ಒಟಿಪಿ ಇರಲಿ ಬಯೋಮೆಟ್ರಿಕ್‌ ಬೇಡ

Team Udayavani, Jun 19, 2020, 3:35 PM IST

ಒಟಿಪಿ ಇರಲಿ ಬಯೋಮೆಟ್ರಿಕ್‌ ಬೇಡ

ಸಾಂದರ್ಭಿಕ ಚಿತ್ರ

ಗಂಗಾವತಿ: ಕೋವಿಡ್‌-19 ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಳೆದ ಮೂರು ತಿಂಗಳಿಂದ ಪಡಿತರ ಕಾರ್ಡುದಾರರಿಗೆ ಮೊಬೈಲ್‌ ಒಟಿಪಿ ಮೂಲಕ ಆಹಾರಧಾನ್ಯ ವಿತರಣೆಗೆ ಆಹಾರ ಇಲಾಖೆ ಕ್ರಮ ಕೈಗೊಂಡಿತ್ತು. ಆದರೀಗ ಸರ್ವರ್‌ನಲ್ಲಿ ತಾಂತ್ರಿಕ ತೊಂದರೆ ನೆಪವೊಡ್ಡಿ ಬಯೋಮೆಟ್ರಿಕ್‌ ಪಡೆದು ಜೂನ್‌ ತಿಂಗಳ ಪಡಿತರ ವಿತರಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೋವಿಡ್‌-19 ರೋಗ ಉಲ್ಬಣಗೊಳ್ಳುತ್ತಿರುವ ಮಧ್ಯೆ ಆಹಾರ ಇಲಾಖೆ ಅಧಿಕಾರಿಗಳ ಈ ಕ್ರಮದಿಂದ ಜನರು ಭಯಗೊಳ್ಳುವಂತಾಗಿದೆ. ಒಟಿಪಿ ಮೂಲಕ ಆಹಾರ ಧಾನ್ಯ ವಿತರಿಸಬೇಕು. ವಲಸೆ ಹೋಗಿದ್ದವರು ಮರಳಿ ಬಂದಿರುವ ಕಾರಣ ಸಾಮಾಜಿಕ ಅಂತರ ಕಾಪಾಡಿಕೊಂಡು ಮೊಬೈಲ್‌ ನಂಬರ್‌ಗೆ ಒಟಿಪಿ ಬರುವಂತೆ ಮಾಡಿ ಪಡಿತರ ವಿತರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸರತಿ ಸಾಲಿನಲ್ಲಿ ನಿಂತು ಬಯೋಮೆಟ್ರಿಕ್‌ ಒತ್ತುವ ಸಂದರ್ಭದಲ್ಲಿ ಪ್ರತಿಯೊಬ್ಬರು ಸ್ಯಾನಿಟೈಜರ್‌ ಹಚ್ಚಿಕೊಳ್ಳುತ್ತಿಲ್ಲ. ಕೊರೊನಾ ಸೋಂಕು ತಗುಲಿದ ವ್ಯಕ್ತಿಯೇನಾದರೂ ಬಯೋಮೆಟ್ರಿಕ್‌ ಕೊಟ್ಟರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಸರಕಾರ ಮೊದಲಿನಂತೆ ಒಟಿಪಿ ಮೂಲಕ ಪಡಿತರ ವಿತರಿಸಬೇಕು. ಬಯೋಮೆಟ್ರಿಕ್‌ ಮೂಲಕ ಪಡಿತರ ವಿತರಿಸುವಂತೆ ಆದೇಶ ಮಾಡಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕೊವೀಡ್‌-19 ತೀವ್ರ ಹರಡುತ್ತಿರುವ ಈ ಸಂದರ್ಭದಲ್ಲಿ ಒಟಿಪಿ ಮೂಲಕ ಪಡಿತರ ವಿತರಿಸುವ ಪದ್ಧತಿ ಕೈ ಬಿಟ್ಟು ಬಯೋಮೆಟ್ರಿಕ್‌ ಮೂಲಕ ಪಡಿತರವಿತರಿಸಲು ಆದೇಶಿಸಿರುವುದು ಸರಿಯಲ್ಲ. ಹೀಗಾಗಿ ಪರಸ್ಪರ ಮುಟ್ಟುವಂತಾಗಿ ಕೋವಿಡ್ ಹರಡುವ ಸಾಧ್ಯತೆಯಿದೆ. ಒಟಿಪಿ ಮೂಲಕ ಪಡಿತರ ವಿತರಿಸಬೇಕು. ಸರ್ವರ್‌ ತಾಂತ್ರಿಕ ನೆಪವೊಡ್ಡಿ ಬಯೋಮೆಟ್ರಿಕ್‌ ಪುನಃ ಜಾರಿ ಮಾಡಿದರೆ ದೊಡ್ಡ ಅನಾಹುತವಾಗುವ ಸಾಧ್ಯತೆಯಿದೆ. –ಬಿಪಿಎಲ್‌ ಕಾರ್ಡ್‌ದಾರರು.

ಸರ್ವರ್‌ ತಾಂತ್ರಿಕ ತೊಂದರೆಯಿಂದ ಪಡಿತರ ವಿತರಣೆ ವಿಳಂಬವಾಗುವ ಕುರಿತು ಮಾಹಿತಿ ಇದೆ. ಬಯೋಮೆಟ್ರಿಕ್‌ ಪದ್ಧತಿ ಮೂಲಕ ಪಡಿತರ ವಿತರಣೆ ಆದೇಶ ಮಾಡಿಲ್ಲ. ಸರ್ವರ್‌ ತೊಂದರೆ ಸರಿಪಡಿಸಿ ಒಟಿಪಿ ಪದ್ಧತಿಯಂತೆ ಪಡಿತರ ವಿತರಿಸಬೇಕು. ಕೋವಿಡ್‌-19 ಹರಡದಂತೆ ಸಾಮಾಜಿಕ ಅಂತರ ಕಾಪಾಡಿ ಒಟಿಪಿ ಪಡೆದು ಪಡಿತರ ವಿತರಿಸಲು ಕೂಡಲೇ ಆದೇಶ ಹೊರಡಿಸಲಾಗಿದೆ.- ನಾರಾಯಣ ರೆಡ್ಡಿ, ಉಪ ನಿರ್ದೇಶಕರು, ಜಿಲ್ಲಾ ಆಹಾರ ಇಲಾಖೆ

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!

ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.