ಐಪಿಎಲ್ ಮತ್ತು ಟಿ20 ವಿಶ್ವಕಪ್ ಎರಡೂ ನಡೆಯಬೇಕು: ರೋಹಿತ್ ಶರ್ಮಾ
Team Udayavani, Jun 15, 2020, 10:25 AM IST
ಮುಂಬೈ: ವರ್ಣರಂಜಿತ ಕ್ರಿಕೆಟ್ ಕೂಟ ಇಂಡಿಯನ್ ಪ್ರೀಮಿಯರ್ ಲೀಗ್ ಕೋವಿಡ್-19 ಲಾಕ್ ಡೌನ್ ಕಾರಣದಿಂದ ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಸದ್ಯ ಐಪಿಎಲ್ ನ ಭವಿಷ್ಯದ ಬಗ್ಗೆ ಬಿಸಿಸಿಐ ಚಿಂತನೆಯಲ್ಲಿದೆ. ಅಕ್ಟೋಬರ್ ನಲ್ಲಿ ಟಿ20 ವಿಶ್ವಕಪ್ ಕೂಡಾ ನಡೆಯಲಿರುವ ಕಾರಣ ಉಭಯ ಕೂಟಗಳಲ್ಲಿ ಒಂದನ್ನು ನಡೆಸುವ ಬಗ್ಗೆಯೂ ಚರ್ಚೆಗಳಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಟೀಂ ಇಂಡಿಯಾ ನಿಗಧಿತ ಓವರ್ ಗಳ ಉಪನಾಯಕ ಮತ್ತು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ಈ ವರ್ಷ ಐಪಿಎಲ್ ಮತ್ತು ಟಿ20 ವಿಶ್ವಕಪ್ ಕೂಟ ಎರಡೂ ನಡೆಯಬೇಕು ಎಂದಿದ್ದಾರೆ.
ಇನ್ಸ್ಟಾ ಗ್ರಾಮ್ ಚಾಟ್ ನಲ್ಲಿ ಈ ಅಭಿಪ್ರಾಯ ಹೇಳಿದ ರೋಹಿತ್, ಎರಡೂ ಚುಟುಕು ಕೂಟಗಳಲ್ಲಿ ಆಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
ಈ ವರ್ಷಾಂತ್ಯದಲ್ಲಿ ಭಾರತೀಯ ತಂಡ ಆಸೀಸ್ ಪ್ರವಾಸ ಮಾಡಲಿದೆ, ಡಿಸೆಂಬರ್ 3ರಿಂದ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಲಿದೆ. ಬಿಸ್ಬೇನ್ ನಲ್ಲಿ ಮೊದಲ ಪಂದ್ಯ ನಡೆದರೆ ಎರಡನೇ ಪಂದ್ಯ ಅಡಿಲೇಡ್ ಓವಲ್ ನಲ್ಲಿ ನಡೆಯಲಿದೆ, ಈ ಪಂದ್ಯವೂ ಹೊನಲು ಬೆಳಕಿನಲ್ಲಿ ನಡೆಯುವ ಪಂದ್ಯವಾಗಿರಲಿದ್ದು, ಭಾರತದ ಎರಡನೇ ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿರಲಿದೆ. ಈ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರೋಹಿತ್ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.