ಪಿಯು ಇಂಗ್ಲಿಷ್‌ ಪರೀಕ್ಷೆಗೆ ಅಗತ್ಯ ಸಿದ್ಧತೆ

13,330 ಪರೀಕ್ಷಾರ್ಥಿಗಳು 33 ಕೇಂದ್ರ-126 ಹೆಚ್ಚುವರಿ ಕೋಣೆ ಕೋವಿಡ್ ಸುರಕ್ಷತಾ ಕ್ರಮಕ್ಕೆ ಒತ್ತು

Team Udayavani, Jun 17, 2020, 11:24 AM IST

17-June-03

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ: ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಜೂನ್‌ 18ರಂದು ನಡೆಯಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಸುರಕ್ಷತಾ ಕ್ರಮಗಳೊಂದಿಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೋವಿಡ್ ಸೋಂಕು ಒಕ್ಕರಿಸಿದ್ದರಿಂದ ಮಾ. 19ಕ್ಕೆ ನಡೆಯಬೇಕಿದ್ದ ಇಂಗ್ಲಿಷ್‌ ಪರೀಕ್ಷೆಯನ್ನು ಅನಿವಾರ್ಯವಾಗಿ ಮುಂದೂಡಲಾಗಿತ್ತು. ಈಗಾಗಲೇ 5 ವಿಷಯಗಳ ಪರೀಕ್ಷೆಯನ್ನು ನಡೆಸಿರುವ ಪಿಯು ಇಲಾಖೆ ಈಗ ಬಾಕಿಯಿದ್ದ ಇಂಗ್ಲಿಷ್‌ ಪರೀಕ್ಷೆಯನ್ನು ಜೂ.18ಕ್ಕೆ ನಿಗದಿಪಡಿಸಿದೆ.

ಜಿಲ್ಲೆಯಲ್ಲಿ ಈ ಬಾರಿ ಒಟ್ಟು 13,330 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 33 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ. ಈ ಪೈಕಿ ಬೀದರ ನಗರದಲ್ಲೇ 13 ಕೇಂದ್ರಗಳಿವೆ. ಹುಮನಾಬಾದ 7, ಭಾಲ್ಕಿ, ಬಸವಕಲ್ಯಾಣದಲ್ಲಿ ತಲಾ 5 ಮತ್ತು ಔರಾದನಲ್ಲಿ 3 ಪರೀಕ್ಷಾ ಕೇಂದ್ರಗಳು ಸೇರಿವೆ. ಕೊರೊನಾ ಆತಂಕ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 126 ಹೆಚ್ಚುವರಿ ಸೇರಿ ಒಟ್ಟಾರೆ 626 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದೊಡ್ಡ ಕೋಣೆಯಲ್ಲಿ 30ರ ಬದಲು 24 ಮಕ್ಕಳು, ಸಣ್ಣ ಕೋಣೆಯಲ್ಲಿ 18ರ ಬದಲು 12 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ.

ಕೋವಿಡ್ ಸೋಂಕು ಹೆಚ್ಚುತ್ತಿರುವ ಕಾರಣ ಶಿಕ್ಷಣ ಇಲಾಖೆ ಸುರಕ್ಷತಾ ಕ್ರಮಕ್ಕೆ ಒತ್ತು ನೀಡಿದ್ದು, ಅಂತರ ಪಾಲನೆ, ಥರ್ಮಲ್‌ ಸ್ಕ್ರೀನಿಂಗ್‌ ಹಾಗೂ ಮಾಸ್ಕ್ವಿ ತರಣೆಗೆ ಕ್ರಮ ಕೈಗೊಂಡಿದೆ. ಪರೀಕ್ಷಾ ಕೇಂದ್ರದ ಹೊರಗೆ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಥರ್ಮಲ್‌ ಸ್ಕ್ಯಾನಿಂಗ್‌ ಮಾಡುವುದು, ಅವರಲ್ಲಿ ಜ್ವರ ಲಕ್ಷಣ ಕಂಡು ಬಂದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ನಗರದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್‌ ಮಾಡಿ ಶುಚಿಗೊಳಿಸಿದ್ದರೆ, ಜಿಲ್ಲೆಯ ಇನ್ನುಳಿದ ಕೇಂದ್ರಗಳಲ್ಲಿ ಆಯಾ ನಗರಸಭೆ ಮತ್ತು ಪುರಸಭೆ ಮೂಲಕ ಔಷಧ ಸಿಂಪರಣೆ ಕಾರ್ಯ ನಡೆಸಲಾಗಿದೆ.

ಮೂಲ ಕೇಂದ್ರದಲ್ಲೇ ಪರೀಕ್ಷೆ
ತಾಂತ್ರಿಕ ಸಮಸ್ಯೆಯಿಂದ ಅಂತರ್‌ ಜಿಲ್ಲಾ ವ್ಯಾಪ್ತಿಯಲ್ಲಿ ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡಿದ್ದ ಮಕ್ಕಳು ಈಗ ಮೂಲ ಕೇಂದ್ರದಲ್ಲೇ ಪರೀಕ್ಷೆ ಎದುರಿಸಬೇಕು ಎಂದು ಪಿಯು ಇಲಾಖೆ ಆದೇಶಿಸಿದ್ದರಿಂದ ವಿದ್ಯಾರ್ಥಿಗಳು ಗೊಂದಲದಲ್ಲಿದ್ದಾರೆ. ಲಾಕ್‌ಡೌನ್‌ ಮೊದಲು ಐದು ಪರೀಕ್ಷೆಗಳನ್ನು ಬರೆದಿರುವ ಕೇಂದ್ರದಲ್ಲೇ ಇಂಗ್ಲಿಷ್‌ ಪರೀಕ್ಷೆ ಎದುರಿಸಬೇಕಿದೆ. ಇಲಾಖೆ ತೀರ್ಮಾನದ ವಿರುದ್ಧ ವಿದ್ಯಾರ್ಥಿ- ಪಾಲಕರಿಂದ ಆಕ್ರೋಶ ವ್ಯಕ್ತವಾಗಿದೆ.

ಪಿಯುಸಿ ಇಂಗ್ಲಿಷ್‌ ಪರೀಕ್ಷೆಯನ್ನು ಜಾಗರೂಕತೆಯಿಂದ ನಡೆಸಲು ಪಿಯು ಇಲಾಖೆಯಿಂದ ಅಗತ್ಯ ಕ್ರಮ ವಹಿಸಿದ್ದು, ವಿದ್ಯಾರ್ಥಿಗಳು ನಿರ್ಭಯವಾಗಿ ಪರೀಕ್ಷೆ ಬರೆಯಬೇಕು. ಪರೀಕ್ಷೆಗಾಗಿ 626 ಕೋಣೆ ಮೇಲ್ವಿಚಾರಕ, 32 ಮುಖ್ಯ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಗೂ ಕ್ರಮ ಕೈಗೊಳ್ಳಲಾಗಿದೆ.
ರಮೇಶ ಬೆಜಗಂ,
ಡಿಡಿಪಿಯು ಬೀದರ

ಟಾಪ್ ನ್ಯೂಸ್

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

Priyank-Gandhi

Parliament: ʼಪ್ಯಾಲೆಸ್ತೀನ್‌ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.