ಒಂದೇ ದಿನ 5 ಸಾವಿರಕೂ ಅಧಿಕ ಮಂದಿ ಬಿಡುಗಡೆ
Team Udayavani, Jun 17, 2020, 10:04 AM IST
ಸಾಂದರ್ಭಿಕ ಚಿತ್ರ
ಮುಂಬಯಿ, ಜೂ. 16: ರಾಜ್ಯಾದ್ಯಂತ 5,000ಕ್ಕೂ ಅಧಿಕ ಸೋಂಕಿತರು ಸೋಮವಾರದಂದು ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಹೊಂದಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಗರಿಷ್ಠ ಸಂಖ್ಯೆಯ ಸೋಂಕು ಪತ್ತೆಯಾಗಿರುವುದರಿಂದ ಈ ಬೆಳವಣಿಗೆ ರಾಜ್ಯ ಆಡಳಿತಕ್ಕೆ ಸಮಾಧಾನ ತಂದಿದೆ. 5,000 ಸೋಂಕಿತರ ಬಿಡುಗಡೆಯಿಂದ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 53,017ರಿಂದ 50,554ಕ್ಕೆ ಇಳಿಸಿದೆ. ಈ ಮಧ್ಯೆ ಸೋಮವಾರ 2,786 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದು ರಾಷ್ಟ್ರೀಯ ಸರಾಸರಿ ಚೇತರಿಕೆ ದರಕ್ಕೆ ಸಮನಾಗಿ ಚೇತರಿಕೆ ದರವು ಶೇ. 50.61ರಷ್ಟು ಸುಧಾರಿಸಿದಂತಾಗಿದೆ. ಸೋಮವಾರ ಬಿಡುಗಡೆಯಾದವರಲ್ಲಿ 4,242 ಮಂದಿ ಮುಂಬಯಿ ಮೂಲದವರು ಎಂದು ತಿಳಿದು ಬಂದಿದೆ. ಇಲ್ಲಿಯವರೆಗೆ ನಾವು 56,089 ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.
ಮುಂಬಯಿಯಲ್ಲಿ ಈವರೆಗೆ ಒಟ್ಟು 39,976 ಸೋಂಕಿತರು ಚೇತರಿಸಿಕೊಂಡಿದ್ದಾರೆ. ನಗರದಲ್ಲಿ 59,293 ಸೋಂಕಿತರಿದ್ದು, ಅವರಲ್ಲಿ 26,910 ರೋಗಿಗಳು ಸಕ್ರಿಯರಾಗಿದ್ದಾರೆ. ಈ ಹಿಂದೆ ಮೇ 29ರಂದು ದಾಖಲೆಯ 8,381 ರೋಗಿಗಳು ಚೇತರಿಸಿಕೊಂಡು ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದ ಮರಣ ಪ್ರಮಾಣವು ಮೇ 25ರಂದು ಶೇ. 3.25ರಿಂದ ಶೇ. 3.73ಕ್ಕೆ ಏರಿದ್ದು, ಜೂನ್ ಮೊದಲ ಹದಿನೈದು ದಿನಗಳಲ್ಲಿ ರಾಜ್ಯವು 1,842 ಸಾವುಗಳನ್ನು ದಾಖಲಿಸಿದೆ. ಕಳೆದ 15 ದಿನಗಳಲ್ಲಿ ರಾಜ್ಯದಲ್ಲಿ ಒಟ್ಟು ಶೇ. 44.62ರಷ್ಟು ಸಾವು ದಾಖಲಾಗಿವೆ. ಕಳೆದ ಹದಿನೈದು ದಿನಗಳಲ್ಲಿ ಕೋವಿಡ್-19 ಸಾವಿನ ಪ್ರಕರಣಗಳಲ್ಲಿ ಏರಿಕೆಯಾಗಿವೆ ಎಂದು ರಾಜ್ಯ ಆರೋಗ್ಯ ಆಯುಕ್ತ ಅನುಪ್ ಕುಮಾರ್ ಯಾದವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.