ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಪರಿಶೀಲನೆ
Team Udayavani, Jun 19, 2020, 4:41 AM IST
ಚಾಮರಾಜನಗರ: ಜಿಲ್ಲೆಯಲ್ಲಿ ಜೂನ್ 25ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೈಗೊಂಡಿರುವ ಸಿದ್ಧತೆಗಳನ್ನು ಡೀಸಿ ಡಾ. ಎಂ.ಆರ್.ರವಿ ಪರಿಶೀಲಿಸಿದರು. ನಗರದ ಜಿಲ್ಲಾಧಿಕಾರಿ ಗಳ ಕಚೇರಿ ಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು.
ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ನೀಡುವ ಜೊತೆಗೆ ಸಾಮಾಜಿಕ ಅಂತರದ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಯಲು ನಿಗಾವಹಿಸಬೇಕು ಎಂದರು. ಆರೋಗ್ಯ ತಪಾಸಣೆ: ಪರೀಕ್ಷಾ ಕೇಂದ್ರದ ಪ್ರವೇಶದ್ವಾರದಲ್ಲಿಯೇ ಆರೋಗ್ಯ ತಪಾ ಸಣಾ ಕೌಂಟರ್‌ಗಳನ್ನು ತೆರೆಯಲು ಸೂಚಿಸಲಾಗಿದೆ.
ಕೌಂಟರ್‌ಗಳಲ್ಲಿ ಆರೋಗ್ಯ ಸಿಬ್ಬಂದಿ ನೇಮಕ ಮಾಡ ಲಾಗಿದೆ. ಜೊತೆಗೆ ಇಲಾಖೆಯ ಅಧಿಕಾರಿ, ಸಿಬ್ಬಂದಿ ನಿಯೋಜಿಸಲಾಗಿದೆ. ನೇಮಕವಾಗಿರುವವರು ಸರಿಯಾದ ಸಮಯಕ್ಕೆ ವರದಿ ಮಾಡಿಕೊಂಡಿದ್ದಾ ರೆಯೇ ಎಂಬ ಬಗ್ಗೆ ಖಾತರಿ ಪಡಿಸಿಕೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಬಗ್ಗೆ ಮತ್ತೂಮ್ಮೆ ನಿಗಾವಹಿಸಿ ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಕರೆತಂದು ಪುನಃ ಗ್ರಾಮಗಳಿಗೆ ಕಳುಹಿಸಿಕೊಡಲು ವಿಶೇಷ ಗಮನ ನೀಡಬೇಕು ಎಂದು ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ನಿಖೀತಾ, ಡಿಎಚ್‌ಒ ಡಾ.ಎಂ.ಸಿ.ರವಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುರೇಶ್, ಪ.ಪೂ.ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜವರೇಗೌಡ, ಶ್ರೀನಿವಾಸ್, ಶಿವಶಂಕರ್, ಡಿವೈಎಸ್‌ಪಿ ನವೀನ್‌ಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.