ಅಕ್ಟೋಬರ್‌ನಲ್ಲಿ ಟ್ರಾಮಾ ಕೇಂದ್ರ ಉದ್ಘಾಟನೆ
ಹೊರಗುತ್ತಿಗೆ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ದಾಯ ನಿರ್ದಿಷ್ಟ ನೀತಿ ಜಾರಿಗೆ ಕ್ರಮ
Team Udayavani, Jun 15, 2020, 11:05 AM IST
ಕಲಬುರಗಿ: ಜಿಮ್ಸ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು. ಡಾ.ಉಮೇಶ್ ಸಂಸದ ಜಾಧವ ಇದ್ದರು.
ಕಲಬುರಗಿ: ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಿರುವ ಟ್ರಾಮಾ ಸೆಂಟರ್ ಅನ್ನು ಮುಂದಿನ ಅಕ್ಟೋಬರ್‌ನಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.
ಭಾನುವಾರ ಜಿಮ್ಸ್‌ಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯವೈಖರಿ ಪರಿಶೀಲಿಸಿ ಮಾತನಾಡಿದ ಅವರು, ಎಲ್ಲಾ ಕಾಮಗಾರಿ ಪೂರ್ಣಗೊಳಿಸಿ ಉಪಕರಣಗಳನ್ನು ತರಿಸುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅಗತ್ಯವಿರುವ ಸಿಬ್ಬಂದಿ ವಿವರಗಳನ್ನು ನಿರ್ದೇಶಕರಿಗೆ ಕಳುಹಿಸಿ ಒಪ್ಪಿಗೆ ಪಡೆದು ತ್ವರಿತವಾಗಿ ಟ್ರಾಮಾ ಸೆಂಟರ್
ಕಾರ್ಯಾರಂಭಿಸುವಂತೆ ನೋಡಿಕೊಳ್ಳಬೇಕು. ಬರುವ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಅದನ್ನು ಉದ್ಘಾಟಿಸಲು ಸಿದ್ಧತೆ ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚಿಸಿದರು.
ಖಾಲಿಯಿರುವ 16 ಪ್ರೊಫೆಸರ್ ಹುದ್ದೆಗಳ ಭರ್ತಿಗೆ ತಕ್ಷಣವೇ ಅಧಿಸೂಚನೆ ಹೊರಡಿಸಿ ನೇಮಕ ಪ್ರಕ್ರಿಯೆ ಮುಗಿಸುವಂತೆ ಸೂಚಿಸಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡುವುದು ತಡವಾಗುವುದರಿಂದ ಇಲಾಖೆ ಮೂಲಕವೇ ನೇರ ನೇಮಕ ಮಾಡಿಕೊಳ್ಳಲು ಅನುವಾಗುವಂತೆ ನೇಮಕ ನಿಯಮ ರೂಪಿಸಿ. ಇಲ್ಲವಾದಲ್ಲಿ ಬಹುತೇಕ ಎಲ್ಲ ಕಾಲೇಜುಗಳಲ್ಲಿ ನನೆಗುದಿಗೆ ಬಿದ್ದಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆಗುವುದಿಲ್ಲ ಎಂದು ಇಲಾಖೆ ನಿರ್ದೇಶಕರಿಗೆ ಸೂಚಿಸಿದರು.
ಹೊರಗುತ್ತಿಗೆ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಬೇಕು. ಹಣಕಾಸು ಅಧಿಕಾರಿ ಹುದ್ದೆ ಖಾಲಿ ಬಿಡಬಾರದು ಅಥವಾ ಪ್ರಭಾರವು ಇರಬಾರದು ಪೂರ್ಣ ಪ್ರಮಾಣದ ಅಧಿಕಾರಿ ನೇಮಕ ಮಾಡುವಂತೆ ಸೂಚಿಸಿದರು. ಕೋವಿಡ್ ಸಂದರ್ಭದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಹೌಸ್ ಕೀಪಿಂಗ್
ಸಿಬ್ಬಂದಿಯನ್ನು ಏಕೆ ಇಟ್ಟುಕೊಂಡಿದ್ದೀರಿ? ಸ್ಥಳೀಯರಿಗೆ ಏಕೆ ಅವಕಾಶ ನೀಡಿಲ್ಲ? ಇದರಿಂದ ಕೆಲಸ ಕಾರ್ಯಗಳಿಗೆ ತೊಂದರೆ ಆಗುವುದಿಲ್ಲವೇ ಎಂದು ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡರು.
