ಇಬ್ಬರು ವಿದ್ಯಾರ್ಥಿಗಳಲ್ಲಿ ದೇಹದ ಉಷ್ಣತೆ ಹೆಚ್ಚು: ಕೆಲಕಾಲ ಆತಂಕ
Team Udayavani, Jun 19, 2020, 6:10 AM IST
ಗದಗ: ಪಿಯು ಇಂಗ್ಲಿಷ್ ವಿಷಯದ ಪರೀಕ್ಷೆ ಬರೆಯಲು ಜೆಟಿ ಕಾಲೇಜಿಗೆ ಬಂದ ಇಬ್ಬರು ವಿದ್ಯಾರ್ಥಿಗಳಲ್ಲಿ ದೇಹದ ಉಷ್ಣತೆ ಹೆಚ್ಚು ಕಂಡು ಬಂದಿದ್ದರಿಂದ ಕೆಲಕಾಲ ಆತಂಕ ಮೂಡಿಸಿತು.
ನಗರದ ಹಾತಲಗೇರಿ ನಾಕಾದಲ್ಲಿರುವ ಕೆಎಲ್‌ಇ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಗೆ ಹಾಜರಾಗಿದ್ದವರ ಪೈಕಿ ಇಬ್ಬರು ವಿದ್ಯಾರ್ಥಿಗಳಲ್ಲಿ ನಿಗದಿಗಿಂತ ಗರಿಷ್ಠ ಉಷ್ಣಾಂಶ ಕಂಡು ಬಂದಿತ್ತು. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪರೀಕ್ಷಾ ಕೇಂದ್ರಕ್ಕೆ ಧಾವಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಸದ್ಯ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ, ನಿರ್ಭಯವಾಗಿ ಪರೀಕ್ಷೆ ಎದುರಿಸುವಂತೆ ವಿದ್ಯಾರ್ಥಿಗಳ ಮನವೊಲಿಸಿದರು.
ಈ ವಿದ್ಯಾರ್ಥಿಗಳು ಧಾರವಾಡ ಜಿಲ್ಲೆ ಅಣ್ಣಿಗೇರಿ ಕಾಲೇಜಿನವರಾಗಿದ್ದು, ಗದಗ ಜೆಟಿ ಕಾಲೇಜು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಂಡಿದ್ದರು. ಪರೀಕ್ಷೆ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಸರಿಯಾಗಿ ಊಟ, ನಿದ್ರೆ ಮಾಡಿರದೇ ಜ್ವರ ಕಾಣಿಸಿಕೊಂಡಿರಬಹುದು. ಸದ್ಯಕ್ಕೆ ಪರೀಕ್ಷೆ ಎದುರಿಸಿ, ನಂತರ ಮನೆಯಲ್ಲಿ ಸ್ವಯಂ ಕ್ವಾರಂಟೈನ್ ನಲ್ಲಿರಬೇಕು. ಕೋವಿಡ್ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಗೆ ಭೇಟಿ ನೀಡುವಂತೆ ಸೂಚಿಸಿದ್ದಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದರು.
ಸಾಮಾಜಿಕ ಅಂತರ ಇರಲಿಲ್ಲ: ಜಿಲ್ಲೆಯಲ್ಲಿ ಗುರುವಾರ ನಡೆದ ಪಿಯು ಇಂಗ್ಲಿಷ್ ವಿಷಯದ ಪರೀಕ್ಷೆ ವೇಳೆ ಕೆಲ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ, ಮಾಸ್ಕ್ ಧರಿಸಬೇಕೆಂಬ ಆದೇಶವನ್ನು ಗಾಳಿಗೆ ತೂರಿದ್ದರೆ, ಇಲ್ಲಿನ ಮುನ್ಸಿಪಲ್ ಕಾಲೇಜು, ವಿಡಿಎಸ್‌ಟಿ ಹಾಗೂ ಜೆಟಿ ಕಾಲೇಜಿಗೆ ಆಗಮಿಸಿದ್ದ ಪರೀಕ್ಷಾರ್ಥಿಗಳ ಪೈಕಿ ಕೆಲವರು ಮಾಸ್ಕ್ ಇಲ್ಲದೇ ಪರದಾಡುವಂತಾಯಿತು. ಅಂತಹ ವಿದ್ಯಾರ್ಥಿಗಳಿಗೆ ಆಯಾ ಪರೀಕ್ಷಾ ಕೇಂದ್ರಗಳಿಂದಲೇ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.