ಪರಿಷತ್‌: ಹಿರಿಯರಿಗೆ ಮಣೆ ಹಾಕಿದ ಹೈಕಮಾಂಡ್‌


Team Udayavani, Jun 18, 2020, 8:04 AM IST

high command

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಬಿ.ಕೆ.ಹರಿಪ್ರಸಾದ್‌ ಹಾಗೂ ನಸೀರ್‌ ಅಹಮದ್‌ ಅವರಿಗೆ ಅವಕಾಶ ಕಲ್ಪಿಸಿದೆ. ಮತ್ತೆ ಹಿರಿಯ ನಾಯಕರನ್ನು ಪರಿಗಣಿಸಿದ್ದು,  ಹೊಸಬರಿಗೆ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಜೂ.29 ರಂದು ನಡೆಯುವ ವಿಧಾನ ಪರಿಷತ್ತಿನ ಏಳು ಸ್ಥಾನಗಳ ಪೈಕಿ ಕಾಂಗ್ರೆಸ್‌ಗೆ ದೊರೆಯುವ 2 ಸ್ಥಾನಗಳಿಗೆ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಹೈಕಮಾಂಡ್‌ ಮಟ್ಟದಲ್ಲಿ ಲಾಬಿ ನಡೆಸಿದ್ದರು.

ರಾಜ್ಯ ನಾಯಕರು ಎಂ.ಸಿ.ವೇಣುಗೋಪಾಲ್‌, ಎಂ.ಆರ್‌. ಸೀತಾರಾಮ್‌, ನಸೀರ್‌ ಅಹಮದ್‌ ಹಾಗೂ ಐವಾನ್‌ ಡಿಸೋಜಾ ಹೆಸರು ಗಳನ್ನು ಶಿಫಾರಸು ಮಾಡಿದ್ದರು. ಆದರೆ, ಪಟ್ಟಿಯನ್ನು  ಪರಿಷ್ಕರಿಸಿ ಕಳುಹಿಸುವಂತೆ ಹೈಕಮಾಂಡ್‌ ವಾಪಸ್‌ ಕಳುಹಿಸಿತ್ತು. ಹೈಕಮಾಂಡ್‌ ನಿರ್ದೇಶನದಂತೆ ಪರ್ಯಾಯ ಹೆಸರು ಶಿಫಾರಸು ಮಾಡುವ ಕುರಿತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಾಯಕರು ಸಭೆ ಸೇರಿ  ಚರ್ಚೆ ನಡೆಸಿದ್ದರು. ಹೊಸಬರಿಗೆ ಅವಕಾಶ ಕಲ್ಪಿಸಲು ರಾಹುಲ್‌ ಗಾಂಧಿ ಮೂಲಕ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಶಾಕೀರ್‌ ಸನದಿಗೆ ಅವಕಾಶ ಕಲ್ಪಿಸಲು ಹೈಕಮಾಂಡ್‌ ನಾಯಕರು ಒಲವು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಆದರೆ, ಸಿದ್ದರಾಮಯ್ಯ ತಾವು ಸೂಚಿಸಿರುವ ನಸೀರ್‌ ಅಹಮದ್‌ ಅವರನ್ನು ಪರಿಗಣಿಸುವಂತೆ ಪಟ್ಟು ಹಿಡಿದಿದ್ದರಿಂದ ಕೊನೆ ಕ್ಷಣದಲ್ಲಿ ಮತ್ತೆ ನಸೀರ್‌ ಅಹಮದ್‌ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ. ಅಲ್ಲದೆ,  ಎಂ.ಆರ್‌.ಸೀತಾರಾಮ್‌ ಬದಲು ಹಿಂದುಳಿದ ವರ್ಗಕ್ಕೆ ಸೇರಿದ ಪರ್ಯಾಯ ಹೆಸರು ರಾಜ್ಯ ನಾಯಕರು ಸೂಚಿಸುವುದರಲ್ಲಿ ಬಿ.ಕೆ. ಹರಿಪ್ರಸಾದ್‌ ದೆಹಲಿಯಲ್ಲಿ ಕುಳಿತು ಹೈಕಮಾಂಡ್‌ ಮಟ್ಟದಲ್ಲಿ ಲಾಬಿ ಮಾಡಿ ಸೀಟು ಗಿಟ್ಟಿಕೊಳ್ಳುವಲ್ಲಿ  ಯಶಸ್ವಿಯಾಗಿದ್ದಾರೆ.