ಕಪ್ಪು ಪಟ್ಟಿಯಲ್ಲಿ ಇದ್ದವರಿಗೆ ರಕ್ಷಣಾ ವ್ಯವಸ್ಥೆಯ ಗುತ್ತಿಗೆ ನೀಡಿರುವ ಆರೋಪಗಳಿವೆ. ಇದನ್ನು ಪರಿಶೀಲಿಸಿ ಹೌಸ್ ಕೀಪಿಂಗ್ ಹೊರಗುತ್ತಿಗೆಗೆ ಸಂಬಂಧಿಸಿದಂತೆ ನಿರ್ದಿಷ್ಟ ನೀತಿ ಜಾರಿಗೆ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಿಸಿದರು. ಸಂಸದರು ಮತ್ತು ಶಾಸಕರು ಸಭೆಯಲ್ಲಿ ಪ್ರಸ್ತಾಪಿಸಿದ ಕೆಲ ವಿಷಯಗಳ ಆಧಾರದ ಮೇಲೆ ಹೊರಗುತ್ತಿಗೆ ಸಂಸ್ಥೆ ಸಿಬ್ಬಂದಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಿ ಕ್ರಮ ಜರುಗಿಸಬೇಕು. ಅದಕ್ಕಾಗಿ ಒಂದು ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.
ಸೃಜನೆ ಮಾಡಿರುವ 61 ಸ್ಟಾಫ್ ನರ್ಸ್ ಹುದ್ದೆಗಳನ್ನು ಆರೋಗ್ಯ ಇಲಾಖೆಯಿಂದ ಹಸ್ತಾಂತರಿಸುವ ಸಂಬಂಧ ಕ್ರಮ ಜರುಗಿಸಲಾಗುವುದು. ಗುಣಮಟ್ಟದ ಆರೋಗ್ಯ ಸೇವೆ ಜನರಿಗೆ ಸಿಗಬೇಕು ಎಂಬುದು ಜನಪ್ರತಿನಿಧಿ ಗಳ ಕಾಳಜಿಯಾಗಿದೆ. ಇದನ್ನು ಸಿಬ್ಬಂದಿ ಅರ್ಥ ಮಾಡಿಕೊಳ್ಳಬೇಕು ಎಂದರು. ಆಯುಷ್ಮಾನ್ ಭಾರತ್ ಹಾಗೂ ಇತರೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಉಪಯೋಗಿಸಿಕೊಂಡರೆ ಸಂಸ್ಥೆಯ ಸ್ವಯಂ ನಿರ್ವಹಣೆ ಸಾಧ್ಯವಿದೆ. ಸಂಸ್ಥೆ ನಮ್ಮದು ಎಂಬ ಭಾವನೆಯಿಂದ ಕೆಲಸ ಮಾಡಿದರೆ ಇದು ಸಾಧ್ಯವಾಗುತ್ತದೆ ಎಂದು ಸಿಬ್ಬಂದಿಗೆ ಕಿವಿಮಾತು ಹೇಳಿದರು.
ಹಣದ ಬಳಕೆ ಮತ್ತು ಬ್ಯಾಂಕ್ ಖಾತೆಯಲ್ಲಿ ಇರುವ ಹಣದ ಮಾಹಿತಿ, ಮೇಲ್ದರ್ಜೆಗೆ ಏರಿಸಲು ರೂಪಿಸಿರುವ ಯೋಜನೆಗಳ ಮಾಹಿತಿಯನ್ನು ಎರಡು ದಿನಗಳಲ್ಲಿ ತಮಗೆ ಕಳುಹಿಸಿಕೊಡುವಂತೆ ಸಚಿವರು ಸೂಚಿಸಿದರು. ಸಂಸದ ಡಾ.ಉಮೇಶ್ ಜಾಧವ್, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ರಾಜಕುಮಾರ ಪಾಟೀಲ್ ತೇಲ್ಕೂರ ಬಸವರಾಜ ಮುತ್ತಿಮೂಡ್, ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ವೈದ್ಯಕೀಯ ಶಿಕ್ಷಣ ನಿರ್ದೇಶಕ ಡಾ.ಗಿರೀಶ್, ಜಿಮ್ಸ್ ನಿರ್ದೇಶಕರಾದ ಕವಿತಾ ಪಾಟೀಲ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.