ಬಾಲ್ಯ ವಿವಾಹ ದುಷ್ಪರಿಣಾಮದ ಜಾಗೃತಿ ಅಗತ್ಯ
Team Udayavani, Jun 15, 2020, 7:14 AM IST
ಹಾಸನ: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹದಿಹರೆಯದವರಿಗೆ ಹಾಗೂ ವಯಸ್ಕ ಮಕ್ಕಳನ್ನು ಹೊಂದಿರುವ ಪೋಷಕರಿಗೆ ಬಾಲ್ಯ ವಿವಾಹ ದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವ ಕಚೇರಿ ಸಭಾಂಗಣದಲ್ಲಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರ ಅಧ್ಯಕ್ಷತೆ ಯಲ್ಲಿ ನಡೆದ ಪಿ.ಸಿ.ಪಿ.ಎನ್.ಡಿ.ಟಿ ಹಾಗೂ ಡಿ.ಐ.ಎಂ.ಪಿ. ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಪಾಲ್ಗೊಂಡಿದ್ದ ಸದಸ್ಯರೆಲ್ಲರೂ ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಬಾಲ್ಯವಿವಾಹ ಮಾಡಿದರೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಶಿಕ್ಷೆಗೆ ಗುರಿ ಯಾಗುವ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಬಾಲ್ಯ ವಿವಾಹ, ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯಂತಹ ಕೃತ್ಯ ಎಸಗುವುದರಿಂದ ಹೆಣ್ಣು ಮಕ್ಕಳು ದೈಹಿಕ ಮತ್ತು ಮಾನಸಿಕ ತೊಂದರೆಗಳಿಗೆ ಒಳಗಾಗುವುದರೊಂದಿಗೆ ಸಮಾಜದಲ್ಲಿ ಸಂಭವಿಸುವ ಅನಾಹುತಗಳ ಬಗ್ಗೆ ಜನರಿಗೆ ತಿಳಿವಳಿಕೆ ನೀಡಲು ರೇಡಿಯೋ ಮೂಲಕ ಫೋನ್ ಇನ್ ಕಾರ್ಯಕ್ರಮ ಮಾಡುವುದರ ಮೂಲಕ ಹೆಚ್ಚು ಪರಿಣಾಮ ಕಾರಿಯಾಗಿ ಜಾಗೃತಿ ಮೂಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಆರ್‌ಸಿಎಚ್.ಅಧಿಕಾರಿ ಡಾ. ಕಾಂತರಾಜ್, ಸಮಿತಿಯ ಸದಸ್ಯರಾದ ಡಾ. ಭಾರತಿ ರಾಜಶೇಖರ್, ಡಾ. ಸಾವಿತ್ರಿ, ಲೀಲಾವತಿ, ಡಾ. ದಿನೇಶ್, ಡಾ.ಶೈಲೇಶ್, ಕೆ.ಟಿ. ಜಯಶ್ರೀ, ರಿಹಾನಾ ಬಾನು, ಮಧುರಾ ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.