ಜಿಂದಾಲ್ ಕಾರ್ಖಾನೆ ತಾತ್ಕಾಲಿಕ ಸೀಲ್‌ಡೌನ್ ಮಾಡಿ
Team Udayavani, Jun 15, 2020, 8:46 AM IST
ಬಳ್ಳಾರಿ: ಸಾವಿರಾರು ಕಾರ್ಮಿಕರನ್ನು ಹೊಂದಿರುವ ಜಿಲ್ಲೆಯ ತೊರಣಗಲ್ಲಿನ ಜಿಂದಾಲ್ ಕೈಗಾರಿಕೆಯಲ್ಲಿ ನೌಕರರು ಮತ್ತವರ ಸಂಬಂಧಿಕರಲ್ಲಿ ನೂರಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಕೈಗಾರಿಕೆಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಬೇಕು ಎಂದು ಪ್ರಜಾಸತ್ತಾತ್ಮಕ ಪಕ್ಷಗಳ ಹಾಗೂ ಸಾಮೂಹಿಕ ಸಂಘಟನೆಗಳ ಒಕ್ಕೂಟ ಜಿಲ್ಲಾಡಳಿತವನ್ನು ಒತ್ತಾಯಿಸಲು ನಿರ್ಧರಿಸಿದೆ.
ನಗರದ ರಾಘವಕಲಾ ಮಂದಿರದಲ್ಲಿ ಸಭೆ ಸೇರಿದ್ದ ಒಕ್ಕೂಟದ ಮುಖಂಡರು ಈ ಕುರಿತು ನಿರ್ಣಯ ಕೈಗೊಂಡಿದ್ದು, ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ಮಾಡಿದ ಕಾರ್ಮಿಕರು ಕರ್ತವ್ಯ ನಿರ್ವಹಿಸಿ ಹೊರಗಡೆ ಬರುವುದರಿಂದ ಕೋವಿಡ್ ಸೋಂಕು ನೆರೆಯ ಹಳ್ಳಿ ಮತ್ತು ಪಟ್ಟಣ, ನಗರ ಪ್ರದೇಶಗಳಿಗೂ ಆವರಿಸುತ್ತಿದೆ. ಇದರಿಂದಾಗಿ ಜನರು ಆತಂಕಕ್ಕೀಡಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕಾರ್ಖಾನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಸಾಧ್ಯವಿಲ್ಲದಿದ್ದರೆ ಸದ್ಯದ ಮಟ್ಟಿಗೆ ಅವಶ್ಯವಿರುವಷ್ಟು ಕಾರ್ಮಿಕರು, ನೌಕರರನ್ನು ಕಾರ್ಖಾನೆ ಆವರಣದಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಾರ್ಖಾನೆ ಆವರಣದಿಂದ ಯಾರು ಬರದಂತೆ ಸೀಲ್‌ಡೌನ್ ಮಾಡಬೇಕು. ಈ ಮೂಲಕ ಕಾರ್ಖಾನೆ ಹೊರವಲಯದಲ್ಲಿ ಜೀವಿಸುವ ಸಾವಿರಾರು ಜನರ ಜೀವ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕಾಗಿದೆ ಎಂದವರು ಆಗ್ರಹಿಸಿದ್ದಾರೆ.
ಕಾರ್ಖಾನೆಯ ಎಲ್ಲ ಕಾರ್ಮಿಕರನ್ನು ತಪಾಸಣೆಗೆ ಒಳಪಡಿಸಬೇಕು. ಸೋಂಕು ಕಾಣಿಸಿಕೊಂಡಿರುವ ಘಟಕವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು. ರೋಗ ನಿಯಂತ್ರಣಕ್ಕೆ ಸರ್ಕಾರ ಸೂಚಿಸಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸ್ಥಗಿತಗೊಂಡಿರುವ ವಿಭಾಗದ ಖಾಯಂ, ಗುತ್ತಿಗೆ ನೌಕರರಿಗೆ ವೇತನ ನೀಡಬೇಕು. ಸೋಂಕಿತ, ಶಂಕಿತರಿಗೆ ನೀಡುವ ಚಿಕಿತ್ಸಾ ವೆಚ್ಚವನ್ನು ಕಾರ್ಖಾನೆ ಆಡಳಿತ ಮಂಡಳಿಯೇ ಭರಿಸಬೇಕು. ಇತರೆ ಘಟಕಗಳ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಒಕ್ಕೂಟದ ಸದಸ್ಯರು ಒತ್ತಾಯಿಸಿದ್ದು, ಈ ಕುರಿತು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಸಭೆಯಲ್ಲಿ ಅಖೀಲ ಭಾರತ ವಕೀಲರ ಸಂಘದ ಸದಸ್ಯ ಕೆ. ಕೋಟೇಶ್ವರರಾವ್, ಎಡಪಕ್ಷಗಳ ಮುಖಂಡರಾದ ಜೆ.ಸತ್ಯಬಾಬು, ಶಿವಶಂಕರ್, ಚೆನ್ನಪ್ಪ, ಸಂಗನಕಲ್ಲು ಕಟ್ಟೆಬಸಪ್ಪ, ಕುಡಿತಿನಿ ಶ್ರೀನಿವಾಸ, ರಾಮು, ಬಂಡಾಯ ಸಾಹಿತ್ಯ ಸಂಘಟನೆಯ ವೆಂಕಟೇಶ್, ಬುಡಕಟ್ಟು ಹಕ್ಕುಗಳ ಹೋರಾಟ ಸಮಿತಿಯ ವಿಜಯಕುಮಾರ್, ಜಿಪಂ ಸದಸ್ಯ ಎ.ಮಾನಯ್ಯ, ಜೆಡಿಎಸ್ ಮುಖಂಡ ಮೀನಹಳ್ಳಿ ತಾಯಣ್ಣ ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.