ಮೋದಿ 2.0: ಬಿಜೆಪಿ ಯುವ ಮೋರ್ಚಾ ಚಾಮರಾಜನಗರ ಜಿಲ್ಲೆಯ ವರ್ಚುವಲ್ ಸಭೆ
Team Udayavani, Jun 16, 2020, 8:04 PM IST
ಕರ್ನಾಟಕ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಚಾಮರಾಜನಗರ ಜಿಲ್ಲೆಯ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ನಡೆದ ವರ್ಚುವಲ್ ವಿಡಿಯೋ ಸಂವಾದ ಕಾರ್ಯಕ್ರಮವನ್ನು ಬೆಂಗಳೂರಿನ ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆಸಲಾಯಿತು.
ದೇಶಾದ್ಯಂತ ಕೋವಿಡ್ 19 ವೈರಸ್ ಮಹಾಮಾರಿ ಅಟ್ಟಹಾಸ ಮೆರೆಯುತ್ತಿರುವ ಹಿನ್ನೆಲೆಯಲ್ಲಿ, ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಮೊದಲ ವರ್ಷದ ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಡಿಜಿಟಲ್ ತಂತ್ರಜ್ಞಾನದ ಮುಖಾಂತರ ತಿಳಿಸಲು ಈ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಇಂದಿನ ಸಭೆಯ ಮುಖ್ಯ ಭಾಷಣವನ್ನು ಕರ್ನಾಟಕ ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಬಿ.ವೈ. ವಿಜಯೇಂದ್ರ ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಮಾತನಾಡಿದ ವಿಜಯೆಂದ್ರರವರು ಕೇಂದ್ರ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷದ ಅಭಿವೃದ್ಧಿ ಕಾರ್ಯಗಳ ವಿಚಾರಧಾರೆಗಳನ್ನು ಎಳೆಎಳೆಯಾಗಿ ಬಿಡಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
– ದುರಾಡಳಿತ ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್, ಕಾಂಗ್ರೆಸ್ ಮಾಡಿರುವಂತಹ ಹಗರಣಗಳನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ.
– ತಮ್ಮ ಅಭಿವೃದ್ಧಿಯ ಕನಸನ್ನು ನನಸಾಗಿಸಲು ಪ್ರಧಾನಿ ನರೇಂದ್ರ ಮೋದಿಯವರು ಶ್ರಮವಹಿಸುತ್ತಿದ್ದಾರೆ, ವಿನೂತನವಾದ ಯೋಜನೆಗಳ ಮುಖಾಂತರ ಕೊನೆಯ ಹಂತದ ಜನರಿಗೂ ಯೋಜನೆಗಳ ಫಲವನ್ನು ನೀಡುತ್ತಿದ್ದಾರೆ.
– ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಮುಖಾಂತರ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ, ಆಯುಷ್ಮಾನ್ ಭಾರತದ ಮುಖಾಂತರ ಬಡಜನತೆಗೆ ನೆರವಾಗಿದ್ದಾರೆ.
– ಪ್ರಧಾನ ಮಂತ್ರಿ ಜನಧನ್ ಯೋಜನೆಯ ಮುಖಾಂತರ ದೇಶದ ಮಹಿಳೆಯರಿಗೆ ಆರ್ಥಿಕ ಅನುಕೂಲ ಮಾಡಿಕೊಟ್ಟಿದ್ದಾರೆ, ಮುದ್ರಾ ಯೋಜನೆಯಡಿ ಯುವಕರಿಗೆ ಹೊಸ ಉದ್ಯೋಗ ಪ್ರಾರಂಭಿಸಲು ಸಹಾಯ ಮಾಡುತ್ತಿದ್ದಾರೆ.
– ಹಳ್ಳಿ ಹಳ್ಳಿಗೂ ಇಂದು ವಿದ್ಯುತ್ ತಲುಪಿದೆ, ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸಾಕಷ್ಟು ಕಾರ್ಯಕ್ರಮಗಳು ದೇಶಾದ್ಯಂತ ನಡೆಯುತ್ತಿದೆ, ರಾಷ್ಟ್ರೀಯ ಹೆದ್ದಾರಿಗಳ ವೇಗದ ಮಿತಿ ದುಪ್ಪಟ್ಟಾಗಿದೆ, ಕಠಿಣವಾದ ಕಾನೂನುಗಳನ್ನು ಜಾರಿಗೆ ತಂದಿದ್ದಾರೆ.
