18 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ
ಗುಜರಾತ್, ಮಧ್ಯ ಪ್ರದೇಶ, ರಾಜಸ್ಥಾನಗಳಲ್ಲಿ ತುರುಸಿನ ಸ್ಪರ್ಧೆ ; ಚುನಾವಣೆಗೆ ತಡೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
Team Udayavani, Jun 19, 2020, 6:00 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ/ಭೋಪಾಲ: ಹತ್ತು ರಾಜ್ಯಗಳಲ್ಲಿರುವ 18 ರಾಜ್ಯಸಭಾ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದೆ.
ಮತಗಳ ಎಣಿಕೆ ಸಂಜೆ 5 ಗಂಟೆಯ ಬಳಿಕ ನಡೆಯಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಒಟ್ಟು 24 ಸ್ಥಾನಗಳ ಪೈಕಿ 18 ಸ್ಥಾನಗಳ ಚುನಾವಣೆಯನ್ನು ಮುಂದೂಡಲಾಗಿತ್ತು.
ಗುಜರಾತ್ ಮತ್ತು ಆಂಧ್ರಪ್ರದೇಶಗಳಿಂದ ತಲಾ ನಾಲ್ಕು, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಿಂದ ತಲಾ ಮೂರು, ಝಾರ್ಖಂಡ್‌ನಿಂದ ಎರಡು, ಮಣಿಪುರ ಮತ್ತು ಮೇಘಾಲಯಗಳಿಂದ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ನಡೆಯುವುದು ಖಚಿತವಾಗಿದೆ. ಮಧ್ಯಪ್ರದೇಶದ ಮೂರು ರಾಜ್ಯಸಭಾ ಸ್ಥಾನಗಳ ಪೈಕಿ ಬಿಜೆಪಿ 2 ಹಾಗೂ ಕಾಂಗ್ರೆಸ್ 1 ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ.
ಅರ್ಜಿ ತಿರಸ್ಕೃತ: ಮತ್ತೊಂದೆಡೆ, ಗುಜರಾತ್‌ನಲ್ಲಿ ರಾಜ್ಯಸಭಾ ಚುನಾವಣೆಗೆ ತಡೆ ನೀಡುವಂತೆ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಿರಸ್ಕರಿಸಿದೆ. ಕಾಂಗ್ರೆಸ್ ನಾಯಕ ಪರೇಶ್ ಧನಾನಿ, ‘ರಾಜ್ಯಸಭಾ ಚುನಾವಣೆಯಲ್ಲಿ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಹೀಗಾಗಿ ಶುಕ್ರವಾರ ನಡೆಯಲಿರುವ ಚುನಾವಣೆಗೆ ತಡೆ ನೀಡಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ಗುಜರಾತ್‌ನಿಂದ ತೆರವಾಗಿರುವ 4 ರಾಜ್ಯಸಭಾ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ತನ್ನ ಶಾಸಕರನ್ನು ರೆಸಾರ್ಟ್‌ನಲ್ಲಿ ಇರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.