ರಾಜ್ಯದ ವಿವಿಧೆಡೆ ಭಾರೀ ಮಳೆ: ಕೊಲ್ಲಾಪುರದ 60 ಹಳ್ಳಿಗಳ ಸಂಪರ್ಕ ಕಡಿತ

Team Udayavani, Jun 19, 2020, 8:50 AM IST

ರಾಜ್ಯದ ವಿವಿಧೆಡೆ ಭಾರೀ ಮಳೆ: ಕೊಲ್ಲಾಪುರದ 60 ಹಳ್ಳಿಗಳ ಸಂಪರ್ಕ ಕಡಿತ

ಮುಂಬಯಿ, ಜೂ. 18: ಮುಂಬಯಿ ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದೆ. ಗುರುವಾರ ಮುಂಜಾನೆಯಿಂದ ಮುಂಬಯಿಯ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ಜಮಾವಣೆಯಾಗಿರುವ ಘಟನೆಗಳು ಸಂಭವಿಸಿವೆ.

ಉಪನಗರಗಳಾದ ದಾದರ್‌, ಗೋರೆಗಾವ್‌, ಬೊರಿವಲಿ, ಕಾಂದಿವಲಿ ಮತ್ತು ಮಲಾಡ್‌ ಪ್ರದೇಶಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಕಾಂದಿವಲಿಯ (ಗಣೇಶನಗರ) ಓಲ್ಡ್ ಲಿಂಕ್‌ ರೋಡ್‌ನ‌ಲ್ಲಿ ಚರಂಡಿ ನೀರು ರಸ್ತೆಗೆ ಹರಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ವಸಾಯಿ, ವಿರಾರ್‌ ಮತ್ತು ನಲಸೋಪರ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು, ಆದರೆ ಮಧ್ಯಾಹ್ನದ ಅನಂತರ ಅಲ್ಲಿಯೂ ಭಾರೀ ಮಳೆಯಾಗುತ್ತಿದೆ.  ನಗರಕ್ಕೆ ನೆರೆಯ ಥಾಣೆ, ಡೊಂಬಿವಲಿ, ಕಲ್ಯಾಣ್, ಬದ್ಲಾಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮುಂದಿನ ನಾಲ್ಕು ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ.

ಸಂಪರ್ಕ ಕಡಿತ :  ಕೊಲ್ಲಾಪುರದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸುಮಾರು 60 ಹಳ್ಳಿಗಳು ಸಂಪರ್ಕ ಕಡಿದುಕೊಂಡಿವೆ. ಈವರೆಗೆ ಜಿಲ್ಲೆಯ 25 ಅಣೆಕಟ್ಟುಗಳು ತುಂಬಿ ಹರಿಯುತ್ತಿದ್ದು, ಇದರ ಪರಿಣಾಮವಾಗಿ 60 ಹಳ್ಳಿಗಳೊಂದಿಗಿನ ನೇರ ಸಂಪರ್ಕ ಕಡಿದುಹೋಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಂಚಗಂಗಾ ನದಿಯ ನೀರಿನ ಮಟ್ಟ 25 ಅಡಿಗಳಿಗೆ ಏರಿದೆ. ಕೊಲ್ಲಾಪುರ ಜಿಲ್ಲೆಯ 12 ಅಣೆಕಟ್ಟು ಪ್ರದೇಶಗಳಲ್ಲಿ 24 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಕೊಲ್ಲಾಪುರ ನಗರ ಸೇರಿದಂತೆ ಗಗನ್‌ಬೌಡ ಮತ್ತು ರಾಧಾನಗರಿ ತಾಲೂಕುಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನಂದೂರ್‌ಬಾರ್‌ನ ಸಾತ್ಪುಡಾದ ಬೆಟ್ಟಗಳಲ್ಲಿ ಭಾರೀ ಮಳೆಯಿಂದಾಗಿ ಅನೇಕ ನದಿಗಳು ಮತ್ತು ತೊರೆಗಳು ಉಕ್ಕಿ ಹರಿಯಲಾರಂಭಿಸಿವೆ.

ಸುಸಾರಿ ನದಿಯಲ್ಲಿ ಉಂಟಾದ ಪ್ರವಾಹಕ್ಕೆ ನದಿಯ ಮೇಲಿರುವ ಸೇತುವೆಯ ನಿರ್ಮಾಣಕ್ಕೆ ಇರಿಸಲಾಗಿದ್ದ ಅಗತ್ಯ ವಸ್ತುಗಳು ಕೊಚ್ಚಿ ಹೋಗಿವೆ. ಸ್ಥಳದಲ್ಲಿದ್ದ ಜೆಸಿಬಿ ಹಾಗೂ ದೊಡ್ಡ ಕ್ರೇನ್‌ಗಳು ಪ್ರವಾಹದ ನೀರಿನಲ್ಲಿ ಸಿಲುಕಿಕೊಂಡಿವೆ. ಪ್ರವಾಹವು ಗುತ್ತಿಗೆದಾರನಿಗೆ ದೊಡ್ಡ ಹಾನಿಯನ್ನುಂಟುಮಾಡಿದೆ. ಕಳೆದ 3 ದಿನಗಳಿಂದ ಸಾತ್ಪುಡಾದ ಬೆಟ್ಟಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಈ ಸ್ಥಳದಲ್ಲಿ ಹುಟ್ಟುವ ನದಿಗಳು ಮತ್ತು ತೊರೆಗಳ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆಯಿದೆ. ನದಿಗಳ ಉದ್ದಕ್ಕೂ ನೆಲೆಸಿರುವ ಜನರಿಗೆ ಆಡಳಿತವು ಎಚ್ಚರಿಕೆ ನೀಡಿದೆ. ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತವು ನಾಗರಿಕರಿಗೆ ಮನವಿ ಮಾಡಿದೆ. ಕಳೆದ 2-3 ದಿನಗಳಿಂದ ರತ್ನಗಿರಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದೆ. ಇಲ್ಲಿನ ಸಂಗಮೇಶ್ವರ ಪ್ರದೇಶದಲ್ಲಿ ಮಳೆಯಿಂದಾಗಿ ಹೆಚ್ಚಿನ ಹಾನಿಯಾಗಿದೆ. ಭಾರೀ ಮಳೆಯಿಂದಾಗಿ ಪ್ರದೇಶದಲ್ಲಿನ ನದಿಗಳು ಮತ್ತು ತೊರೆಗಳು ತುಂಬಿ ಹರಿಯಲು ಪ್ರಾರಂಭಿಸಿವೆ.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.