ಮುಂಗಾರು ಬಿತ್ತನೆ ಕಾರ್ಯ ಚುರುಕು
Team Udayavani, Jun 17, 2020, 8:03 AM IST
ಚಿಂಚೋಳಿ: ತಾಲೂಕಿನ ಅನೇಕ ಗ್ರಾಮಗಳಲ್ಲಿ ಮಂಗಳವಾರ ಬೆಳಗ್ಗೆಯಿಂದ ಮಳೆ ಸುರಿಯುತ್ತಿರುವುದರಿಂದ ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಜೂನ್ ಮೊದಲ ವಾರದಲ್ಲಿ ಸಾಧಾರಣ ಮಳೆ ಆಗಿರುವುದರಿಂದ ರೈತರು ತೊಗರಿ, ಹೆಸರು, ಉದ್ದು, ಹೈಬ್ರಿಡ್ ಜೋಳ, ನವಣಿ, ಸಜ್ಜೆ ಬಿತ್ತನೆ ಮಾಡಿದ್ದರು. ಆದರೆ ಕಳೆದ ಒಂದು ವಾರದಿಂದ ಮಳೆ ಆಗದೆ ಕೇವಲ ಒಣ ಹವೆ ಮತ್ತು ಬಿಸಿಲಿನ ತಾಪ ಹೆಚ್ಚುತ್ತಿರುವುದರಿಂದ ರೈತರ ಮೊಗದಲ್ಲಿ ಆತಂಕವನ್ನುಂಟು ಮಾಡಿತ್ತು. ಮಂಗಳವಾರ ತಾಲೂಕಿನಲ್ಲಿ ಮುಂಜಾನೆಯಿಂದಲೇ ಮಳೆ ಬೀಳುತ್ತಿರುವುದರಿಂದ ರೈತರಿಗೆ ಸಂತಸವನ್ನುಂಟು ಮಾಡಿದೆ.
ತಾಲೂಕಿನಲ್ಲಿ ಇಗಾಗಲೇ ಹಸರಗುಂಡಗಿ, ರುಮ್ಮನಗೂಡ, ಐನಾಪುರ, ಚಿಮ್ಮನಚೋಡ, ಕುಂಚಾವರಂ, ಸುಲೇಪೇಟ, ಕೋಡ್ಲಿ, ಚಿಂಚೋಳಿ ಸಾಲೇಬೀರನಳ್ಳಿ, ಗಡಿಕೇಶ್ವರ, ಮೋಘಾ, ಚಂದನಕೇರಾ, ವೆಂಕಟಾಪುರ, ಮಿರಿಯಾಣ, ರಟಕಲ್, ಕನಕಪುರ ಗ್ರಾಮಗಳಲ್ಲಿ ಬಿತ್ತನೆ ಆಗಿದೆ. ಕೆಲವು ಗ್ರಾಮಗಳಲ್ಲಿ ಬಿತ್ತನೆ ಮಾಡಿದ ತೊಗರಿ, ಹೆಸರು, ಉದ್ದು ಮೊಳಕೆಯೊಡಿದೆ. ತಾಲೂಕಿನ ಸುಲೇಪೇಟ, ಕೊರವಿ, ನಿಡಗುಂದಾ, ಚಿಂಚೋಳಿಯಲ್ಲಿ ಬಿರುಸಿನ ಮಳೆ ಆಗಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿತ್ತು.
ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದ ಸಣ್ಣಪುಟ್ಟ ನಾಲಾಗಳಲ್ಲಿ ಮಳೆ ನೀರು ಹರಿಯುತ್ತಿತ್ತು. ತಾಲೂಕಿನಲ್ಲಿ ಬಿತ್ತನೆ ಕಾರ್ಯ ಚುರುಕಿನಿಂದ ನಡೆಯುತ್ತಿದ್ದು ಮಳೆ ಬೀಳುತ್ತಿರುವುದರಿಂದ ಮುಂಗಾರಿನ ಬಿತ್ತನೆಗೆ ಉತ್ತಮವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.