ಬಂಟ್ವಾಳ: ಪೆಟ್ರೊಲ್ ಸುರಿದು ಅವಿವಾಹಿತ ಅಣ್ಣ- ತಂಗಿ ಆತ್ಮಹತ್ಯೆ
Team Udayavani, Jun 16, 2020, 9:55 AM IST
ಪುಂಜಾಲಕಟ್ಟೆ: ಅನಾರೋಗ್ಯ ದಿಂದ ಬಳಲುತ್ತಿದ್ದು ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೈದ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ.
ಇಲ್ಲಿನ ನಿವಾಸಿಗಳಾದ ನೀಲಯ್ಯ ಶೆಟ್ಟಿಗಾರ್ (42) , ಕೇಸರಿ ( 39) ಮೃತಪಟ್ಟ ದುರ್ದೈವಿಗಳು.
ಇಬ್ಬರೂ ಅನಾರೋಗ್ಯ ದಿಂದ ಬಳಲುತ್ತಿದ್ದು, ರಾತ್ರಿ ಸುಮಾರು 11 ಗಂಟೆಯ ಬಳಿಕ ತಮ್ಮ ಮನೆಯ ಕೊಠಡಿಯಲ್ಲಿ ಕೃತ್ಯ ಗೈದಿದ್ದಾರೆ. ಮನೆಯಲ್ಲಿ ನೀಲಯ್ಯ ಅವರ ಸಹೋದರ ಮತ್ತು ಅವರ ಪತ್ನಿ, ಮಗ ವಾಸವಿದ್ದು, ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ನರಳಾಟದ ಶಬ್ದ ಕೇಳಿ ಬಂದಾಗ ಘಟನೆ ತಿಳಿದು ಬಂದಿತ್ತು. ಬಳಿಕ ಸ್ಥಳೀಯರು ಸೇರಿ ಗಂಭೀರ ಗಾಯಗೊಂಡ ಇಬ್ಬರನ್ನೂ ಬಂಟ್ವಾಳ ಸರಕಾರಿ ಆಸ್ಪತ್ರೆ ಗೆ ಸಾಗಿಸಿದರಾದರೂ ಅದಾಗಲೇ ಇಬ್ಬರೂ ಮೃತಪಟ್ಟಿದ್ದರು.
ನೀಲಯ್ಯ ಅವರು ಈ ಹಿಂದೆ ಕೈ ಮಗ್ಗ ನಡೆಸುತ್ತಿದ್ದು, ಅನಾರೋಗ್ಯ ದಿಂದ ನಿಲ್ಲಿಸಿದ್ದರು. ಮಾಹಿತಿ ತಿಳಿದ ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ ಮತ್ತು ಸಿಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.