆದಿದ್ದಳು. 2013ರಲ್ಲಿ ತೆರೆಕಂಡಿದ್ದ ಬಾಲಿವುಡ್ ನ ಮೇರೆ ಡ್ಯಾಡಿ ಕಿ ಮಾರುತಿ ಸಿನಿಮಾದಲ್ಲಿ ನಟಿಸಿದ್ದಳು.
ಇಬ್ಬರ ನಡುವೆ ಜಗಳ ನಡೆದಿದ್ದರಬಹುದು, ಇದರಿಂದಾಗಿ ಸುಶಾಂತ್ ಮಾನಸಿಕ ಒತ್ತಡಕ್ಕೆ ಒಳಗಾಗಿರಬೇಕೆಂದು ವಿಶ್ಲೇಷಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.