ಮಾಸ್ಕ್ ಧರಿಸಿ ಆರೋಗ್ಯವಾಗಿರಿ
Team Udayavani, Jun 19, 2020, 6:00 AM IST
ದೇವನಹಳ್ಳಿ: ಪ್ರತಿಯೊಬ್ಬರೂ ಮನೆಯಿಂದ ಹೊರಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಂಸದ ಬಿ.ಎನ್. ಬಚ್ಚೇಗೌಡ ತಿಳಿಸಿದರು. ನಗರದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಪುರಸಭೆಯಿಂದ ಹಮ್ಮಿಕೊಂಡಿದ್ದ ಮಾಸ್ಕ್ ದಿನದ ಅಂಗವಾಗಿ ಕೋವಿಡ್ 19 ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋವಿಡ್ 19ದಿಂದ ಬದುಕಿಗೊಂದಿಷ್ಟು ಶಿಸ್ತು ಬಂದಿದ್ದು, ಪ್ರತಿಯೊಬ್ಬರೂ ಪಾಲಿಸಬೇಕು. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್ನಿಂದ ಆಗಾಗ್ಗೆ ಕೈ ಸ್ವತ್ಛಗೊಳಿ ಸಬೇಕು. 65 ವರ್ಷ ಮೇಲ್ಪಟ್ಟವರು ಹೆಚ್ಚು ಓಡಾಡಬಾರದು. ಮಕ್ಕಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದರು. ಶಾಸಕ ಎಲ್.ಎನ್.ನಾರಾಯಣಸ್ವಾಮಿ ಮಾತ ನಾಡಿ, ಕೋವಿಡ್ 19 ಜೊತೆ ಬದುಕಬೇಕಿದೆ. ಎಲ್ಲ ಕಾಯಿಲೆಗಳಂತೆ ಕೋವಿಡ್ 19 ಒಂದು ಎಂದರು.
ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಅಜಿತ್ ಕುಮಾರ್ ರೈ, ಪುರಸಭೆ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್, ಜಿಪಂ ಸದಸ್ಯ ಲಕ್ಷ್ಮೀನಾರಾಯಣ್, ಕೆ.ಸಿ. ಮಂಜುನಾಥ್, ತಾಪಂ ಅಧ್ಯಕ್ಷೆ ಶಶಿಕಲಾ, ಹಾಪ್ಕಾಮ್ಸ್ ಉಪಾಧ್ಯಕ್ಷ ಬಿ. ಮುನೇಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ತಾಪಂ ಮಾಜಿ ಅಧ್ಯಕ್ಷ ಬಿ.ಕೆ.ಶಿವಪ್ಪ, ಖಾದಿ ಬೋಡ್ ì ಅಧ್ಯಕ್ಷ ನಾಗೇಗೌಡ, ಜಿಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ ಹಾಗೂ ಪುರಸಭೆ ಸದಸ್ಯರು, ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.