ಮಾಸ್ಕ್ ಧರಿಸದೆ ಓಡಾಡಿದ್ರೆ ದಂಡ ವಿಧಿಸಲು ಸೂಚನೆ
Team Udayavani, Jun 17, 2020, 3:51 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಗುರುಮಠಕಲ್: ಮಾಸ್ಕ್ ಧರಿಸದೆ ಓಡಾಡುವ ಜನರಿಗೆ ಇನ್ನು ಮುಂದೆ ದಂಡ ವಿಧಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಜೀವನಕುಮಾರ ಎಚ್ಚರಿಸಿದ್ದಾರೆ.
ಪಟ್ಟಣದ ಪುರಸಭೆ ಕಚೇರಿಯಲ್ಲಿ ನಡೆದ ಕಿರಾಣಿ ಅಂಗಡಿಗಳ ಮಾಲೀಕರು ಹಾಗೂ ಬೀದಿ ವ್ಯಾಪರಸ್ಥರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ರೋಗ ನಮ್ಮ ಕ್ಷೇತ್ರದಲ್ಲಿ ಹೆಚ್ಚು ಪ್ರಸರಣವಾಗುತ್ತಿದೆ. ಜನರು ಅಂಗಡಿಗಳಿಗೆ ವ್ಯಾಪಾರ ಮಾಡಲು ಬಂದಾಗ ಮಾಸ್ಕ್ ಧರಿಸಿಕೊಳ್ಳುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಬೇಕು. ಅಂಗಡಿ ಮುಂಭಾಗಗಳಲ್ಲಿ ಯಾರಾದರೂ ತಂಬಾಕು, ಗುಟ್ಕಾ ಉಗುಳಿದರೆ, ಸಿಗರೇಟ್ ಸೇದುತ್ತಿರುವುದು ಕಂಡು ಬಂದಲ್ಲಿ ಮಾಲೀಕರಿಗೆ ದಂಡ ವಿಧಿಸಲಾಗುವುದು ಎಂದು ಅವರು ಹೇಳಿದರು.
ಅಂಗಡಿಯಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್ ಇಟ್ಟಿರಬೇಕು. ಒಟ್ಟಾರೆ ಸ್ವಚ್ಛತೆ ಕಾಪಾಡಬೇಕು. ನಾವೆಲ್ಲರು ಕೂಡಿ ಕೋವಿಡ್ ತಡೆಯಬೇಕಾಗಿದೆ. ರಸ್ತೆಯಲ್ಲಿ ಜನರು ಮಾಸ್ಕ್ ಇಲ್ಲದೆ ಓಡಾಡಿದರೆ ಇನ್ನು ಮುಂದೆ 1000 ರೂ. ದಂಡ ಹಾಕಲಾಗುವುದು ಎಂದು ಹೇಳಿದರು. ತಹಶೀಲ್ದಾರ್ ಸಂಗಮೇಶ ಜಿಡಗಿ, ಪುರಸಭೆ ಸದಸ್ಯರು, ಕಿರಾಣಿ ಅಂಗಡಿ ಹಾಗೂ ಬೀದಿ ವ್ಯಾಪಾರಸ್ಥರು, ಪುರಸಭೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.