ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ
Team Udayavani, Jun 17, 2020, 5:42 AM IST
ಮೈಸೂರು: ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ದಲಿತ ಸಂಘಟನೆಗಳ ಒಕ್ಕೂಟದಿಂದ ಅಂಚೆ ಪತ್ರ ಚಳವಳಿ ನಡೆಸಲಾಯಿತು. ಮಹಾನಗರ ಪಾಲಿಕೆ ಎದುರು ಚಳವಳಿಗಾರರು ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದರು.
ದಿವಂಗತ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿ ಇನ್ನಷ್ಟು ಬಲಪಡಿಸಿ ಉಳುವವನನೇ ಭೂ ಒಡೆಯರನ್ನಾಗಿ ಮಾಡಿದ್ದರು. ಆದರೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಉಳುವವರನ್ನು ಒಕ್ಕಲೆಬ್ಬಿಸಲು ಹೊರಟಿದ್ದಾರೆಂದು ವಿಷಾದಿಸಿದರು.
ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಕ್ಷೇತ್ರದ ಖಾಸಗೀಕರಣ, ಬೀಜಗೊಬ್ಬರಗಳ ಮೇಲೆ ಜಿಎಸ್‌ಟಿ ಹೀಗೆ ರೈತರ ಮೇಲೆ ಪ್ರಹಾರ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗ ರೈತರಿಂದ ಭೂಮಿಯನ್ನೇ ಕಿತ್ತುಕೊಳ್ಳಲು ಹೊರಟಿದೆ. ಹಸಿರು ಶಾಲು ಹೊದ್ದು ತಾವೊಬ್ಬ ರೈತ ನಾಯಕ ಎಂದು ಹೇಳುತ್ತಲೇ ಅಧಿಕಾರಕ್ಕೆ ಬಂದಿರುವ ಸಿಎಂ ಯಡಿಯೂರಪ್ಪ ಮುಖವಾಡ ಕಳಚಿ ಬಿದ್ದಿದೆ.
ಹೀಗಾಗಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಗೊಳಿಸಬಾರದು ಎಂದು ಒತ್ತಾಯಿಸಿದರು. ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಶಿವರಾಮು, ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ರಾಜು, ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ನಾಗೇಶ್, ಜಿಲ್ಲಾ ಕುಂಬಾರ ಸಂಘದ ಅಧ್ಯಕ್ಷ ಪ್ರಕಾಶ್, ಲೋಕೇಶ್ ಕುಮಾರ್, ರವಿ, ತ್ಯಾಗರಾಜ ನೀಹಲ್, ಬಸವಣ್ಣ, ಸ್ವಾಮಿ, ಮಹೇಂದ್ರ, ಪ್ರಸನ್ನ, ಪುನೀತ್, ಸ್ವಾಮಿಗೌಡ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.