– ಎಪ್ಪತ್ತು ವರ್ಷಗಳಿಂದ ಕಗ್ಗಂಟಾಗಿದ್ದ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿ ದಿಟ್ಟತನವನ್ನು ತೋರಿದ್ದಾರೆ, ಯಾವುದೇ ಒಂದು ಅಹಿತಕರ ಘಟನೆ ದೇಶಾದ್ಯಂತ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಿ ದೇಶದ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದಾರೆ, ಉಗ್ರವಾದವನ್ನು ದಮನ ಮಾಡಲು ದಿಟ್ಟ ಕ್ರಮಗಳನ್ನು ಕೈಗೊಂಡಿದ್ದಾರೆ.
– ದೇಶದ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆಯ ಶ್ರೀರಾಮ ಪ್ರಭು ಭವ್ಯ ರಾಮಮಂದಿರ ನಿರ್ಮಾಣದ ವಿಚಾರ ತಾರ್ತಿಕ ಅಂತ್ಯವಾಗಿದೆ, ಅಯೋಧ್ಯೆ ರಾಮ ಮಂದಿರ ಕಟ್ಟಡದ ನಿರ್ಮಾಣದ ಶಿಲಾನ್ಯಾಸವೂ ಕೂಡ ನೆರವೇರಿದೆ, ಇಡೀ ದೇಶದಲ್ಲಿರುವ ಎಲ್ಲ ಧಾರ್ಮಿಕ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಗೆ ಪರಿಹಾರ ಕಂಡು ಹಿಡಿದಿದ್ದಾರೆ.
– ತ್ರಿವಳಿ ತಲಾಖ್ ನಂತಹ ಅನಿಷ್ಟ ಪದ್ಧತಿಯನ್ನು ತೆಗೆದು ಹಾಕಿ ಕೋಟ್ಯಂತರ ಮುಸ್ಲಿಂ ಮಹಿಳೆಯರ ಕಣ್ಣೀರು ಒರೆಸಿದ್ದಾರೆ.
– ಪೌರತ್ವ ತಿದ್ದುಪಡಿ ಕಾಯ್ದೆಯಂತಹ ಕಠಿಣ ಕಾನೂನನ್ನು ಜಾರಿಗೆ ತಂದು ಇಂತಹ ಸಾಕಷ್ಟು ಕಗ್ಗಂಟಾಗಿದ್ದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಶಸ್ವಿಯಾಗಿದ್ದಾರೆ.
– ಪ್ರಪಂಚದಾದ್ಯಂತ ಕೋವಿಡ್ 19 ಮಹಾಮಾರಿ ತಾಂಡವವಾಡುತ್ತಿರುವ ಸಂದರ್ಭದಲ್ಲಿ ಮುಂಜಾಗೃತ ಕ್ರಮವಾಗಿ ಲಾಕ್ ಡೌನ್ ಜಾರಿಗೆ ತಂದು, ಬಹಳ ವ್ಯವಸ್ಥಿತವಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ.
– ಗ್ರಾಮಾಂತರ ಪ್ರದೇಶದ ಜನರಿಗೆ ಅನುಕೂಲವಾಗಲೆಂದು ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲ ಹಳ್ಳಿಗಳಲ್ಲೂ ಬಡವರಿಗೆ ಕೆಲಸವನ್ನು ನೀಡುತ್ತಿದ್ದಾರೆ,ದೇಶದ ಎಂಟು ಕೋಟಿ ರೈತರಿಗೆ ಇದುವರೆಗೂ ಎರಡು ಸಾವಿರ ರೂಗಳು ಹಣ ಜಮಾವಣೆಯಾಗಿದೆ, ವಲಸೆ ಕಾರ್ಮಿಕರ ರಕ್ಷಣೆಗೆ ಕಟಿಬದ್ಧವಾಗಿ ಕೇಂದ್ರ ಸರ್ಕಾರ ನಿಂತಿದೆ.
