ಕಾಡುಗೊಲ್ಲ ಸಮುದಾಯಕ್ಕೆ ಪರಿಷತ್ ಪ್ರಾತಿನಿಧ್ಯ ಕೊಡಿ
Team Udayavani, Jun 15, 2020, 1:18 PM IST
ಚಿತ್ರದುರ್ಗ: ಪ್ರವಾಸಿ ಮಂದಿರದಲ್ಲಿ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಸಭೆ ನಡೆಯಿತು.
ಚಿತ್ರದುರ್ಗ: ವಿಧಾನ ಪರಿಷತ್‌ನಲ್ಲಿ ಕಾಡುಗೊಲ್ಲ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸದಸ್ಯರು ತೀರ್ಮಾನಿಸಿದರು. ರಾಜ್ಯಾಧ್ಯಕ್ಷ ಶಿವು ಯಾದವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಭೇಟಿ ಮಾಡಿ ನಮ್ಮ ಸಮುದಾಯಕ್ಕೆ ಅವಕಾಶ ನೀಡುವಂತೆ ಕೋರಲು ಬೆಂಗಳೂರಿಗೆ ನಿಯೋಗ ತೆರಳಲು ನಿರ್ಧರಿಸಲಾಯಿತು. ರಾಜ್ಯ ಸರ್ಕಾರ ಇತ್ತೀಚಿನ ಜಾತಿ ಪಟ್ಟಿಗೆ ಕಾಡುಗೊಲ್ಲ ಜನಾಂಗವನ್ನು ಸೇರಿಸಿದೆ. ಆದರೆ ಈ ಜನಾಂಗ ಅಲೆಮಾರಿ ಸಮುದಾಯ. ಹಾಗಾಗಿ ಸಮುದಾಯವನ್ನು ಅಲೆಮಾರಿ ಪಟ್ಟಿಗೆ ಸೇರಿಸಿ ಆದೇಶ ಹೊರಡಿಸಬೇಕು. ಅಲೆಮಾರಿ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರಿ ವಸತಿ ನಿಲಯಗಳಲ್ಲಿ ಶೇ.10 ರಷ್ಟು ಮೀಸಲಾತಿ ಪಾಲನೆಯಾಗಬೇಕು ಎಂದು ಸಭೆ ಒತ್ತಾಯಿಸಿತು.
ವಾಸಿಸುವವನೇ ಮನೆಯ ಒಡೆಯ ಕಾನೂನಿನ ಅಡಿಯಲ್ಲಿ ವಾಸಿಸುವ ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಕೈಬಿಡಬೇಕು. ಕಾಯ್ದೆ ತಿದ್ದುಪಡಿಯಿಂದ ಕುರಿಗಾಹಿಗಳಿಗೆ, ಪಶುಪಾಲನೆಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಸರ್ಕಾರ ಮುಂದಾಗಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಯಿತು.
ಪ್ರಧಾನ ಕಾರ್ಯದರ್ಶಿ ಹರ್ಷವರ್ಧನ, ಗೌರವಾಧ್ಯಕ್ಷ ಕೂನಿಕೆರೆ ರಾಮಣ್ಣ, ಸಂಘಟನಾ ಕಾರ್ಯದರ್ಶಿ ಕುಣಿಗಲ್ ನಾಗಣ್ಣ, ದಾವಣಗೆರೆ ಗಂಗಾಧರ್, ಡಾ| ಪ್ರೇಮಾ, ಡಾ| ವೆಂಕಟೇಶ್, ಡಾ| ಚಿತ್ತಯ್ಯ, ಡಾ| ಮಹೇಶ್, ವಕೀಲರಾದ ತಿಮ್ಮಣ್ಣ, ಚಂದ್ರಶೇಖರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.