ರಾಜಧಾನಿಯಲ್ಲಿ ಸಾವಿನ ಸಂಖ್ಯೆ ಹೆಚ್ಚಳ
Team Udayavani, Jun 19, 2020, 5:28 AM IST
ಬೆಂಗಳೂರು: ನಗರದಲ್ಲಿ ಸೋಂಕಿತರ ಸಾವು ದಿನೇ ದಿನೆ ಹೆಚ್ಚಳವಾಗುತ್ತಿದ್ದು, ಗುರುವಾರ ಮತ್ತೆ 8 ಮಂದಿ ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ 51ಕ್ಕೇರಿದ್ದು, ಇದರೊಂದಿಗೆ ಸೋಂಕಿತರ ಮರಣ ದರ ಶೇ. 6.04ಕ್ಕೆ ಹೆಚ್ಚಿದೆ. ರಾಜ್ಯದಲ್ಲಿ ಮರಣ ಪ್ರಮಾಣ ದರ 1.4 ಇದ್ದು, ನಗರದಲ್ಲಿ ಐದು ಪಟ್ಟು ಹೆಚ್ಚಿರುವುದು. ದಿನದಿಂದ ದಿನಕ್ಕೆ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ.
ನಗರದಲ್ಲಿ ಗುರುವಾರ 17 ಮಂದಿಗೆ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 844ಕ್ಕೆ ಏರಿಕೆಯಾದಂತಾಗಿದೆ. ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ 14 ಮಂದಿ ಬಿಡುಗಡೆಯಾಗಿದ್ದು, ಇನ್ನೂ 408 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನ ಹಿನ್ನೆಲೆ: ಪ್ರತಿದಿನ ಅನಾರೋಗ್ಯದಿಂದ ಸೋಂಕಿಗೆ ಒಳಗಾಗುವವರ ಸಂಖ್ಯೆ 30ಕ್ಕಿಂತ ಅಧಿಕವಾಗಿರುತ್ತಿತ್ತು.
ಆದರೆ, ಗುರುವಾರ ಕೊಂಚ ಇಳಿಮುಖವಾಗಿದ್ದು, ತೀವ್ರ ಅನಾರೋಗ್ಯದ 4 ಜನ, ತಮಿಳುನಾಡಿನಿಂದ ಬಂದ 3 ಜನ, ಉತ್ತರ ಪ್ರದೇಶ ಹಾಗೂ ಆಂಧ್ರಪ್ರದೇಶ ರಾಜ್ಯಗಳಿಂದ ಬಂದ ತಲಾ ಒಬ್ಬರು, ಪ್ರಾಥಮಿಕ ಸಂಪರ್ಕದಿಂದ 3 ಹಾಗೂ ಸಂಪರ್ಕ ಪತ್ತೆ ಹಚ್ಚಲಾಗುತ್ತಿರುವ 5 ಮಂದಿ ಸೇರಿ 17 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆ 51ಕ್ಕೆ ಏರಿಕೆ: ಗುರುವಾರ ಒಂದೇ ದಿನ ಐವರು ಪುರುಷರು ಹಾಗೂ ಮೂವರು ಮಹಿಳೆಯರು ಸೇರಿ ಒಟ್ಟು 8 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಬಿಹಾರದಿಂದ ನಗರಕ್ಕೆ ಬಂದಿದ್ದ 57 ವರ್ಷದ ವ್ಯಕ್ತಿ ಹಾಗೂ ಬಳ್ಳಾರಿಯಿಂದ ಬಂದಿದ್ದ 51 ವರ್ಷದ ವ್ಯಕ್ತಿಗಳು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ ಸೋಂಕು ಪತ್ತೆಯಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. 65 ವರ್ಷದ ವೃದ್ಧೆ ಬುಧವಾರ ರಾತ್ರಿ ಮೃತ ಪಟ್ಟಿದ್ದಾರೆ.
