ಮೂಲಸೌಲಭ್ಯಗಳಿಗೆ ಮೊದಲ ಆದ್ಯತೆ
Team Udayavani, Jun 15, 2020, 5:52 AM IST
ಗುಂಡ್ಲುಪೇಟೆ: ಕ್ಷೇತ್ರಕ್ಕೆ ಉತ್ತಮ ರಸ್ತೆ, ಚರಂಡಿ ಮತ್ತು ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ನಿರಂಜನ್ ಕುಮಾರ್ ಹೇಳಿದರು. ತಾಲೂಕಿನ ಸಂಪಿಗೆಪುರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕಬ್ಬಹಳ್ಳಿ ಮುಖ್ಯರಸ್ತೆ ಸಂಪಿಗೆಪುರ ಗ್ರಾಮ ಮಾರ್ಗ ಕಲ್ಲಹಳ್ಳಿ ಮುಖ್ಯ ರಸ್ತೆ ಪ್ರಮುಖ ಸಂಪರ್ಕ ರಸ್ತೆಯಾಗಿದೆ.
ಈ ರಸ್ತೆಯನ್ನು 1 ಕೋಟಿ ರೂ. ವೆಚ್ಚದಲ್ಲಿ ಡಾಂಬ ರೀಕರಣ ಮಾಡಲಾಗುವುದು ಎಂದು ಹೇಳಿದರು. ಈಗಾಗಲೇ ತಾಲೂಕಿನ ಚಿಕ್ಕಾಟಿ ಮತ್ತು ಚನ್ನವಡೆ ಯನಪುರ ಗ್ರಾಮದಲ್ಲಿ ತಲಾ 20 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ತೊರವಳ್ಳಿ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ಭೀಮನಬೀಡು ಗ್ರಾಮದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ, ಕೆಬ್ಬೇಪುರ ಗ್ರಾಮದಲ್ಲಿ 10ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಬಾಚಹಳ್ಳಿ – ಬಂಡೀ ಪುರ ರಸ್ತೆ 90 ಲಕ್ಷ ರೂ.ವೆಚ್ಚದಲ್ಲಿ, ಬಾಚಹಳ್ಳಿಯಿಂದ ಕಡಬೂರು ಮಾರ್ಗ ರಸ್ತೆ 1ಕೋಟಿ 20ಲಕ್ಷ ರೂ.ವೆಚ್ಚ ದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.
ತೆರಕಣಾಂಬಿಹುಂಡಿಯ ರಾಮಲಿಂಗಚೌಡೇಶ್ವರಿ ದೇವಸ್ಥಾನದ ಬಳಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ಗ್ರಾಮಾಂತರ ಪ್ರದೇಶದಲ್ಲಿ ಎಲ್ಲಾ ರಸ್ತೆಗಳನ್ನು ಶೀಘ್ರದಲ್ಲೇ ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗು ವುದು ಎಂದು ಹೇಳಿದರು. ಈ ವೇಳೆ ಮಂಡಲಾಧ್ಯಕ್ಷ ಜಗದೀಶ್, ತಾಪಂ ಮಾಜಿ ಸದಸ್ಯ ಮಹದೇವಪ್ರಸಾದ್, ಮುಖಂಡರಾದ ಮಹೇಶ್, ಮಂಜುನಾಥ್, ಪ್ರಣಯ್, ನಂದೀಶ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.