ಅಕ್ರಮ ಮರಳು ಸಾಗಾಟ: ಗೋವಾದ ಲಾರಿ ವಶ
Team Udayavani, Jun 18, 2020, 8:55 AM IST
ಹಳಿಯಾಳ: ವಶಪಡಿಸಿಕೊಂಡ ಅಕ್ರಮ ಮರಳು ಸಾಗಾಟದ ಲಾರಿಯೊಂದಿಗೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿ.
ಹಳಿಯಾಳ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಗೋವಾ ನೋಂದಣಿಯ ಮರಳು ಲಾರಿಯನ್ನು ತಾಲೂಕಿನ ಕರ್ಕಾ ಚೆಕ್ಫೋಸ್ಟ್ ಬಳಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಳಿಯಾಳ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ, ಸಾಗಾಣಿಕೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ
ಧಿಕಾರಿಗಳು ಮತ್ತು ಸಹಾಯಕ ಕಮಿಷನರ್ ಅವರು ಅಕ್ರಮ ಮರಳುಗಾರಿಕೆ ತಡೆಯಲು ಸಂಚಾರಿ ದಳವನ್ನು ಮಾಡಿ ಗಸ್ತು ತಿರುಗುವಂತೆ ಆದೇಶಿಸಿದ್ದದ್ದರು. ಈ ಹಿನ್ನೆಲೆ ಮಧ್ಯರಾತ್ರಿ 1.30ರ ಸುಮಾರಿಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಗೋವಾ ನೋಂದಣಿಯ ಲಾರಿಯನ್ನು ವಶಕ್ಕೆ ಪಡೆಯುವಲ್ಲಿ ಗಸ್ತು ತಂಡ ಸಫಲವಾಗಿದೆ.
ಕಂದಾಯ ಇಲಾಖೆಯ ಆರ್ಐ ಅನಿಲ ಪರ್ವತ, ಗ್ರಾಪಂ ಕಾರ್ಯದರ್ಶಿ ಗಿರೀಶ ಬಿರಾದಾರ, ಎಎಸ್ಐ ಮಹಾಬಲೇಶ್ವರ ಗಡೆರ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಕಾರವಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.