– ರಾಜ್ಯದ ವಿಚಾರವಾಗಿ ಸನ್ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ದೇಶದಲ್ಲೇ ಮೊದಲು ಲಾಕ್ ಡೌನ್ ಜಾರಿಗೆ ತಂದ ಮುಖ್ಯಮಂತ್ರಿಗಳಾಗಿದ್ದಾರೆ, ಇಂತಹ ಇಳಿ ವಯಸ್ಸಿನಲ್ಲೂ ವಿಶ್ರಾಂತಿರಹಿತವಾಗಿ ಪ್ರತಿನಿತ್ಯ ಅಧಿಕಾರಿಗಳು, ಸಚಿವರು, ಶಾಸಕರು ಎಲ್ಲ ವರ್ಗದ ಅಧಿಕಾರಿಗಳೊಂದಿಗೆ ಸತತ ಸಭೆಗಳನ್ನು ನಡೆಸಿ ಕೋವಿಡ್ ನಿಯಂತ್ರಣಕ್ಕಾಗಿ ಶ್ರಮಿಸುತ್ತಿದ್ದಾರೆ. ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವುದರ ಮುಖಾಂತರ ದೇಶಕ್ಕೆ ಮಾದರಿ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ, ಈ ಕೋವಿಡ್ ಮಹಾಮಾರಿ ವಿರುದ್ಧ ಹೋರಾಟ ನಡೆಸುತ್ತಿರುವ ಪ್ರತಿಯೊಬ್ಬ ಕೋವಿಡ್ ವಾರಿಯರ್ಸ್ ಗೆ ಅಭಿನಂದನೆಗಳನ್ನು ಸಲ್ಲಿಸಿದರು.
– ಪ್ರತಿಯೊಬ್ಬ ಯುವ ಮೋರ್ಚಾ ಕಾರ್ಯಕರ್ತರು ಕೋವಿಡ್ ನ ಸಂಕಷ್ಟದ ಸಂದರ್ಭದಲ್ಲಿ ಕರೆ ಮಾಡಿ ಔಷಧಿ ಬೇಕು ಎಂದು ಕೇಳಿದವರಿಗೆ ಉಚಿತವಾಗಿ ಅವರ ಮನೆ ಬಾಗಿಲಿಗೆ ಔಷಧಿಗಳನ್ನು ವಿತರಣೆ ಮಾಡಿದ್ದೀರಿ ತಮಗೂ ಕೂಡ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ, ಎಲ್ಲ ಯುವ ಕಾರ್ಯಕರ್ತರೊಂದಿಗೆ ಪಕ್ಷವನ್ನು ಸಂಘಟಿಸಿ ಪಕ್ಷ ಕಟ್ಟುವ ಕಾಯಕದಲ್ಲಿ ನಾವು ನೀವೆಲ್ಲ ಭಾಗಿಯಾಗೋಣ ಎಂದು ವಿಜಯೇಂದ್ರ ತಿಳಿಸಿದರು.
ಸಭೆಯ ಪ್ರಾಸ್ತಾವಿಕ ನುಡಿಗಳನ್ನು, ರಾಜ್ಯ ಯುವ ಮೋರ್ಚಾ ಪ್ರಧಾನಕಾರ್ಯದರ್ಶಿಗಳಾದ ಶ್ರೀ ತಮ್ಮೇಶ್ ಗೌಡ ಅವರು ಮಾತನಾಡಿ ಯುವ ಮೊರ್ಚ ರಾಜ್ಯಾದ್ಯಂತ ಯವ ಸಂವಾದಗಳನ್ನು ಮಾಡಿ ಮನೆ ಮನೆಗೆ ಕೇಂದ್ರ ಸರ್ಕಾರದ ಯೊಜನೆಗಳನ್ನು ತಿಳಿಸುವ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮ ಮಾಡಿ ಲಕ್ಷಾಂತರ ಮನೆಗಳನ್ನು ಮುಟ್ಟುವ ಯೊಜನೆ ಮತ್ತು ಸ್ವದೇಶಿ ಜಾಗೃತಿಯನ್ನು ಮೂಡಿಸುವ ಕಾರ್ಯದ ಜೊತೆಗೆ ಚೀನಾ ವಸ್ತುಗಳನ್ನು ಬಹಿಷ್ಕಾರ ಮಾಡುವಂತೆ ತಿಳಿಸಿದರು.
ವರ್ಚುವಲ್ ಜಾಥಾ ಕಾರ್ಯಕ್ರಮ ಪಾರಂಭವನ್ನು ರಾಜ್ಯ ಸಂಘಟನ ಕಾರ್ಯದರ್ಶಿಗಳಾದ ಅರುಣ್ ಕುಮಾರ್ ಜಿ ಜ್ಯೋತಿ ಬೆಳಗುವುದರ ಮೂಲಕ ಮಾಡಿದರು, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನ ಜಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ರವಿಕುಮಾರ್ ಜಿ ಉಪಸ್ಥಿಥರಿದ್ದರು
ಈ ಕಾರ್ಯಕ್ರಮದಲ್ಲಿ ಶ್ರೀ ಮಹೇಶ ಟೆಂಗಿನಕಾಯಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು, ವಿಶ್ವನಾಥ ಅಣಜಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಬಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.