ದ್ವಿ. ಪಿಯುಸಿ: 78 ಕೇಂದ್ರಗಳಲ್ಲಿ ನಾಳೆ ಇಂಗ್ಲಿಷ್ ಪರೀಕ್ಷೆ
Team Udayavani, Jun 17, 2020, 6:58 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ಲಾಕ್‌ಡೌನ್ ಕಾರಣದಿಂದ ದ.ಕ. ಜಿಲ್ಲೆಯಲ್ಲಿ ಅಭ್ಯಸಿಸಿದ ಹೊರ ಜಿಲ್ಲೆಗಳ 6,322 ಮಂದಿ ವಿದ್ಯಾರ್ಥಿಗಳು ತಮ್ಮ ಸ್ವ ಜಿಲ್ಲೆಗಳಲ್ಲೇ ಗುರುವಾರ (ಜೂ. 18) ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಬರೆಯಲಿದ್ದಾರೆ. ಇದೇ ವೇಳೆ ಇತರ ಜಿಲ್ಲೆಗಳಲ್ಲಿ ಅಭ್ಯಸಿಸಿದ ದ.ಕ. ಜಿಲ್ಲೆಯ 46 ಮಂದಿ ದ.ಕ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.
78 ಕೇಂದ್ರಗಳಲ್ಲಿ ಪರೀಕ್ಷೆ
ದ.ಕ.ದಲ್ಲಿ ಒಟ್ಟು 51 ಕೇಂದ್ರಗಳಲ್ಲಿ 33,264 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈಗ 6,322 ಮಂದಿ ಹೊರ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿರುವುದರಿಂದ 26,942 ಮಂದಿಯಷ್ಟೇ ದ.ಕ.ದಲ್ಲಿ ಬರೆಯಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 27 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 13,547 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೊರ ಜಿಲ್ಲೆಗಳಿಂದ 160 ಮತ್ತು ಹೊರ ರಾಜ್ಯದಿಂದ ಓರ್ವ ವಿದ್ಯಾರ್ಥಿ ಆಗಮಿಸಲಿದ್ದಾರೆ. ಉಳಿದಂತೆ ಜಿಲ್ಲೆಯ 1,344 ವಿದ್ಯಾರ್ಥಿಗಳು ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದಾರೆ.
ಕೇರಳದಿಂದ 32 ಬಸ್
ಕೇರಳದಿಂದ 1,137 ವಿದ್ಯಾರ್ಥಿಗಳು ಆಗಮಿಸಲಿದ್ದು, ತಲಪಾಡಿಯಿಂದ ಬಳಿಯಿಂದ ಒಟ್ಟು 32 ಬಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಬೆಳಗ್ಗೆ 7.30ಕ್ಕೆ ತಲಪಾಡಿಯಲ್ಲಿರಬೇಕು ಎಂದು ತಿಳಿಸಲಾಗಿದೆ. ಗರಿಷ್ಠ 24 ವಿದ್ಯಾರ್ಥಿಗಳು ಉಭಯ ಜಿಲ್ಲೆಗಳ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.
ಎಲ್ಲ ಪರೀಕ್ಷಾರ್ಥಿಗಳು ಮಾಸ್ಕ್ ಧರಿಸಿಯೇ ಬರಬೇಕೆಂಬ ಸೂಚನೆ ನೀಡಲಾಗಿದೆ. ಪ್ರತೀ ಕೋಣೆಯಲ್ಲಿ ಗರಿಷ್ಠ 24 ವಿದ್ಯಾರ್ಥಿಗಳು ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಅನಾರೋಗ್ಯವಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಎಲ್ಲ ಕೇಂದ್ರಗಳಿಗೂ ಆರೋಗ್ಯ ಇಲಾಖೆಯಿಂದ ಓರ್ವ ವೈದ್ಯ ಅಥವಾ ನರ್ಸ್, ಓರ್ವ ಆರೋಗ್ಯ ಕಾರ್ಯಕರ್ತೆಯನ್ನು ನಿಯೋಜಿಸಲಾಗಿದೆ. ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳ್ಳಲಿದೆ.
ಗೊಂದಲಕ್ಕೆ ಒಳಗಾಗದಿರಿ
ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲಗಳಾಗದಂತೆ ಇಲಾಖೆ ತಯಾರಿ ನಡೆಸಿದೆ. ಮೂಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲೆಗಳ ಕೇಂದ್ರಗಳಲ್ಲಿ ಬರೆಯುವ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ನಿಶ್ಚಿಂತೆಯಿಂದ ಪರೀಕ್ಷೆ ಬರೆಯಬಹುದು.
– ವಿಷ್ಣುಮೂರ್ತಿ, ಜಂಟಿ ನಿರ್ದೇಶಕರು, ದ.ಕ. ಪಪೂ ಶಿಕ್ಷಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.