ಸ್ಮಾರ್ಟ್‌ಸಿಟಿ, ಕುಡ್ಸೆಂಪ್‌ ಕಾಮಗಾರಿ ನಿಗಾ ವಹಿಸಲು ಪ್ರತ್ಯೇಕ ತಂಡ: ಶಾಸಕ ಕಾಮತ್‌

Team Udayavani, Jun 18, 2020, 5:56 AM IST

ಸ್ಮಾರ್ಟ್‌ಸಿಟಿ, ಕುಡ್ಸೆಂಪ್‌ ಕಾಮಗಾರಿ ನಿಗಾ ವಹಿಸಲು ಪ್ರತ್ಯೇಕ ತಂಡ: ಶಾಸಕ ಕಾಮತ್‌

ಮಹಾನಗರ: ಮಂಗಳೂರು ಸ್ಮಾರ್ಟ್‌ ಸಿಟಿ – ಕುಡ್ಸೆಂಪ್‌ ಕಾಮಗಾರಿಗಳ ಪ್ರಗತಿ ಪರಿಶೀಲನ ಸಭೆ ಶಾಸಕ ವೇದವ್ಯಾಸ್‌ ಕಾಮತ್‌ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಕುಡಿಯುವ ನೀರು ಸರಬರಾಜು ಹಾಗೂ ಯುಜಿಡಿ ಕಾಮಗಾರಿಗಳ ಕುರಿತು ಸಾರ್ವಜನಿಕ ವಲಯದಲ್ಲಿ ಕೇಳಿಬರುವ ದೂರುಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರತ್ಯೇಕ ತಂಡ ರಚನೆಗೆ ಸಭೆಯಲ್ಲಿ ನಿರ್ಧರಿಸಲಾಯಿತು.

ಈಗಾಗಲೇ ಸ್ಮಾರ್ಟ್‌ ಸಿಟಿ ಹಾಗೂ ಕುಡ್ಸೆಂಪ್‌ ಯೋಜನೆಗಳ ಅನೇಕ ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ. ಈಗ ಪ್ರಗತಿ ಹಂತದಲ್ಲಿರುವ ಪ್ರತಿಯೊಂದು ಕಾಮಗಾರಿಯೂ ಕೂಡ ಯಾವ ಹಂತದಲ್ಲಿದೆ ಹಾಗೂ ಕಾಮಗಾರಿಯ ವಿವರ ಸಂಗ್ರಹಿಸಲು ಮನಪಾ ಸದಸ್ಯರ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳು, ಸ್ಮಾರ್ಟ್‌ ಸಿಟಿ ಹಾಗೂ ಕುಡ್ಸೆಂಪ್‌ ಅಧಿಕಾರಿಗಳನ್ನೊಳಗೊಂಡ ತಾಂತ್ರಿಕ ತಂಡ ರಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಈ ತಾಂತ್ರಿಕ ತಂಡ ನಗರದಲ್ಲಿ ನಗರ ಪಾಲಿಕೆ, ಕುಡ್ಸೆಂಪ್‌ ಹಾಗೂ ಸ್ಮಾರ್ಟ್‌ಸಿಟಿ ಯೋಜನೆಯಡಿ ಈಗಾಗಲೇ ಪೂರ್ಣಗೊಂಡಿರುವ ಅಥವಾ ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಪ್ರತ್ಯೇಕವಾಗಿ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಲಿದೆ. ಕಾಮಗಾರಿಯಲ್ಲಿ ದೋಷಗಳು ಕಂಡು ಬಂದರೆ ಅದನ್ನು ಸರಿಪಡಿಸಲು ಏನೆಲ್ಲ ಕ್ರಮ ಕೈಗೊಳ್ಳಬಹುದು ಎನ್ನುವುದನ್ನು ಮುಂದಿನ ದಿನಗಳಲ್ಲಿ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್‌ ನಜೀರ್‌, ಕುಡ್ಸೆಂಪ್‌ ಪ್ರಾಜೆಕ್ಟ್ ಡೈರೆಕ್ಟರ್‌ ಮಂಜುನಾಥ್‌, ಪಾಲಿಕೆ ಸ್ಥಾಯೀ ಸಮಿತಿ ಅಧ್ಯಕ್ಷ ಪ್ರೇಮಾನಂದ ಶೆಟ್ಟಿ, ಎಸ್‌.ಇ.ಝೆಡ್‌ ಅಧಿಕಾರಿಗಳು, ಪಾಲಿಕೆ ಸದಸ್ಯರು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕುಡಿಯುವ ನೀರು ಪೈಪ್‌ಲೈನ್‌; ಪುನರ್‌ ಪರಿಶೀಲನೆ
ನಗರದಲ್ಲಿ ಪ್ರತೀ ಮನೆಗೂ ದಿನದ 24 ಗಂಟೆ ಕುಡಿಯುವ ನೀರು ಒದಗಿಸುವ ಅಮೃತ್‌ ಯೋಜನೆ ಕಾಮಗಾರಿಯ ಕುರಿತು ಮಾಹಿತಿ ಪಡೆಯಲಾಗಿದೆ. ನಗರದಲ್ಲಿ ನೀರು ಸರಬರಾಜಿಗೆ ಗುರುತಿಸಿರುವ 48 ಝೋನ್‌ಗಳ ಪೈಕಿ 18 ಝೋನ್‌ಗಳಲ್ಲಿ ಸರ್ವೆ ಕಾರ್ಯ ಪೂರ್ಣಗೊಂಡಿದೆ. ಇನ್ನುಳಿದ ಝೋನ್‌ಗಳ ಸರ್ವೆ ಕಾರ್ಯಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಕುಡಿಯುವ ನೀರಿನ ಪೈಪ್‌ಲೈನ್‌ಗಳ ಪುನರ್‌ ಪರಿಶೀಲನೆ, ಪಂಪಿಂಗ್‌ ವ್ಯವಸ್ಥೆಗಳ ಪರಿಶೀಲನೆ ನಡೆಸಿ ಸಂಪೂರ್ಣ ವರದಿ ಪಡೆಯಲಾಗುವುದು ಎಂದು ವೇದವ್ಯಾಸ್‌ ಕಾಮತ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.