58 ವರ್ಷದ ಪುರುಷ, 39 ವರ್ಷದ ಮಹಿಳೆ, 40 ವರ್ಷದ ಮಹಿಳೆ, 68 ವರ್ಷದ ವೃದ್ಧ, 74 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆಯು ಗುರುವಾರ ಬಿಡು ಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಹಿರಿಯ ಪತ್ರಕರ್ತ ಚಂದ್ರು ಅವರ ಸಾವಿನ ಮಾಹಿತಿ ದಾಖಲಿಸಿಲ್ಲ. ಆದರೆ, ಬಿಬಿಎಂಪಿ ಮೂಲಗಳು ಅವರು ಸೋಂಕಿತರು ಎಂಬುದನ್ನು ಖಚಿತಪಡಿ ಸಿದ್ದಾರೆ. ಈವರೆಗೂ ಸೋಂಕಿನ ಸಂಪರ್ಕ ಪತ್ತೆಯಾಗಿಲ್ಲ. ಮೃತರ ಪತ್ನಿ ಹಾಗೂ ಇಬ್ಬರು ಮಕ್ಕಳ ಕ್ವಾರಂಟೈನ್ ಮಾಡಲಾಗಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
239ಕ್ಕೇರಿದ ಕಂಟೈನ್ಮೆಂಟ್ ವಲಯ: ಪ್ರತಿನಿತ್ಯ ಹೊಸ ಸೋಂಕಿತರು ಪತ್ತೆಯಾಗುತ್ತಿದ್ದು, ಕಂಟೈನ್ಮೆಂಟ್ ಪ್ರದೇಶಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಕಳೆದ 2 ದಿನಗಳಲ್ಲಿ 31 ಕಂಟೈನ್ಮೆಂಟ್ ವಲಯ ಹೆಚ್ಚಳವಾಗಿದ್ದು, ಗುರುವಾರದ ಅಂತ್ಯಕ್ಕೆ 239 ಪ್ರದೇಶಗಳಲ್ಲಿ ಕಂಟೈನ್ಮೆಂಟ್ ಜಾರಿಯಲ್ಲಿದೆ. ಒಟ್ಟಾರೆ 277 ಪ್ರದೇಶಗಳಲ್ಲಿ ಸೋಂಕಿತರು ಪತ್ತೆಯಾಗಿದ್ದು, 38 ಪ್ರದೇಶಗಳಲ್ಲಿ ಕಂಟೈನ್ಮೆಂಟ್ ತೆರವು ಮಾಡಲಾಗಿದೆ.
ಬಿಎಂಟಿಸಿಯಲ್ಲಿ ನಾಲ್ಕಕ್ಕೇರಿದ ಸೋಂಕು: ರಾಜರಾಜೇಶ್ವರಿ ನಗರ ಬಿಎಂಟಿಸಿ ಘಟಕದ ಚಾಲಕನೊಬ್ಬನಲ್ಲಿ ಕೋವಿಡ್ 19 ಕಾಣಿಸಿಕೊಂಡಿದ್ದು, ಈ ಮೂಲಕ ಸಂಸ್ಥೆಯಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಕೆ.ಆರ್. ಮಾರುಕಟ್ಟೆ-ಹಾಗಲಹಳ್ಳಿ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೂರು ತಿಂಗಳು ಸುದೀರ್ಘ ರಜೆಯಲ್ಲಿದ್ದ ಸೋಂಕಿತ ಚಾಲಕರು, ಹತ್ತು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಜೂ. 11ರಂದು ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ಸ್ವಂತ ಊರು ಮೈಸೂರಿನ ಎಚ್.ಡಿ.ಕೋಟೆ ಸಮೀಪದ ಹಳ್ಳಿಗೆ ತೆರಳಿದ್ದರು.
ಜೂ. 12ರಂದು ಜ್ವರ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ತೆರಳಿದ್ದಾರೆ. ಈ ವೇಳೆ ಅಲ್ಲಿನ ವೈದ್ಯಕೀಯ ಸಿಬ್ಬಂದಿ ಮೈಸೂರಿನಲ್ಲಿ ಸೋಂಕು ಪರೀಕ್ಷೆಗೆ ಒಳಪಡುವಂತೆ ಸೂಚಿಸಿದ್ದು, ಅದರಂತೆ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದಾರೆ. ಭಾನುವಾರ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಆದರೆ, ವಾರದ ಹಿಂದೆಯೇ ಅವರು ಕರ್ತವ್ಯ ಮುಗಿಸಿರುವುದರಿಂದ ಪ್ರಾಥಮಿಕ ಸಂಪರ್ಕದಲ್ಲಿದ್ದವರು ತುಂಬಾ ವಿರಳ ಎಂದು ಬಿಎಂಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಾಲ್ವರು ಸೊಂಕಿತರಲ್ಲಿ ಬಿಎಂಟಿಸಿ ಸಿಬ್ಬಂದಿಯಲ್ಲಿ ಮೂವರು ಚಾಲಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.