ಜಿಪಂ ಅಧ್ಯಕ್ಷರಿಂದ ಪ್ರಗತಿ ಪರಿಶೀಲನೆ
Team Udayavani, Jun 18, 2020, 6:10 PM IST
ಹಿರಿಯೂರು: ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಸಾಮರ್ಥ್ಯಸೌಧದಲ್ಲಿ ಟಿ. ಯೋಗೀಶ್ ಹಿರೇಹಳ್ಳದ ಹೂಳೆತ್ತುವ ಕಾಮಗಾರಿ ವೀಕ್ಷಿಸಿದರು. ಪ್ರಗತಿ ಪರಿಶೀಲನಾ ಸಭೆ ನಡೆಸಿದರು
ಹಿರಿಯೂರು: ನಗರದ ಸಾಮರ್ಥ್ಯಸೌಧದಲ್ಲಿ ಬುಧವಾರ ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು, ತಾಲೂಕು ಪಂಚಾಯತ್ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಕೃಷಿ, ತೋಟಗಾರಿಕೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಹಣ, ಖರ್ಚು ವೆಚ್ಚಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೊರೊನಾ ಹಾವಳಿಯಿಂದ ಜನರ ಬದುಕು ಅಸ್ತವ್ಯಸ್ತವಾಗಿದ್ದು, ಅಧಿಕಾರಿಗಳು, ರೈತರ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವಂತೆ ಸೂಚನೆ ನೀಡಿದರು. ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ, ಔಷದಿ ವಿತರಣೆ ಮಾಡಬೇಕೆಂದರು.
ತೋಟಗಾರಿಕೆ ಇಲಾಖೆ ಅಧಿಕಾರಿ ತೋಟದಪ್ಪ ಇಲಾಖೆ ಯೋಜನೆಗಳ ಮಾಹಿತಿ ನೀಡಿ, ಕಳೆದ ಮೂರು ವರ್ಷದಿಂದ ತೆಂಗು, ನೇರಳೆ, ಹೂವು, ನುಗ್ಗೆ ಗಿಡಗಳು ನರೇಗಾ ಯೋಜನೆಯಡಿ ಇಲಾಖೆಗೆ ಬಂದಿಲ್ಲ ಎಂದರು. ಬೆಸ್ಕಾಂನ ತಿಮ್ಮರಾಯಪ್ಪ ಮಾತನಾಡಿ, ರೈತರು ಅಕ್ರಮ ಸಕ್ರಮ ಯೋಜನೆಯಡಿ ಸಕ್ರಮಗೊಳಿಸಿಕೊಳ್ಳಲು 30 ದಿನ ಕಾಲಾವಕಾಶ ನೀಡಲಾಗಿದೆ. ಇದರಿಂದ ರೈತರು ಹೆಚ್ಚಿನ ಪ್ರಯೋಜನ ಪಡೆಯುವಂತೆ ತಿಳಿಸಿದರು.
ತಾಲೂಕಿನ 7 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಈಗಾಗಲೇ ಎಲ್ಲ ಸಿದ್ಧತೆ ಮಾಡಲಾಗಿದೆ, ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಪ್ರತಿ ಕೊಠಡಿಗೆ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಹೋಬಳಿವಾರು ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬಂದು ಹೋಗಲು ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು. ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ, ಉಪಾಧ್ಯಕ್ಷೆ ಪುಷ್ಪಾ ರಂಗನಾಥ್, ಜಿಪಂ ಸದಸ್ಯರಾದ ಆರ್. ನಾಗೇಂದ್ರ ನಾಯ್ಕ, ಗೀತಾ ನಾಗಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.