12 ವಾರಗಳ ಬಳಿಕ ಭಕ್ತರಿಗಾಗಿ ತೆರೆಯಿತು ಕಾಪು ಹಳೇ ಮಾರಿಗುಡಿ
Team Udayavani, Jun 16, 2020, 3:57 PM IST
ಕಾಪು: ಕಳೆದ 12 ವಾರಗಳ ಬಳಿಕ ಕಾಪು ಹಳೇ ಮಾರಿಗುಡಿ ದೇವಸ್ಥಾನವು ಜೂನ್ 16ರ ಮಂಗಳವಾರದಿಂದ ಸಾರ್ವಜನಿಕ ಭಕ್ತಾಧಿಗಳ ಭೇಟಿಗಾಗಿ ಮುಕ್ತವಾಗಿ ತೆರೆಯಲ್ಪಟ್ಟಿದೆ.
ಕೋವಿಡ್ 19 ಹರಡುವಿಕೆಯ ಮುಂಜಾಗ್ರತಾ ಕ್ರಮವಾಗಿ ಎರಡೂವರೆ ತಿಂಗಳಿನಿಂದ ಜಾರಿಯಲ್ಲಿದ್ದ ಲಾಕ್ ಡೌನ್ ನ ಕಾರಣದಿಂದಾಗಿ ಕಾಪುವಿನ ಮಾರಿಗುಡಿಗಳಿಗೆ ಭಕ್ತರ ಭೇಟಿಗೆ ನಿರ್ಬಂಧ ವಿಧಿಸಲಾಗಿತ್ತು.
ಸರಕಾರ ನಿರ್ಬಂಧ ತೆರವು ಗೊಳಿಸಿದ ಹಿನ್ನೆಲೆಯಲ್ಲಿ ಹೊಸ ಮತ್ತು ಮೂರನೇ ಮಾರಿಗುಡಿಯಲ್ಲಿ ಜೂ. 9 ರಿಂದಲೇ ಭಕ್ತರ ಬೇಟಿಗೆ ಅವಕಾಶ ಮಾಡಿ ಕೊಡಲಾಗಿತ್ತಾದರೂ, ಹಳೇ ಮಾರಿಗುಡಿಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಭಕ್ತರ ಭೇಟಿಗೆ ಅವಕಾಶ ಮಾಡಿಕೊಡಲು ಆಡಳಿತ ಮಂಡಳಿಯು ನಿರ್ಧರಿಸಿತ್ತು.
ಜೂ. 16ರಂದು ಮಂಗಳವಾರದಿಂದ ಹಳೆ ಮಾರಿಗುಡಿಗೆ ಭಕ್ತರ ಭೇಟಿಗೆ ಅವಕಾಶ ಮಾಡಿಕೊಡಲಾಗಿದ್ದು, ಈ ವೇಳೆ ಸಾಮಾಜಿಕ ಅಂತರ, ಸರತಿ ಸಾಲಿನ ವ್ಯವಸ್ಥೆ, ಮಾಸ್ಕ್ ಕಡ್ಡಾಯ , ಒಳ ಪ್ರವೇಶಿಸುವಾಗ ದೇಹದ ಉಷ್ಣಾಂಶ ಪರೀಕ್ಷಿಸಿ, ಹ್ಯಾಂಡ್ ಸ್ಯಾನಿಟೈಸರ್ ಬಳಸಿಯೇ ಒಳ ಪ್ರವೇಶಿಸಲು ಒತ್ತು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.