ದ್ವಿತೀಯ ಪಿಯು ಪರೀಕ್ಷೆಗೆ ಸಕಲ ಸಿದ್ಧತೆ


Team Udayavani, Jun 17, 2020, 9:22 AM IST

ದ್ವಿತೀಯ ಪಿಯು ಪರೀಕ್ಷೆಗೆ ಸಕಲ ಸಿದ್ಧತೆ

ಶಿವಮೊಗ್ಗ: ಇಡೀ ವ್ಯವಸ್ಥೆಯೇ ಅಲ್ಲೊಲ ಕಲ್ಲೋಲವಾಗಿರುವ ಕೋವಿಡ್ ಕಾಲದಲ್ಲಿ ಜೂ.18ರಂದು ನಡೆಯುವ ದ್ವಿತೀಯ ಪಿಯು ಪರೀಕ್ಷೆ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಪಪೂ ಶಿಕ್ಷಣ ಇಲಾಖೆ ಸಿಬ್ಬಂದಿ ಹಗಲಿರುಳು ಶ್ರಮ ವಹಿಸಿ ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ತಪ್ಪಿಸಿಕೊಳ್ಳದಂತೆ ನಿಗಾ ವಹಿಸಿದ್ದಾರೆ.

ಜಿಲ್ಲೆಯಲ್ಲಿ 18799 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಇಲಾಖೆಯಿಂದ ಇವರೆಲ್ಲರನ್ನೂ ಈಗಾಗಲೇ ಸಂಪರ್ಕಿಸಿ ಪರೀಕ್ಷೆ ಬರುವುದನ್ನು ಖಚಿತ ಪಡಿಸಿಕೊಳ್ಳಲಾಗಿದೆ. ಇದರಲ್ಲಿ 791 ವಿದ್ಯಾರ್ಥಿಗಳು ಹೊರ ಜಿಲ್ಲೆಯವರಾಗಿದ್ದು ಇಲ್ಲೇ ಪರೀಕ್ಷೆ ಬರೆಯುವುದಾಗಿ ತಿಳಿಸಿದ್ದು, ಅವರಿಗೂ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಇನ್ನು ಇದೇ ಜಿಲ್ಲೆಯ 372 ವಿದ್ಯಾರ್ಥಿಗಳು ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ಅವರಿಗೆ ಹಾಲ್‌ ಟಿಕೆಟ್‌ ವ್ಯವಸ್ಥೆ ಮಾಡಲಾಗಿದೆ. 3 ಸಾವಿರ ವಿದ್ಯಾರ್ಥಿಗಳಿಗೆ ಬಸ್‌: ಜಿಲ್ಲೆಯ ಗ್ರಾಮಾಂತರ ಭಾಗಗಳಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಮಾಡಲಾಗಿದೆ. ಶಿಕಾರಿಪುರ, ಸಾಗರ, ಸೊರಬ, ತೀರ್ಥಹಳ್ಳಿ ಭಾಗದಿಂದ ಬಸ್‌ಗೆ ಹೆಚ್ಚಿನ ಬೇಡಿಕೆ ಬಂದಿದೆ. ಒಟ್ಟು ಮೂರು ಸಾವಿರ ವಿದ್ಯಾರ್ಥಿಗಳಿಗೆ ಬಸ್‌ ಬೇಕು ಎಂದು ಬೇಡಿಕೆ ಸಲ್ಲಿಸಿದ್ದಾರೆ.

ತಹಶೀಲ್ದಾರ್‌ ಅಧ್ಯಕ್ಷತೆಯ ಸಮಿತಿ ವತಿಯಿಂದ ರೂಟ್‌ ಆಫೀಸರ್‌ಗಳನ್ನು ನೇಮಕ ಮಾಡಲಾಗಿದ್ದು ವಿದ್ಯಾರ್ಥಿಗಳಿಗೆ ಕರೆ ಮಾಡಿ ಬಸ್‌ ಮೂಲಕ ಕರೆತರುವ ವ್ಯವಸ್ಥೆ ಮಾಡುತ್ತಾರೆ. ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿ ಹೆಚ್ಚುವರಿ ವಾಹನ ವ್ಯವಸ್ಥೆ ಮಾಡಲಾಗಿದ್ದು ಅಗತ್ಯ ಬಿದ್ದರೆ ಬಳಸಿಕೊಳ್ಳಲಿದ್ದಾರೆ. 137 ರೂಟ್‌ಗಳನ್ನು ಗುರುತಿಸಲಾಗಿದ್ದು, ಅಗತ್ಯಕ್ಕೆ ತಕ್ಕಂತೆ ಬಸ್‌ ವ್ಯವಸ್ಥೆ ಆಗಲಿದೆ. ಬಸ್‌ಗೆ ಬರುವುದಾಗಿ ಹೇಳಿ ಸ್ವಂತ ವಾಹನದಲ್ಲಿ ಹೋಗುವವರು ಮೇಲ್ವಿಚಾರಕರಿಗೆ ಮಾಹಿತಿ ನೀಡಬೇಕು. ಬಹುತೇಕರು ಸ್ವಂತ ವಾಹನದಲ್ಲಿ ಬರುವುದಾಗಿ ತಿಳಿಸಿದ್ದಾರೆ.

ಪರೀಕ್ಷೆಗೂ ಮುನ್ನ ಹಾಜರಾತಿ ನಡೆಯಲಿದೆ. ಶಿವಮೊಗ್ಗ ತಾಲೂಕಿನಲ್ಲಿ 12, ಭದ್ರಾವತಿ 6, ತೀರ್ಥಹಳ್ಳಿ 3, ಸಾಗರ 5, ಸೊರಬ 2, ಹೊಸನಗರ 2, ಶಿಕಾರಿಪುರದಲ್ಲಿ 3 ಸೇರಿ ಒಟ್ಟು 33 ಪರೀಕ್ಷಾ ಕೇಂದ್ರಗಳಿವೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ ಕೊಠಡಿಗಳ ಸಂಖ್ಯೆ ಏರಿಕೆ ಮಾಡಲಾಗಿದೆ. ಮೊದಲು 630 ಕೊಠಡಿಗಳಿತ್ತು. ಈಗ 860ಕ್ಕೆ ಏರಿಕೆಯಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಹಿಂದೆ 750 ಜನ ಕೊಠಡಿ ಮೇಲ್ವಿಚಾರಕರು ಇದ್ದರೂ ಈಗ ಅವರ ಸಂಖ್ಯೆ 1024ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

12-sagara

Sagara ಉಪ ಅರಣ್ಯ ಸಂಕ್ಷಣಾಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ;ರತ್ನಾಕರ ಹೊನಗೋಡು ಎಚ್ಚರಿಕೆ

11-sagara

Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Madras High Court stays awarding of M.S. Subbulakshmi Award to Krishna

Chennai: ಕೃಷ್ಣಗೆ ಎಂ.ಎಸ್‌.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್‌ ಹೈಕೋರ್ಟ್‌ ತಡೆ

Savarkar defamation case:: Rahul ordered to appear in person on December 2

Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

5

Sullia: ಆಡುಮರಿಯನ್ನು ಅಮಾನುಷವಾಗಿ ಎಳೆದೊಯ್ದ ಬಗ್ಗೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.