ಜಿಂದಾಲ್ ಕಾರ್ಖಾನೆ ಸ್ಥಗಿತಗೊಳಿಸಲು ಒತ್ತಾಯ
Team Udayavani, Jun 19, 2020, 1:27 PM IST
ಹಗರಿಬೊಮ್ಮನಹಳ್ಳಿ: ಯುವಶಕ್ತಿ ವೇದಿಕೆ ಪದಾಧಿಕಾರಿಗಳು ಜಿಂದಾಲ್ ಕಾರ್ಖಾನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಹಗರಿಬೊಮ್ಮನಹಳ್ಳಿ: ಕೋವಿಡ್ ತಡೆಯುವ ಹಿನ್ನೆಲೆಯಲ್ಲಿ ಜಿಲ್ಲೆಯ ಜಿಂದಾಲ್ ಕಾರ್ಖಾನೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕನ್ನಡ ಯುವಶಕ್ತಿ ವೇದಿಕೆ ಮತ್ತು ಕೋವಿಡ್ 19 ವಾಲೈಂಟರ್ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಯುವಶಕ್ತಿ ವೇದಿಕೆ ಸಂತೋಷ ಪೂಜಾರ್ ಮಾತನಾಡಿ, ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಕೋವಿಡ್ ಸೋಂಕಿತರಲ್ಲಿ ಬಹುತೇಕರು ಜಿಂದಾಲ್ ಕಾರ್ಖಾನೆಯವರಾಗಿದ್ದರೆ. ಜಿಲ್ಲೆಯಲ್ಲಿ ಕೋವಿಡ್ ಹಾವಳಿ ನಿರಂತರವಾಗಿದೆ. ಈ ಹಿನ್ನೆಲೆಯಲ್ಲಿ ಸಮುದಾಯದಲ್ಲಿ ಸೋಂಕು ಹರಡದಂತೆ ಕಾರ್ಖಾನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗದಂತೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕೂಡಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಈ ಕಂಪನಿಯನ್ನು ಸೀಲ್‌ಡೌನ್ ಮಾಡಬೇಕು ಎಂದು ಒತ್ತಾಯಿಸಿದರು.
ವೇದಿಕೆಯ ಅಧ್ಯಕ್ಷ ಸಂಚಿ ಶಿವಕುಮಾರ್, ಪದಾಧಿಕಾರಿಗಳಾದ ಚಂದ್ರಶೇಖರ, ಪೋಟೋ ವೀರೇಶ, ಎಂ. ಗುರುಬಸವರಾಜ, ಚಿಂತ್ರಪಳ್ಳಿ ನಾಗರಾಜ, ಅವಿನಾಶ ಜಾದವ್, ಫೋಟೋ ರಾಮಣ್ಣ, ಹರ್ಷಾಗೌಡ, ಜಿ.ಎಂ.ಜಗದೀಶ, ವಿನಯ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.