![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 18, 2020, 9:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಾವೇರಿ: ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅವರ ಭವಿಷ್ಯ ಉಜ್ವಲಗೊಳಿಸಲು ಕಾರಣನಾಗಬೇಕಾದ ಶಿಕ್ಷಕನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಜಿಲ್ಲೆಯ ಶಿಗ್ಗಾವಿ ತಾಲೂಕಿನಿಂದ ವರದಿಯಾಗಿದೆ.
ಮನೆ ಪಾಠಕ್ಕೆಂದು ಬರುತ್ತಿದ್ದ ವಿದ್ಯಾರ್ಥಿನಿಯನ್ನು ತನ್ನ ಲೈಂಗಿಕ ಉದ್ದೇಶಕ್ಕಾಗಿ ಬಳಸಿಕೊಂಡ ಶಿಕ್ಷಕ ಇದೀಗ ಅವಳ ಭವಿಷ್ಯವನ್ನೇ ಕತ್ತಲಿಗೆ ದೂಡಿದ ಪ್ರಸಂಗ ನಡೆದಿದೆ.
ಈ ರೀತಿಯಾಗಿ ತನ್ನ ವಿದ್ಯಾರ್ಥಿನಿಯನ್ನೇ ಲೈಂಗಿಕ ತೃಷೆ ತೀರಿಸಿಕೊಳ್ಳಲು ಬಳಸಿಕೊಂಡ ಶಿಕ್ಷಕನ ಹೆಸರು ಪ್ರವೀಣ ಕುಮಾರ ಚನ್ನಬಸಪ್ಪ ಮರಿಯಣ್ಣನವರ. ಈತ ಶಿಗ್ಗಾವಿ ತಾಲೂಕು ಅಂದಲಗಿ ಗ್ರಾಮದವನಾಗಿದ್ದು ನಗರದ ವಿಶ್ವೇಶ್ವರಯ್ಯ ಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ.
ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಯ ಮನೆಗೆ ಬಂದ ಶಿಕ್ಷಕ, ಗಣಿತ ಪಾಠ ಹೇಳಿಕೊಡುವ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಶಿಕ್ಷಕನ ಈ ಹೇಯ ಕೃತ್ಯದಿಂದಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಇದೀಗ ಗರ್ಭಿಣಿಯಾಗಿದ್ದಾಳೆ.
ಜೂ.17ರಂದು ಸಂತ್ರಸ್ತ ವಿದ್ಯಾರ್ಥಿನಿಯು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಹೋದ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದ್ದು, ಇದೀಗ ವಿದ್ಯಾರ್ಥಿನಿಯೇ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರನ್ನು ದಾಖಲಿಸಿದ್ದಾಳೆ.
ಕಳೆದ ಜನವರಿಯಲ್ಲಿ ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆಕೆಯ ಮನೆಗೆ ಬಂದಿದ್ದ ಶಿಕ್ಷಕ ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದೀಗ ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.