ಯಶೋಧಮ್ಮ ಹುಳಿಗೆರೆ ಗ್ರಾಮ ಪಂಚಾಯತ್ ಅಧ್ಯಕ್ಷೆ
Team Udayavani, Jun 16, 2020, 12:24 PM IST
ಕಡೂರು: ಹುಳಿಗೆರೆ ಗ್ರಾಪಂ ನೂತನ ಅಧ್ಯಕ್ಷರಾಗಿ ಯಶೋಧಮ್ಮ ಪರಮೇಶ್ವರಪ್ಪ ಅವಿರೋಧವಾಗಿ ಆಯ್ಕೆಯಾದರು.
ಕಡೂರು: ತಾಲೂಕಿನ ಹುಳಿಗೆರೆ ಗ್ರಾಪಂ ಅಧ್ಯಕ್ಷೆಯಾಗಿ ಯಶೋಧಮ್ಮ ಅವಿರೋಧ ಆಯ್ಕೆಯಾದರು. ಗ್ರಾಪಂನಲ್ಲಿ ಸೋಮವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಬೇರೆ ಸದಸ್ಯರ್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿ ಕಾರಿ ಹಾಗೂ ಕಡೂರು ಪಶು ಸಂಗೋಪನಾ
ಇಲಾಖೆ ಸಹಾಯಕ ನಿರ್ದೇಶಕ ಡಾ| ಕಿರಣ್ ಕುಮಾರ್ ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು.
ನೂತನ ಅಧ್ಯಕ್ಷೆ ಯಶೋಧಮ್ಮ ಅಭಿನಂಧನೆ ಸ್ವೀಕರಿಸಿ ಮಾತನಾಡಿ, ಉತ್ತಮ ಮಳೆಯಾಗುತ್ತಿರುವುದರಿಂದ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ. ಆದರೆ ಸಾಂಕ್ರಾಮಿಕ ರೋಗಗಳು ಹರಡದಂತೆ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಸದಸ್ಯ ಎ.ಎನ್. ಚಂದನ್ ಮಾತನಾಡಿ, ಪಂಚಾಯತ್ ಸದಸ್ಯರ ಅವಧಿ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಆದರೆ ಪಂಚಾಯತ್ ರಾಜ್ ನಿಯಮದ ಪ್ರಕಾರ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಎಷ್ಟು ಅವಧಿಗೆ ಅಧಿಕಾರದಲ್ಲಿದ್ದೆ ಎನ್ನುವುದು ಮುಖ್ಯವಲ್ಲ. ಆದರೆ ತನ್ನ ಅಧಿಕಾರಾವಧಿಯಲ್ಲಿ
ಎಷ್ಟು ಜನಪರ ಕೆಲಸಗಳನ್ನು ಮಾಡಿದೆ ಎಂಬುದು ಮುಖ್ಯ ಎಂದರು.
ಗ್ರಾಪಂ ಸದಸ್ಯರಾದ ಡಿ.ಎಂ. ದಕ್ಷಿಣಮೂರ್ತಿ, ಎಸ್.ಜಿ. ಸುಮ, ಬಸಮ್ಮ, ಎಂ.ಎಂ. ಮಹೇಶ್, ನಾಗಮ್ಮ, ಶಾರದಮ್ಮ, ಅಭಿವೃದ್ಧಿ ಅಧಿಕಾರಿ ವೈ. ಎಸ್. ತನುಜಾ, ಕಾರ್ಯದರ್ಶಿ ಓಬಳೇಶ್, ಡಿ.ವಿ. ಅಶೋಕ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.