ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ ಪಡೆದ ಶಾಲೆಗೆ ಬಹುಮಾನ
Team Udayavani, Jun 18, 2020, 6:40 AM IST
ಹಾಸನ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಮೊದಲ ಸ್ಥಾನಗಳಿಸುವ ಶಾಲೆಗೆ ವೈಯಕ್ತಿಕವಾಗಿ ಒಂದು ಲಕ್ಷ ರೂ. ಬಹುಮಾನ ನೀಡ ಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಘೋಷಣೆ ಮಾಡಿದರು. ನಗರದ ಸಂತ ಜೋಸೆಫರ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಿದ್ಧತೆ ಪರಿಶೀಲನೆ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಕಳೆದ ವರ್ಷದ ಫಲಿತಾಂಶದಲ್ಲಿ ಹಾಸನ ಜಿಲ್ಲೆಯು ರಾಜ್ಯದಲ್ಲಿ ಮೊದಲ ಸ್ಥಾನ ಗಳಿ ಸಿತ್ತು. ಈ ಬಾರಿಯೂ ಅದೇ ರೀತಿಯ ಫಲಿತಾಂಶ ಬರಬೇಕು ಎಂದರು. ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ 89 ಪರೀಕ್ಷಾ ಕೇಂದ್ರಗಳಲ್ಲಿ 21,257 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಕೇಂದ್ರದಲ್ಲಿಯೂ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್‌ಆರ್‌ಟಿಸಿ ಡಿಸಿ ಜೊತೆಗೆ ಚರ್ಚಿಸಲಾಗಿದೆ ಎಂದು ವಿವರಿಸಿದರು.
ಮುಳ್ಳಿನ ಮೇಲಿನ ನಡಿಗೆ: ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವನಾಗಿ ಕೆಲಸ ಮಾಡುವುದು ಮುಳ್ಳಿನ ಮೇಲೆ ನಡೆದಂತೆ. ಕೆ. ಗೋಪಾಲಯ್ಯ ಅವರು ತಮ್ಮ ಕ್ಷೇತ್ರವನ್ನು ಮಾದರಿಯನ್ನಾಗಿ ಅಭಿವೃದ್ಧಿ ಮಾಡಿದ್ದಾರೆ. ಹಾಸನವನ್ನು ಅದೇ ರೀತಿ ಅಭಿವೃದಿಟಛಿ ಪಡಿಸಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಎಲ್ಲಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 9 ಸಾವಿರ ಮಾಸ್ಕ್ ಹಸ್ತಾಂತರಿಸಿದರು. ಡಿಡಿಪಿಐ ಕೆ.ಎಸ್.ಪ್ರಕಾಶ್, ಎಸ್ಪಿ ಆರ್. ಶ್ರೀನಿವಾಸ್‌ಗೌಡ, ಜಿಪಂ ಸಿಇಒ ಬಿ.ಎ. ಪರಮೇಶ್, ಎಸಿ ಡಾ.ನವೀನ್ ಭಟ್, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಡಾ.ವೈ.ಎಸ್. ವೀರಭದ್ರಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.