ತರಗತಿ ಪ್ರಾರಂಭಿಸದಂತೆ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಪ್ರಾಥಮಿಕ ಮತ್ತು ಪೂರ್ವಪ್ರಾಥಮಿಕ ಶಾಲೆಗಳಿಗೆ ಆನ್‌ಲೈನ್ ಮತ್ತು ಆಫ್ಲೈನ್ ಕ್ಲಾಸ್
Team Udayavani, Jun 18, 2020, 10:24 AM IST
ಮುಂಬಯಿ: ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಆನ್‌ಲೈನ್ ಮತ್ತು ಆಫ್ಲೈನ್ ತರಗತಿಗಳನ್ನು ಸೆಪ್ಟಂಬರ್‌ವರೆಗೆ ಪ್ರಾರಂಭಿಸುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ (ಪಿಐಎಲ್) ಸ್ಪಂದಿಸುವಂತೆ ಬಾಂಬೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಅರ್ಜಿಗೆ ಪ್ರತಿಕ್ರಿಯಿಸಿದ ಸರಕಾರ, 2ನೇ ತರಗತಿಯವರೆಗಿನ ಶಾಲೆಗಳನ್ನು ಸೆಪ್ಟಂಬರ್‌ವರೆಗೆ ತೆರೆಯಲಾಗುವುದಿಲ್ಲ ಎಂದು ಸೋಮವಾರ ಅಧಿಸೂಚನೆ ಹೊರಡಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಅನಂತರ, 14 ವರ್ಷದವರೆಗಿನ ಮಕ್ಕಳಿಗೆ ತರಗತಿಗಳು ಪ್ರಾರಂಭವಾಗುವ ಸ್ಥಿತಿಯ ಬಗ್ಗೆ ತಿಳಿಯಲು ನ್ಯಾಯಾಲಯವು ಕೋರಿತು.
ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಕೆ. ಕೆ. ಟೇಟೆಡ್ ಅವರ ವಿಭಾಗೀಯ ಪೀಠ, ಸರಕಾರೇತರ ಸಂಸ್ಥೆ ಎಜ್ರಾ ಫೌಂಡೇಶನ್ ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸುತ್ತಿ ರುವಾಗ, ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಕೀಲರಾದ ಶಶಿಕಾಂತ್ ಚೌಧರಿ ಮತ್ತು ಮನೋಜ್ ಕುಮಾರ್ ಸಿಂಗ್ ಅವರು ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಹಲವಾರು ವಿಷಯಗಳ ಕುರಿತು ಪ್ರಸ್ತಾವಿಸಿದರು.
ಕೋವಿಡ್ ಸೋಂಕಿನ ಸಮಯದಲ್ಲಿ 14 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಶಾಲೆಗೆ ಬರಲು ಹೇಳಿದರೆ ಮಕ್ಕಳನ್ನು ಅಪಾಯಕ್ಕೆ ತಲ್ಲಿದಂತಾಗುತ್ತದೆ. ದೀರ್ಘಾವಧಿಯವರೆಗೆ ಆನ್‌ಲೈನ್ ತರಗತಿಗಳಿಗೆ ಹಾಜರಾಗುವುದರಿಂದ ಅವರ ಆರೋಗ್ಯಕ್ಕೂ ಮತ್ತಷ್ಟು ಅಪಾಯವನ್ನುಂಟು ಮಾಡುತ್ತದೆ. ಅಲ್ಲದೆ ಅನೇಕ ಪೋಷಕರು ಮಕ್ಕಳಿಗೆ ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಸೌಲಭ್ಯಗಳನ್ನು ಒದಗಿಸುವ ಸ್ಥಿತಿಯಲ್ಲಿರುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿ ಈ ವಯಸ್ಸಿನವರಿಗೆ ಶಾಲೆಗಳನ್ನು ಪ್ರಾರಂಭಿಸುವುದನ್ನು ಸೆಪ್ಟಂಬರ್‌ವರೆಗೆ ತಡೆಯುವಂತೆ ರಾಜ್ಯಕ್ಕೆ ನಿರ್ದೇಶನಗಳನ್ನು ಕೋರಿದರು.
ಶುಲ್ಕ ಭರಿಸಲು ಒತ್ತಾಯ
ಲಾಕ್‌ಡೌನ್ ಸಮಯದಲ್ಲಿ ಪೋಷ ಕರು ಎದುರಿಸುತ್ತಿರುವ ಹಣಕಾಸಿನ ಸಮಸ್ಯೆಗಳಿಂದಾಗಿ, 2020-21ರ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಶಾಲೆಗಳಿಗೆ ಸಾಮಾನ್ಯ ಶುಲ್ಕ ರಚನೆಗಾಗಿ ರಾಜ್ಯವು ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಅರ್ಜಿದಾರರು ತಿಳಿಸಿದರು. ಶೈಕ್ಷಣಿಕ ವರ್ಷಕ್ಕೆ ಯಾವುದೇ ತರಗತಿಗಳು ನಡೆಯದಿದ್ದರೂ ಕೆಲವು ಶಾಲೆಗಳು ಶುಲ್ಕವನ್ನು ಪಾವತಿಸಲು ಪೋಷಕರನ್ನು ಒತ್ತಾಯಿಸುವ ಅನೇಕ ಕಂಡುಬಂದಿವೆ. ಆದ್ದರಿಂದ ಶಾಲೆಗಳನ್ನು ತೆರೆಯುವ ಮಾರ್ಗಸೂಚಿಗಳನ್ನು ರೂಪಿಸಲು ನ್ಯಾಯಾಲಯದ ಮೇಲ್ವಿಚಾರಣೆ ಸಮಿತಿ ಇರಬೇಕು ಎಂದು ಅವರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.