ಶೈಕ್ಷಣಿಕ ವರ್ಷದ ಕುರಿತು ಶಾಲೆಗಳಿಗೆ ಗೊಂದಲ
Team Udayavani, Jun 16, 2020, 12:16 PM IST
ಸಾಂದರ್ಭಿಕ ಚಿತ್ರ
ಮುಂಬಯಿ, ಜೂ. 15: 2020-21ರ ಶೈಕ್ಷಣಿಕ ವರ್ಷವು ಜೂನ್ 15ರಿಂದ ಪ್ರಾರಂಭವಾಗಲಿದೆ ಎಂದು ರಾಜ್ಯ ಶಿಕ್ಷಣ ಇಲಾಖೆ ಈ ಹಿಂದೆ ಘೋಷಿಸಿದ್ದರೂ, ರಾಜ್ಯ ಸರಕಾರವು ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಸುತ್ತೋಲೆ ಅಥವಾ ನಿರ್ದೇಶನವನ್ನು ನೀಡದಿರುವುದರಿಂದ ಶಾಲೆಗಳನ್ನು ಪುನಃ ರಾರಂಭಿಸುವುದರ ಬಗ್ಗೆ ಗೊಂದಲಗಳು ಮುಂದುವರಿದಿದೆ.
ಆನ್‌ಲೈನ್ ಅಥವಾ ಆಫ್ಲೈನ್ ಶಿಕ್ಷಣ ಆಗಿರಲಿ ರಾಜ್ಯ ಶಿಕ್ಷಣ ಇಲಾಖೆಯು ತರಗತಿಗಳ ಪ್ರಾರಂಭದ ಕುರಿತು ಯಾವುದೇ ಅಧಿಕೃತ ಮಾಹಿತಿಯನ್ನು ಶಾಲೆಗಳಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ರಾಜ್ಯಕ್ಕೆ ಸಲ್ಲಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳು (ಎಸ್ ಒಪಿಗಳು) ಪುನಃ ತೆರೆಯುವ ವಿವರಗಳನ್ನು ಒಳಗೊಂಡಿವೆ. ಇದನ್ನು ಸರಕಾರದ ಅನುಮೋದನೆಯ ಅನಂತರ ಸಾರ್ವಜನಿಕ ಗೊಳಿಸಲಾಗುವುದು. ಈ ಮಧ್ಯೆ ಶಿಕ್ಷಕರು ಶಾಲೆಗೆ ಹೋಗಬಹುದು ಮತ್ತು ಆನ್‌ಲೈನ್ ತರಗತಿಗಳಿಗೆ ಇ-ವಿಷಯವನ್ನು ರಚಿಸುವ ಕೆಲಸ ಮಾಡಬಹುದು ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕೆಲವು ಶಾಲೆಗಳು ಸೋಮವಾರದಿಂದ ಕೆಲವು ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ, ಸೂಚನೆಗಳ ಅನುಪಸ್ಥಿತಿಯಲ್ಲಿ ಅವರು ತಮ್ಮದೇ ಆದ ವೇಳಾಪಟ್ಟಿಯನ್ನು ರೂಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಸರಕಾರವು ನಮಗೆ ಸ್ಪಷ್ಟ ಸೂಚನೆಗಳನ್ನು ನೀಡುವವರೆಗೆ ನಾವು ದಿನಕ್ಕೆ ಎರಡು ಗಂಟೆಗಳ ಕಾಲ ಕಲಿಸಲು ಯೋಜಿಸುತ್ತಿದ್ದೇವೆ ಎಂದು ಉಪನಗರ ಶಾಲೆಯ ಪ್ರಾಂಶುಪಾಲರೊಬ್ಬರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.