ಶಾಸಕ ರಘುಮೂರ್ತಿ ಸನ್ಮಾನ
Team Udayavani, Jun 15, 2020, 1:25 PM IST
ಚಿತ್ರದುರ್ಗ: ಸಂತೋಷದ ಸಂದರ್ಭದಲ್ಲಿ ಸಾಕಷ್ಟು ಜನ ನಮ್ಮ ಜತೆಗಿರುತ್ತಾರೆ. ಆದರೆ, ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಶಾಸಕ ಟಿ. ರಘುಮೂರ್ತಿ ಕ್ಷೇತ್ರದಲ್ಲಿ ಓಡಾಡಿಕೊಂಡಿದ್ದು, ಜನರ ಕಷ್ಟಸುಖಗಳಿಗೆ ಸ್ಪಂದಿಸಿದ ರೀತಿ ಶ್ಲಾಘನೀಯ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
ನಗರದ ಹೊರವಲಯದ ಭೋವಿ ಗುರುಪೀಠದಲ್ಲಿ ಭಾನುವಾರ ಚಳ್ಳಕೆರೆ ಶಾಸಕ ರಘುಮೂರ್ತಿ ಅವರನ್ನು ಸನ್ಮಾನಿಸಿ ಶ್ರೀಗಳು ಮಾತನಾಡಿದರು. ಶಾಸಕರಾಗಿ ಮನೆಯಲ್ಲಿ ಕುಳಿತುಕೊಳ್ಳದೆ ಬೆಳಗಿನಿಂದ ರಾತ್ರಿವರೆಗೆ ಕ್ಷೇತ್ರದಲ್ಲಿ ಸುತ್ತಾಡಿ, ಜನರ ಕಷ್ಟ ಸುಖ ಆಲಿಸಿದ್ದಾರೆ. ಸಂಕಷ್ಟಕ್ಕೆ ಒಳಗಾದವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ನಿರ್ಗತಿಕರಿಗೆ ನೆರವಾಗಿದ್ದಾರೆ. ಹೀಗೆ ಜನರ ಕಷ್ಟ ಸುಖಗಳಿಗೆ ಮಿಡಿಯುವವರೇ ನಿಜವಾದ ಜನ ನಾಯಕ ಎಂದರು.
ಕುಂಚಿಟಿಗ ಗುರುಪೀಠದ ಡಾ|ಶ್ರೀ| ಶಾಂತವೀರ ಸ್ವಾಮೀಜಿ, ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಗುರುಮಠಕಲ್ ಶಾಖಾ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ, ರುದ್ರದೇವ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಉದ್ಯಮಿ ಬಾಬುರೆಡ್ಡಿ, ಜಗಳೂರು ಬಿಇಒ ವೆಂಕಟೇಶ್, ಭೋವಿ ಗುರುಪೀಠದ ಸಿಇಓ ಗೌನಹಳ್ಳಿ ಗೋವಿಂದಪ್ಪ ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.