ಉದಯವಾಣಿ ವರದಿ ಫಲಶ್ರುತಿ: ಹನೂರು ಕಾಲೇಜು ಸ್ಥಳಾಂತರಿಸದಂತೆ ಡಿಸಿಎಂಗೆ ಸುರೇಶ್ ಕುಮಾರ್ ಪತ್ರ
Team Udayavani, Jun 16, 2020, 4:12 PM IST
ಹನೂರು (ಚಾಮರಾಜನಗರ ): ತಾಲೂಕಿನ ಏಕೈಕ ಪದವಿ ಕಾಲೇಜನ್ನು ಸ್ಥಳಾಂತರ ಮಾಡದಂತೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಸ್ಥಳಾಂತರಿಸಲು ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿರುವ ಸಂಬಂಧ ಜೂನ್.11ರ ಉದಯವಾಣಿ ಪತ್ರಿಕೆಯಲ್ಲಿ “ಪದವಿ ಕಾಲೇಜು ಸ್ಥಳಾಂತರಕ್ಕೆ ಆದೇಶ”ಎಂಬ ಶೀರ್ಷಿಕೆಯಡಿ ವಿಸ್ಮೃತ ವರದಿ ಪ್ರಕಟಿಸಲಾಗಿತ್ತು.
ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್ ಅವರು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರಿಗೆ ಪತ್ರ ಬರೆದಿದ್ದಾರೆ.
ಕ್ಷೇತ್ರದ ಶಾಸಕರಾದ ನರೇಂದ್ರ ರಾಜೂಗೌಡ ಅವರು ನೀಡಿರುವ ಮನವಿ ಪತ್ರದ ಜೊತೆಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಕೂಡ ಪತ್ರ ಬರೆದಿದ್ದು, ಈ ಕಾಲೇಜು ತಾಲೂಕಿನ ಏಕೈಕ ಕಾಲೇಜಾಗಿದ್ದು ಪ್ರಸಕ್ತ ಸಾಲಿನಲ್ಲಿ 325 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಭಾಗದ ಗುಡ್ಡಗಾಡು ಪ್ರದೇಶ, ಕಾಡಂಚಿನ ಗ್ರಾಮಗಳು ಮತ್ತು ಪರಿಶಿಷ್ಠ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಿತದೃಷ್ಠಿಯಿಂದ ಕಾಲೇಜನ್ನು ಇಲ್ಲಿಯೇ ಉಳಿಸಿಕೊಳ್ಳುವಂತೆ ಹಾಗೂ ಮುಂದುವರೆಸುವಂತೆ ಉಪಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.