ಮಾಸ್ಕ್ ಧರಿಸುವ ನಿಯಮ ಪಾಲಿಸಿ: ಡಿಸಿ
ಜಿಲ್ಲಾದ್ಯಂತ ಮಾಸ್ಕ್ ದಿನಾಚರಣೆ, ಜನ ಜಾಗೃತಿ ಅಭಿಯಾನ
Team Udayavani, Jun 19, 2020, 5:22 AM IST
ಮಹಾನಗರ: ಕೋವಿಡ್-19 ನಿಯಂತ್ರಿಸುವ ಸಲುವಾಗಿ ಎಲ್ಲ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮನೆಯಿಂದ ಹೊರಬರುವ ಸಮಯದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಕರೆ ನೀಡಿದ್ದಾರೆ.
ಗುರುವಾರ ರಾಜ್ಯಾದ್ಯಂತ ಮಾಸ್ಕ್ ದಿನಾಚರಣೆ ಕೈಗೊಂಡ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತದ ವತಿಯಿಂದ ಜಾಗೃತಿ ಕಾರ್ಯಕ್ರಮ ನಗರದಲ್ಲಿ ಜರಗಿತು.
ಕೋವಿಡ್-19 ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಸರಕಾರದ ಕಾರ್ಯಗಳ ಜತೆಗೆ ನಾಗರಿ ಕರ ಪಾತ್ರವೂ ಅತ್ಯಂತ ಅಮೂಲ್ಯ. ಅದರಲ್ಲಿಯೂ ಮನೆಯಿಂದ ಹೊರಗೆ ಬರುವಾಗ ಎಲ್ಲ ನಾಗರಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಮೂಲಕ ನಾಗರಿಕರು ತಮ್ಮಿಂದಾಗುವಷ್ಟು ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ಕೈ ಜೋಡಿಸಿ ದಂತಾಗುತ್ತದೆ. ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಸ್ಕ್ ಡೇ ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ಮಾತ ನಾಡಿದರು. ಮೇಯರ್ ದಿವಾಕರ ಪಾಂಡೇಶ್ವರ, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರ್, ಅಪರ ಜಿಲ್ಲಾಧಿಕಾರಿ ಎಂ.ಜಿ. ರೂಪಾ, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್, ನಿತಿನ್ ಕುಮಾರ್ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಕಚೇರಿಯಿಂದ ಹೊರಟ ಜಾಗೃತಿ ಮೆರವಣಿಗೆ ಸ್ಟೇಟ್‌ಬ್ಯಾಂಕ್‌ನ ಹ್ಯಾಮಿಲ್ಟನ್ ಸರ್ಕಲ್ ಮೂಲಕವಾಗಿ ತಿರುಗಿ ಮತ್ತೆ ಜಿಲ್ಲಾಧಿಕಾರಿ ಕಚೇರಿಗೆ ಬಂದು ಸಮಾಪ್ತಿಯಾಯಿತು.
“ಕೋವಿಡ್-19 ನಿಯಂತ್ರಣಕ್ಕೆ ಮಾಸ್ಕ್ ಧರಿಸಿ, ನಿಯಮ ಪಾಲಿಸಿ’
ಮೂಡುಬಿದಿರೆ: ಕೋವಿಡ್-19 ಸೋಂಕು ನಿಯಂತ್ರಿಸಲು ಎಲ್ಲರೂ ಮಾಸ್ಕ್ ಧರಿಸಬೇಕು; ಅಂತರ ಕಾಪಾಡಿಕೊಳ್ಳುವ ಜತೆಗೆ ಆಗಾಗ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈಗಳನ್ನು ತೊಳೆದುಕೊಳ್ಳುವುದು ಅಗತ್ಯ ಎಂದು ತಹಶೀಲ್ದಾರ್ ಅನಿತಾಲಕ್ಷ್ಮೀ ಹೇಳಿದರು.
ಮೂಡುಬಿದಿರೆ ತಾಲೂಕು ಆಡಳಿತ ವತಿಯಿಂದ ಪುರಸಭೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಗುರುವಾರ ತಾಲೂಕು ಕಚೇರಿ ಆವರಣದಲ್ಲಿ “ಮಾಸ್ಕ್ ದಿನ’ದ ಅಂಗವಾಗಿ ಏರ್ಪಡಿಸಲಾದ “ಜಾಗೃತಿ ಜಾಥಾ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶಶಿಕಲಾ ಮಾತನಾಡಿ, ಕೋವಿಡ್-19 ಸೋಂಕು ತಡೆಗಟ್ಟಲು ಸರಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಎಲ್ಲರಿಗೂ ಒಳಿತಾಗುವುದು ಎಂದರು.
ಮೆರವಣಿಗೆ
ತಾಲೂಕು ಕಚೇರಿ ಆವರಣದಿಂದ ಹೊರಟ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಬಸ್‌ನಿಲ್ದಾಣ ಮೂಲಕ ಪುರಸಭೆ ಎದುರಿನ ರಸ್ತೆಯಲ್ಲಿ ಮುಂದುವರಿದು ತಹಶೀಲ್ದಾರ್ ಕಚೇರಿ ಎದುರು ಸಂಪನ್ನಗೊಂಡಿತು.
ಮಾಜಿ ಸಚಿವ ಅಭಯಚಂದ್ರ, ಜಿ.ಪಂ.ಸದಸ್ಯ ಕೆ.ಪಿ. ಸುಚರಿತ ಶೆಟ್ಟಿ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ತೋಡಾರು ದಿವಾಕರ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಇಂದೂ ಎಂ., ರೋಟರಿ ಕ್ಲಬ್ ಅಧ್ಯಕ್ಷ ಸಿ.ಎಚ್. ಅಬ್ದುಲ್ ಗಫೂರ್, ರೋಟರಿ ಶಾಲೆ ಸಂಚಾಲಕ ಡಾ| ಯತಿಕುಮಾರ್ ಸ್ವಾಮಿ ಗೌಡ, ಜವನೆರ್ ಬೆದ್ರದ ಸ್ಥಾಪಕ ಅಮರ್ ಕೋಟೆ, ಆಶಾ ಕಾರ್ಯಕರ್ತೆಯರು, ಪುರಸಭೆ ಸದಸ್ಯರು, ಗ್ರಾಮ ಲೆಕ್ಕಿಗರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.