ಮೂಡುಬಿದಿರೆ:ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಕಾಡುಕೋಣ ಪ್ರತ್ಯಕ್ಷ! ಅರಣ್ಯ ಇಲಾಖೆಯಿಂದ ಚಿಕಿತ್ಸೆ
Team Udayavani, Jun 17, 2020, 9:52 AM IST
ಮೂಡುಬಿದಿರೆ : ಮೂಡುಬಿದಿರೆ ಪರಿಸರದಲ್ಲಿ ಅಸ್ವಸ್ಥಗೊಂಡ ರೀತಿಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾದ ಘಟನೆ ಮಂಗಳವಾರ ರಾತ್ರಿ 9.30ರ ಸುಮಾರಿಗೆ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ನಡೆದಿದೆ.
ಪುರಸಭಾ ವ್ಯಾಪ್ತಿಯಲ್ಲಿ ಕರಿಂಜೆ ಗ್ರಾಮದ ಕರಿಂಜೆಗುತ್ತು ಪರಿಸರದಲ್ಲಿ ಮಂಗಳವಾರ ಬೆಳಿಗ್ಗೆ ಕಾಣಿಸಿಕೊಂದಿತ್ತು ತಕ್ಷಣ ಸ್ಥಳೀಯರು ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖಾ ಅಧಿಕಾರಿಗಳು ದಿನವಿಡೀ ಹುಡುಕಾಡಿದರು ಸಿಗಲಿಲ್ಲ ರಾತ್ರಿ ಸುಮಾರು 9.30ರ ವೇಳೆಗೆ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ಅಸ್ವಸ್ಥಗೊಂಡ ರೀತಿಯಲ್ಲಿ ಗೋಚರಿಸಿತು.
ಎಳೆಯ ಹರೆಯದ ಈ ಕಾಡುಕೋಣವು ನಾಲಗೆ ಹೊರಚಾಚಿಕೊಂಡು ತೀರಾ ಅಶಕ್ತ ಸ್ಥಿತಿಯೊಂದಿಗೆ ಅಲೆದಾಡುವಂತಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಖೆ ಕಾಡುಕೋಣವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅಸ್ವಸ್ಥಗೊಂಡ ಕಾಡುಕೋಣಕ್ಕೆ ಚಿಕಿತ್ಸೆ ನೀಡಲಾಗುತ್ತಿದ್ದು ಬಳಿಕ ಕಾಡುಕೋಣವನ್ನು ಅರಣ್ಯಕ್ಕೆ ಬಿಡಲಾಗುವುದೆಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Mangaluru: ಕಾರು ಢಿಕ್ಕಿ; ಕಾರ್ಮಿಕ ಮೃತ್ಯು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Mangaluru: ಬೊಂದೇಲ್-ಕಾವೂರು ರಸ್ತೆಯಲ್ಲಿಲ್ಲ ಫುಟ್‌ಪಾತ್
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
MUST WATCH
ಹೊಸ ಸೇರ್ಪಡೆ
Putin: ರಷ್ಯಾ ಅಧ್ಯಕ್ಷ ಪುಟಿನ್ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
IPL 2025: ಗಾವಸ್ಕರ್ ಹೇಳಿಕೆಯನ್ನು ಅಲ್ಲಗಳೆದ ರಿಷಭ್ ಪಂತ್
Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್ ತಾಮ್ರ ಪ್ರತ್ಯಕ್ಷ!
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.