ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ಧತಿ ಅರ್ಜಿ ವಜಾಗೊಳಿಸಿದ ಸುಪ್ರೀಂ
Team Udayavani, Jun 18, 2020, 5:37 AM IST
ಬೆಂಗಳೂರು: ಕರ್ನಾಟಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ಕುರಿತ ಬೆಳಗಾವಿಯ ರಾಜಶ್ರೀ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಲ್ .ನಾಗೇಶ್ವರರಾವ್, ಕೃಷ್ಣ ಮುರಾರಿ, ಎಸ್. ರವೀಂದ್ರಭಟ್ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
“ಅರ್ಜಿ ವಿಚಾರಣೆಗೆ ಯೋಗ್ಯವಾಗಿಲ್ಲ. ಸರ್ಕಾರದ ನಿರ್ಧಾರದಲ್ಲಿ ಮಧ್ಯ ಪ್ರವೇಶ ಸರಿಯಲ್ಲ. ಈಗಾಗಲೇ ಈ ಸಂಬಂಧ ಹೈಕೋರ್ಟ್ ನೀಡಿರುವ ತೀರ್ಪು ಸರಿಯಾಗಿದೆ’ ಎಂದು ನ್ಯಾಯಪೀಠ ಹೇಳಿದೆ. ಇದರಿಂದಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾದಿ ಸುಗಮವಾದಂತಾಗಿದೆ. ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದರು. ಸುಪ್ರೀಂ ಕೋರ್ಟ್‌ನ ಈ ತೀರ್ಪಿನಿಂದಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಗದಿತ ವೇಳಾಪಟ್ಟಿ ಅನುಸಾರ ನಡೆಯಲಿವೆ.
ಕೋವಿಡ್-19 ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಸಾಕಷ್ಟು ಪರ- ರೋಧ ಚರ್ಚೆ ನಡೆದಿದ್ದವು. ಈ ಮಧ್ಯೆ, ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಪರೀಕ್ಷೆ ನಡೆಸಲು ಸುರಕ್ಷತಾ ಮತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾರ್ಗಸೂಚಿಗಳನ್ನು(ಎಸ್‌ಒಪಿ) ಸಲ್ಲಿಸಿತ್ತು.
ಇದನ್ನು ಪರಿಗಣಿಸಿದ್ದ ಹೈಕೋರ್ಟ್, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ಮೇ 27ರಂದು ಅರ್ಜಿ ಇತ್ಯರ್ಥಪಡಿಸಿತ್ತು. ಹೈಕೋರ್ಟ್ ಮೇ 27ರಂದು ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಜೂ.9ರಂದು ವಿಶೇಷ ಮೇಲ್ಮನವಿ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.