ಅಪಹೃತ ಸಿಬಂದಿಗೆ ಹಿಂಸೆ? ಪಾಕ್ ಹಿಂಸಾವಿನೋದ; ಭಾರತ ತೀಕ್ಷ್ಣ ಎಚ್ಚರಿಕೆ
Team Udayavani, Jun 17, 2020, 11:34 AM IST
ಹೊಸದಿಲ್ಲಿ: ಇಸ್ಲಾಮಾಬಾದ್ನಲ್ಲಿರುವ ಭಾರತೀಯ ದೂತಾವಾಸದ ಇಬ್ಬರು ಭದ್ರತಾ ಸಿಬಂದಿಯನ್ನು ಅಪಹರಿಸಿದ್ದ ಪಾಕ್ ಗುಪ್ತಚರ ಏಜೆನ್ಸಿ ಐಎಸ್ಐಯ ದುರುಳರು ಅವರಿಗೆ ಚಿತ್ರಹಿಂಸೆ ನೀಡಿರುವುದು ಈಗ ಬಹಿರಂಗವಾಗಿದೆ. ಈ ಬಗ್ಗೆ ಆಕ್ರೋಶಗೊಂಡಿರುವ ಭಾರತವು ಈ ಘಟನೆ ವಿಯೆನ್ನಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದಿದೆಯಲ್ಲದೆ ಪಾಕ್ ಜತೆಗಿನ ರಾಜತಾಂತ್ರಿಕ ಸಂಬಂಧ ಕಡಿದುಕೊಳ್ಳುವ ಗಂಭೀರ ಎಚ್ಚರಿಕೆ ರವಾನಿಸಿದೆ.
ಸೋಮವಾರ ಬೆಳ ಗ್ಗೆ ಭಾರತೀಯ ದೂತಾವಾಸದ ಇಬ್ಬರು ಭದ್ರತಾ ಸಿಬಂದಿಯಯನ್ನು ಹಿಂಬಾಲಿಸಿ ಅಪಹರಿಸಿದ್ದ ಐಎಸ್ಐಯ ಅಧಿಕಾರಿಗಳು ಇಡೀ ದಿನ ಅವರಿಗೆ ಚಿತ್ರಹಿಂಸೆ ನೀಡಿದ್ದಾರೆ. ಭಾರತೀಯ ದೂತಾವಾಸದ ಅಧಿಕಾರಿಗಳ ಕೆಲಸದ ವಿವರ ಕಲೆ ಹಾಕಲು ಪ್ರಯತ್ನಿಸಿ ರಾಡ್ನಿಂದ ಥಳಿಸಿದ್ದಾರೆ. ಕುಡಿಯಲು ಕೊಳಚೆ ನೀರನ್ನು ನೀಡಿದ್ದಾರೆ. ಸಿಬಂದಿಯ ದೇಹದಲ್ಲಿ ಗಾಯಗಳುಂಟಾದ ಬಳಿಕ ಮುಖ ಮರೆಸಿಕೊಳ್ಳಲು ಅಪಘಾತದ ಕಥೆ ಕಟ್ಟಿದ್ದಾರೆ ಎಂದು ಕೆಲವು ಪಾಕ್ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ರಾಜತಾಂತ್ರಿಕ ಸಂಬಂಧ ಸ್ಥಗಿತ: ಭಾರತ
ಈ ಮಾಹಿತಿ ಬಹಿರಂಗಗೊಳ್ಳುತ್ತಲೇ ಕ್ರುದ್ಧವಾಗಿರುವ ಭಾರತವು, ಈ ಘಟನೆ ವಿಯೆನ್ನಾ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಎಂದಿದೆ. ಭಾರತೀಯ ರಾಜತಾಂತ್ರಿಕ ಅಧಿಕಾರಿಗಳ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದರೆ ಪಾಕ್ ಜತೆಗಿನ ರಾಜತಾಂತ್ರಿಕ ಸಂಬಂಧವನ್ನೇ ಕಡಿದುಕೊಳ್ಳಬೇಕಾದೀತು ಎಂದು ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.