ಸಿದ್ದು ಹಿಡಿತ: ಎರಡು ಸ್ಥಾನಗಳಲ್ಲಿ ಒಂದು ಅಲ್ಪ ಸಂಖ್ಯಾತರಿಗೆ ಮತ್ತೂಂದು ಹಿಂದುಳಿದ ವರ್ಗದವರಿಗೆ ನೀಡಬೇಕೆಂದು ಪಕ್ಷದ ನಾಯಕರು ಒಮ್ಮತದಿಂದ ತೀರ್ಮಾನಿಸಿದ್ದರು. ಅದರಂತೆ  ಸಿದ್ದರಾಮಯ್ಯ ಅಲ್ಪ  ಸಂಖ್ಯಾತ ಸಮುದಾಯಕ್ಕೆ ಸೇರಿದ್ದ ನಜೀರ್‌ ಅಹಮದ್‌ಗೆ ಟಿಕೆಟ್‌ ಕೊಡಿಸಲು ಪಟ್ಟು ಹಿಡಿದುಕೊಂಡಿದ್ದರು. ಇನ್ನು ಹಿಂದುಳಿದ ವರ್ಗದ ಆಕಾಂಕ್ಷಿಗಳಲ್ಲಿ ಪ್ರಮುಖವಾಗಿ ಮಾಜಿ ಸಚಿವ ಎಂ.ಆರ್‌.ಸೀತಾರಾಮ್‌ ಅವರಿಗೆ ಕೊಡಿಸಲು ಮಲ್ಲಿಕಾರ್ಜುನ  ಖರ್ಗೆ ಒಲವು ವ್ಯಕ್ತಪಡಿಸಿದ್ದರು. ಆದರೆ, ಹೈಕಮಾಂಡ್‌ ಸಿದ್ದರಾಮಯ್ಯ ಬೇಡಿಕೆಗೆ ಮನ್ನಣೆ ನೀಡಿದ್ದು, ಅವರು ಈಗಲೂ ಪಕ್ಷದಲ್ಲಿ ಪರ್ಯಾಯ ಶಕ್ತಿಕೇಂದ್ರ ಎಂಬುದನ್ನು ಸಾಬೀತು ಪಡಿಸಿದಂತಾಗಿದೆ.

ಹೊಸಬರಿಗೆ ನಿರಾಸೆ: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರಿಂದ ಕಾಂಗ್ರೆಸ್‌ ನಲ್ಲೂ ಅದೇ ಮಾದರಿ ಅನುಸರಿಸಬೇಕು ಎಂದು ಅನೇಕ ಆಕಾಂಕ್ಷಿಗಳು ರಾಜ್ಯ, ಕೇಂದ್ರದ ನಾಯಕರ ಮೇಲೆ  ಒತ್ತಡ ಹೇರಿದ್ದರು. ಹೈಕಮಾಂಡ್‌ ಹಳೆಯ ಸಂಪ್ರದಾಯವನ್ನೇ ಮುಂದುವರಿಸಿದೆ. ಅಧ್ಯಕ್ಷರಿಗೆ ಸಿಗದ ಮನ್ನಣೆ: ರಾಜ್ಯಸಭೆ ಚುನಾವಣೆಗೆ ಹೈಕಮಾಂಡ್‌ ರಾಜ್ಯ ನಾಯಕರ ಅಭಿಪ್ರಾಯ ಕೇಳದೇ ಖರ್ಗೆಯವರನ್ನು ಅಭ್ಯ ರ್ಥಿಯನ್ನಾಗಿ  ಘೋಷಣೆ ಮಾಡಿತ್ತು. ಈಗ ಪರಿಷತ್‌ ಚುನಾವಣೆಗೂ ಪಕ್ಷದ ಅಧ್ಯಕ್ಷರ ಕಡೆಯಿಂದ ಕಳುಹಿಸಿದ್ದ ಸಂಭಾವ್ಯರ ಪಟ್ಟಿಯನ್ನು ಪರಿಗಣಿಸದೇ ಇರುವುದರಿಂದ ಡಿ.ಕೆ.ಶಿವಕುಮಾರ್‌ ಪ್ರಯತ್ನಕ್ಕೆ ಮನ್ನಣೆ ದೊರೆತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.