ಪರಿಸರ ರಕ್ಷಣೆ ಕಾರ್ಯಕ್ಕೆ ಮುಂದಾಗಿ: ಸಚಿವ ರವಿ
Team Udayavani, Jun 15, 2020, 4:04 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಪರಿಸರ ಬೆಳೆಸಿ ಉಳಿಸುವ ಹೊಣೆಗಾರಿಕೆ ನಮ್ಮೆಲ್ಲರ ದ್ದಾಗಿದ್ದು ಪರಿಸರ ಉಳಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕೆಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು.
ನಗರದ ಹಿರೇಮಗಳೂರಿನ ಪ್ರಭು ಲಿಂಗೇಶ್ವರ ಶಾಲಾ ಆವರಣದಲ್ಲಿ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಹಾಗೂ ಸಸಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹಸಿರೇ ಉಸಿರು ಎನ್ನುವ ಉದ್ದೇಶದಿಂದ ಪರಿಸರ ದಿನವನ್ನು ಆಚರಿಸಲಾಗುತ್ತಿದ್ದು, ನಮ್ಮನ್ನು ನಾವು ಉಳಿಸಿಕೊಳ್ಳಲು ಪರಿಸರವನ್ನು ಉಳಿಸುವುದು ಅತ್ಯವಶ್ಯವಾಗಿದೆ. ಸಾಕಷ್ಟು ಗಿಡ- ಮರಗಳನ್ನು ಬೆಳೆಸುವುದರೊಂದಿಗೆ ಅದರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದರು.
ನಗರಸಭಾ ಮಾಜಿ ಅಧ್ಯಕ್ಷ ಎಚ್.ಡಿ. ತಮ್ಮಯ್ಯ ಮಾತನಾಡಿ, ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮನೆಗೊಂದು ಮರ- ಊರಿಗೊಂದು ವನ ಎಂಬಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಲೆನಾಡು ಭೂ ಲೋಕದ ಸ್ವರ್ಗದಂತಿದ್ದು ಮುಂದಿನ ದಿನಗಳಲ್ಲಿ ನಗರದೆಲ್ಲೆಡೆ ಹೆಚ್ಚು ಮರ-ಗಿಡಗಳನ್ನು ನೆಡುವ ಮೂಲಕ ಹಸಿರು ಕಂಗೊಳಿಸುವಂತೆ ಮಾಡಬೇಕು ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾತನಾಡಿ, ರೈತರಿಗೆ ಮರ- ಗಿಡಗಳನ್ನು ಬೆಳೆಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಪ್ರತಿ ಗಿಡಕ್ಕೆ ರೂ.125 ಗಳನ್ನು ನೀಡಲಾಗುತ್ತಿದೆ. ಜೊತೆಗೆ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಗಿಡಗಳನ್ನು ವಿತರಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಪರಿಸರ ಸಂರಕ್ಷಣೆಗೆ ಮುಂದಾಗಬೇಕೆಂದು ಮನವಿ ಮಾಡಿದರು. ಖ್ಯಾತ ವಾಗ್ಮಿ ಹಿರೇಮಗಳೂರು ಕಣ್ಣನ್, ಬಿಜೆಪಿ ಮುಖಂಡ ಮಧುಕುಮಾರ್ ಅರಸ್, ರಾಜಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.